ಕೆಐಎಡಿಬಿಯಲ್ಲಿ ದಲ್ಲಾಳಿಗಳ ವಿರುದ್ಧ ಕಠಿಣ ಕ್ರಮ: ಸಚಿವ ಎಂ.ಬಿ.ಪಾಟೀಲ್‌

By Kannadaprabha News  |  First Published Jul 24, 2023, 1:00 AM IST

ಕೆಐಎಡಿಬಿ ಕಚೇರಿಗಳಲ್ಲಿ ಸಂತ್ರಸ್ತ ರೈತರ ಪರವಾಗಿ ಮತ್ತು ಕೈಗಾರಿಕಾ ನಿವೇಶನಗಳು ಮಂಜೂರಾಗಿರುವ ಉದ್ಯಮಿಗಳು ಅಥವಾ ನಿವೇಶನದಾರರ ಹೆಸರಿನಲ್ಲಿ ಕೆಲವು ಅನಪೇಕ್ಷಿತ ವ್ಯಕ್ತಿಗಳು ಠಳಾಯಿಸುತ್ತಿರುವುದು ಗಮನಕ್ಕೆ ಬಂದಿದೆ. ಇದನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ. ಜಮೀನು ಕಳೆದುಕೊಂಡ ರೈತರು ಅಥವಾ ಕಾನೂನುಬದ್ಧ ವಾರಸುದಾರರು/ಪ್ರತಿನಿಧಿಗಳು ಮಾತ್ರ ಕಚೇರಿಗಳಿಗೆ ಭೇಟಿ ನೀಡಿ, ಅಹವಾಲು ಸಲ್ಲಿಸಬಹುದು: ಸಚಿವ ಎಂ.ಬಿ.ಪಾಟೀಲ್‌ 


ಬೆಂಗಳೂರು(ಜು.24): ಕೈಗಾರಿಕಾ ಪ್ರದೇಶಗಳ ಅಭಿವೃದ್ಧಿಗಾಗಿ ಭೂಮಿ ಕಳೆದುಕೊಂಡ ರೈತರ ಪರವಾಗಿ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ(ಕೆಐಎಡಿಬಿ) ಕೇಂದ್ರ ಕಚೇರಿ ಮತ್ತು ವಲಯ ಕಚೇರಿಗಳಲ್ಲಿ ಕಾಣಿಸಿಕೊಳ್ಳುವ ದಲ್ಲಾಳಿಗಳು/ಮಧ್ಯವರ್ತಿಗಳು ಹಾಗೂ ಅವರ ಜೊತೆ ಕೈಜೋಡಿಸುವ ಅಧಿಕಾರಿ/ಸಿಬ್ಬಂದಿ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕೆಗಳ ಸಚಿವ ಎಂ.ಬಿ.ಪಾಟೀಲ್‌ ಎಚ್ಚರಿಸಿದ್ದು, ಸುತ್ತೋಲೆ ಹೊರಡಿಸಿದ್ದಾರೆ. 

ಈ ಬಗ್ಗೆ ಹೇಳಿಕೆ ನೀಡಿರುವ ಅವರು, ಕೆಐಎಡಿಬಿ ಕಚೇರಿಗಳಲ್ಲಿ ಸಂತ್ರಸ್ತ ರೈತರ ಪರವಾಗಿ ಮತ್ತು ಕೈಗಾರಿಕಾ ನಿವೇಶನಗಳು ಮಂಜೂರಾಗಿರುವ ಉದ್ಯಮಿಗಳು ಅಥವಾ ನಿವೇಶನದಾರರ ಹೆಸರಿನಲ್ಲಿ ಕೆಲವು ಅನಪೇಕ್ಷಿತ ವ್ಯಕ್ತಿಗಳು ಠಳಾಯಿಸುತ್ತಿರುವುದು ಗಮನಕ್ಕೆ ಬಂದಿದೆ. ಇದನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ. ಜಮೀನು ಕಳೆದುಕೊಂಡ ರೈತರು ಅಥವಾ ಕಾನೂನುಬದ್ಧ ವಾರಸುದಾರರು/ಪ್ರತಿನಿಧಿಗಳು ಮಾತ್ರ ಕಚೇರಿಗಳಿಗೆ ಭೇಟಿ ನೀಡಿ, ಅಹವಾಲು ಸಲ್ಲಿಸಬಹುದು ಎಂದು ತಿಳಿಸಿದ್ದಾರೆ.

Tap to resize

Latest Videos

ಕೈಗಾರಿಕೆ ಪ್ರದೇಶ ನಿರ್ವಹಣೆಗೆ ಆಡಳಿತ ಮಂಡಳಿ: ಸಚಿವ ಎಂ.ಬಿ. ಪಾಟೀಲ್‌

ಸರ್ಕಾರವು ಹೊರಡಿಸಿರುವ ಸುತ್ತೋಲೆಯನ್ನು ಕೆಐಎಡಿಬಿ ಕಚೇರಿಗಳಲ್ಲಿ ಕೂಡಲೇ ಕಡ್ಡಾಯವಾಗಿ ಪ್ರದರ್ಶಿಸಬೇಕು. ಭ್ರಷ್ಟಾಚಾರಕ್ಕೆ ಅನುವು ಮಾಡಿಕೊಡುವಂತಹ ಶಕ್ತಿಗಳಿಗೆ ಅಂಕುಶ ಹಾಕಲು ಈ ಕ್ರಮ ತೆಗೆದುಕೊಳ್ಳಲಾಗಿದೆ. ಮುಂದಿನ ದಿನಗಳಲ್ಲಿ ಕೆಐಎಡಿಬಿ ಕಚೇರಿ ಇದರ ಅನುಸರಣ ಕಾರ್ಯವನ್ನೂ ಮಾಡಬೇಕು ಎಂದು ಅವರು ನಿರ್ದೇಶಿಸಿದ್ದಾರೆ.

click me!