ಬ್ರ್ಯಾಂಡ್ ಬೆಂಗಳೂರು ಹೆಸರಿನಲ್ಲಿ ಬಿಬಿಎಂಪಿ ಅಧಿಕಾರಿಗಳು ಬೀದಿ ಬದಿ ವ್ಯಾಪಾರಿಗಳನ್ನು ಒಕ್ಕಲೆಬ್ಬಿಸುತ್ತಿದ್ದಾರೆ ಎಂದು ಆರೋಪಿಸಿ ಕೆ.ಆರ್.ಪುರದಿಂದ ಸ್ವಾತಂತ್ರ್ಯ ಉದ್ಯಾನವನಕ್ಕೆ ಆಗಮಿಸಿದ ನೂರಾರು ರೈತರು, ವ್ಯಾಪಾರಿಗಳು ತಟ್ಟೆ, ಸೌಟು ಹಿಡಿದು ಬೃಹತ್ ಪ್ರತಿಭಟನೆ ನಡೆಸಿದರು.
ಬೆಂಗಳೂರು (ಆ.1) : ಬ್ರ್ಯಾಂಡ್ ಬೆಂಗಳೂರು ಹೆಸರಿನಲ್ಲಿ ಬಿಬಿಎಂಪಿ ಅಧಿಕಾರಿಗಳು ಬೀದಿ ಬದಿ ವ್ಯಾಪಾರಿಗಳನ್ನು ಒಕ್ಕಲೆಬ್ಬಿಸುತ್ತಿದ್ದಾರೆ ಎಂದು ಆರೋಪಿಸಿ ಕೆ.ಆರ್.ಪುರದಿಂದ ಸ್ವಾತಂತ್ರ್ಯ ಉದ್ಯಾನವನಕ್ಕೆ ಆಗಮಿಸಿದ ನೂರಾರು ರೈತರು, ವ್ಯಾಪಾರಿಗಳು ತಟ್ಟೆ, ಸೌಟು ಹಿಡಿದು ಬೃಹತ್ ಪ್ರತಿಭಟನೆ ನಡೆಸಿದರು.
ಅಖಿಲ ಕರ್ನಾಟಕ ರೈತರು ಮತ್ತು ವ್ಯಾಪಾರಿಗಳ ಒಕ್ಕೂಟ ಹಾಗೂ ಭಾರತೀಯ ಸೇವಾ ಸಮಿತಿಯ ನೇತೃತ್ವದಲ್ಲಿ ಕೆ.ಆರ್.ಪುರ ಸಂತೆ ಮೈದಾನದಿಂದ ಟಿನ್ ಫ್ಯಾಕ್ಟರಿವರೆಗೂ ಕಾಲ್ನಡಿಗೆ ಜಾಥಾ ನಡೆಸಿದ ಪ್ರತಿಭಟನಾಕಾರರು, ಬಳಿಕ ಟೆಂಪೋದಲ್ಲಿ ಸ್ವಾತಂತ್ರ್ಯ ಉದ್ಯಾನವನಕ್ಕೆ ಆಗಮಿಸಿದರು. ಹೆಚ್ಚಿನ ಸಂಖ್ಯೆಯಲ್ಲಿದ್ದ ಮಹಿಳೆಯರು ತಟ್ಟೆಗಳಿಗೆ ಸೌಟುಗಳಿಂದ ಬಡಿದು ಬಿಬಿಎಂಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
‘ಬ್ರ್ಯಾಂಡ್ ಬೆಂಗಳೂರು’ ನೆಪದಲ್ಲಿ ಕಳೆದ 20 ದಿನಗಳಿಂದ ರೈತರು, ಬೀದಿ ಬದಿ ವ್ಯಾಪಾರಿಗಳನ್ನು ಒಕ್ಕಲೆಬ್ಬಿಸಲಾಗುತ್ತಿದೆ. ವ್ಯಾಪಾರ ಮಾಡಿ ಬದುಕು ಸಾಗಿಸುತ್ತಿರುವ ಜೀವನದ ಜೊತೆ ಚೆಲ್ಲಾಟವಾಡಬೇಡಿ. ಇದು ಸಾಂಕೇತಿಕ ಪ್ರತಿಭಟನೆಯಾಗಿದೆ. ಒಕ್ಕಲೆಬ್ಬಿಸುವುದನ್ನು ನಿಲ್ಲಿಸದಿದ್ದರೆ ಆ.14 ರಂದು ಮಧ್ಯರಾತ್ರಿ ಕೆಪಿಸಿಸಿ ಕಚೇರಿ ಮುಂದೆ ಬೃಹತ್ ಪ್ರತಿಭಟನೆ ನಡೆಸಲಾಗುವುದುಎಂದು ಎಚ್ಚರಿಸಿದರು.
ಮುಂದಿನ ಪೀಳಿಗೆಗಾಗಿ ಭವಿಷ್ಯದ ಬೆಂಗಳೂರನ್ನು ನಿರ್ಮಿಸುವೆ: ಡಿ.ಕೆ.ಶಿವಕುಮಾರ್
ಈ ವೇಳೆ ಮಾತನಾಡಿದ ಒಕ್ಕೂಟದ ಅಧ್ಯಕ್ಷ ಎಲೆ ಶ್ರೀನಿವಾಸ್, ಬೀದಿ ಬದಿ ವ್ಯಾಪಾರಿಗಳನ್ನು ತೆರವು ಮಾಡುವುದರಿಂದ ನೂರಾರು ಕುಟುಂಬಗಳು ಬೀದಿಗೆ ಬೀಳುತ್ತವೆ. ಆದ್ದರಿಂದ ವ್ಯಾಪಾರಿಗಳಿಗೆ ಗುರುತಿನ ನೀಡಬೇಕು. ನಿಗಮ-ಮಂಡಳಿ ಸ್ಥಾಪಿಸಿ ಹಿತ ಕಾಯಬೇಕು ಎಂದು ಆಗ್ರಹಿಸಿದರು.
ಜನರ ಅನುಕೂಲಕ್ಕೆ ಬೀದಿಬದಿ ವ್ಯಾಪಾರಿಗಳ ತೆರವು: ಡಿಸಿಎಂ
ಪಾದಚಾರಿ ಮಾರ್ಗದಲ್ಲಿ ಜನರ ಓಡಾಟಕ್ಕೆ ಅನುಕೂಲ ಮಾಡಿಕೊಡಲು ಬೀದಿಬದಿ ವ್ಯಾಪಾರಿಗಳನ್ನು ತೆರವು ಮಾಡಲಾಗುತ್ತಿದೆ. ಈ ಕ್ರಮದಿಂದ ಸಮಸ್ಯೆಗೊಳಗಾಗುವ ಬೀದಿಬದಿ ವ್ಯಾಪಾರಿಗಳ ಹಿತ ಕಾಪಾಡಲು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್(DK Shivakumar) ಹೇಳಿದರು.
ಜ್ಞಾನಜ್ಯೋತಿ ಸಭಾಂಗಣದಲ್ಲಿ ಮಾತನಾಡಿ, ಪಾದಚಾರಿ ಮಾರ್ಗಗಳನ್ನು ಬೀದಿಬದಿ ವ್ಯಾಪಾರಿಗಳು ಒತ್ತುವರಿ ಮಾಡಿಕೊಂಡಿದ್ದು, ಜನರಿಗೆ ಓಡಾಡಲು ಜಾಗವಿಲ್ಲದಂತಾಗಿದೆ ಎಂದು ಸಾಕಷ್ಟುದೂರುಗಳು ಬಂದಿದ್ದವು. ಹೀಗಾಗಿ ಬೀದಿ ಬದಿ ವ್ಯಾಪಾರಿಗಳನ್ನು ತೆರವು ಮಾಡಿಸುವಂತೆ ಆಗ್ರಹಿಸಲಾಗುತ್ತಿತ್ತು. ಹೀಗಾಗಿ ತೆರವು ಮಾಡಿಸಲಾಗುತ್ತಿದೆ. ಬೀದಿ ಬಂದಿ ವ್ಯಾಪಾರಿಗಳ ವಿರುದ್ಧ ಸರ್ಕಾರವಿಲ್ಲ. ಅವರಿಗೆ ತೊಂದರೆ ಕೊಡುವ ಉದ್ದೇಶವೂ ನಮ್ಮದಲ್ಲ. ಬೀದಿಬದಿ ವ್ಯಾಪಾರಿಗಳಿಗೆ ಪ್ರತ್ಯೇಕ ವ್ಯವಸ್ಥೆ ಮಾಡುವ ಕುರಿತಂತೆ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.
Brand Bangalore: ಮನೆ ಬಾಗಿಲಿಗೆ ಪಾಲಿಕೆ, ಬಿಡಿಎ ಆಸ್ತಿ ದಾಖಲೆ!
ಮಾಧ್ಯಮಕ್ಕೆ ಅಧಿಕಾರಿಗಳು ಮಾತನಾಡುವಂತಿಲ್ಲ: ಡಿಕೆಶಿ
ಬೆಂಗಳೂರಿನ ಸಮಸ್ಯೆಗಳ ಬಗ್ಗೆ ಬಿಬಿಎಂಪಿ(BBMP) ಅಧಿಕಾರಿಗಳು ಮಾಧ್ಯಮಗಳಿಗೆ ಮಾತನಾಡಲಿ. ಆದರೆ, ನೀತಿ ನಿರೂಪಣೆ ಬಗ್ಗೆ ಅವರು ಬಾಯಿಗೆ ಬಂದ ಹಾಗೆ ಮಾತನಾಡಲು ಸಾಧ್ಯವಿಲ್ಲ. ನೀತಿಗಳ ವಿಚಾರ ಸರ್ಕಾರಕ್ಕೆ ಸಂಬಂಧಿಸಿದ್ದು. ಹೀಗಾಗಿ ಅವರು ಸ್ಥಳೀಯವಾಗಿ ಜನರ ಸಮಸ್ಯೆ ಬಗೆಹರಿಸುವಂತೆ ಸೂಚಿಸಿದ್ದೇನೆ. ಆದರೆ, ಅಭಿವೃದ್ಧಿ ವಿಚಾರವಾಗಿ ನಾವು ಮಾತನಾಡುತ್ತೇವೆ ಎಂದು ತಿಳಿಸಿದ್ದೇನೆ ಎಂದು ಡಿ.ಕೆ.ಶಿವಕುಮಾರ್ ವಿವರಿಸಿದರು.