ಭಾರತವನ್ನು ವಿಶ್ವದ 3ನೇ ಆರ್ಥಿಕ ರಾಷ್ಟ್ರವನ್ನಾಗಿಸಲು ಶ್ರಮಿಸಿ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

By Kannadaprabha News  |  First Published Mar 2, 2024, 2:00 AM IST

ಕೃಷಿ ಸೇರಿದಂತೆ ಸಾಕಷ್ಟು ರಂಗಗಳಲ್ಲಿ ಗಣನೀಯ ಅಭಿವೃದ್ಧಿ ಕಾಣುತ್ತಿರುವ ಭಾರತ ದೇಶವನ್ನು ವಿಶ್ವದ 3ನೇ ಅತಿ ಬಲಿಷ್ಠ ಆರ್ಥಿಕ ರಾಷ್ಟ್ರವನ್ನಾಗಿಸಲು ಎಲ್ಲರೂ ಕೈಜೋಡಿಸಬೇಕು, ಮುಖ್ಯವಾಗಿ ಕೃಷಿ ವಿದ್ಯಾರ್ಥಿಗಳು, ವಿಜ್ಞಾನಿಗಳು ಅದಕ್ಕೆ ಪೂರಕವಾದ ರೀತಿಯಲ್ಲಿ ಕಾರ್ಯನಿರ್ವಹಿಸಬೇಕು ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಭಿಪ್ರಾಯ ವ್ಯಕ್ತಪಡಿಸಿದರು. 


ರಾಯಚೂರು (ಮಾ.02): ಕೃಷಿ ಸೇರಿದಂತೆ ಸಾಕಷ್ಟು ರಂಗಗಳಲ್ಲಿ ಗಣನೀಯ ಅಭಿವೃದ್ಧಿ ಕಾಣುತ್ತಿರುವ ಭಾರತ ದೇಶವನ್ನು ವಿಶ್ವದ 3ನೇ ಅತಿ ಬಲಿಷ್ಠ ಆರ್ಥಿಕ ರಾಷ್ಟ್ರವನ್ನಾಗಿಸಲು ಎಲ್ಲರೂ ಕೈಜೋಡಿಸಬೇಕು, ಮುಖ್ಯವಾಗಿ ಕೃಷಿ ವಿದ್ಯಾರ್ಥಿಗಳು, ವಿಜ್ಞಾನಿಗಳು ಅದಕ್ಕೆ ಪೂರಕವಾದ ರೀತಿಯಲ್ಲಿ ಕಾರ್ಯನಿರ್ವಹಿಸಬೇಕು ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಭಿಪ್ರಾಯ ವ್ಯಕ್ತಪಡಿಸಿದರು. ಸ್ಥಳೀಯ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಪ್ರೇಕ್ಷಾಗೃಹದಲ್ಲಿ ಹಮ್ಮಿಕೊಂಡಿದ್ದ 13 ನೇ ಘಟಿಕೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿ. ವಿವಿಧ ವಿಭಾಗಗಳಲ್ಲಿ ಕೃಷಿ ಪದವಿ, ಸ್ನಾತಕ, ಸ್ನಾತಕೋತ್ತರ ಮತ್ತು ಡಾಕ್ಟರೇಟ್ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಿ ಗುರುವಾರ ಮಾತನಾಡಿದರು.

ದೇಶದ ಆರ್ಥಿಕ ವ್ಯವಸ್ಥೆಯಲ್ಲಿ ಕೃಷಿ ವಲಯವು ಪ್ರಮುಖ ಆಧಾರ ಸ್ತಂಬವಾಗಿದ್ದು, ಕೃಷಿ ಹಾಗೂ ರೈತರು ಎದುರಿಸುತ್ತಿರುವ ಸವಾಲುಗಳನ್ನು ಸ್ವೀಕರಿಸಿ ಅವುಗಳಿಗೆ ಪರಿಹಾರ ಕಂಡುಕೊಳ್ಳುವ ಕೆಲಸವನ್ನು ವಿವಿ, ಸಂಶೋಧಕರು ಮಾಡಬೇಕು ಎಂದರು. ಕೃಷಿ ಕ್ಷೇತ್ರದ ಮೇಲೆ ದೇಶದ ಆರ್ಥಿಕತೆ ಅವಲಂಬಿತವಾಗಿದೆ. ದೇಶದ ಎಲ್ಲ ಕ್ಷೇತ್ರಗಳ ಅಭಿವೃದ್ಧಿಗೆ ಕೃಷಿ ಪೂರಕವಾಗಿದೆ. ಇಂದು ನಡೆದ ಸಮಾರಂಭದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ವಿದ್ಯಾರ್ಥಿನಿಯರು ಕೃಷಿ ಶಿಕ್ಷಣ ಪಡೆದಿದ್ದಾರೆ. ಅದಲ್ಲಿಯೂ ವಿದ್ಯಾರ್ಥಿನಿಯರ ಸಂಖ್ಯೆ ಹೆಚ್ಚಾಗಿರುವುದು ವಿಶೇಷವಾದ ಸಂಗತಿಯಾಗಿದೆ ಎಂದು ಹೇಳಿದರು.

Tap to resize

Latest Videos

undefined

ಪಾಪ ಕುಮಾರಣ್ಣ ಹೆದರಿ ಮಂಡ್ಯಕ್ಕೆ ಓಟ: ಶಾಸಕ ಬಾಲಕೃಷ್ಣ ಲೇವಡಿ

ಕೃಷಿ ಕ್ಷೇತ್ರವನ್ನು ಲಾಭದಾಯಕ ಕ್ಷೇತ್ರವನ್ನಾಗಿ ಮಾಡಲು ಶ್ರಮಿಸಬೇಕು. ರೈತರ ಸಮಸ್ಯೆಗಳಿಗೆ ಸ್ಪಂದಿಸಬೇಕು. ಈ ಕೃಷಿ ಕ್ಷೇತ್ರವನ್ನು ಲಾಭದಾಯವನ್ನಾಗಿಸುವ ಹಿನ್ನೆಲೆ ಸರ್ಕಾರ ಅನೇಕ ಯೋಜನೆ ಜಾರಿಗೊಳಿಸಿದೆ. ಅವುಗಳನ್ನು ಸಮರ್ಪಕವಾಗಿ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು. ರೈತರಿಗೆ ಬೇಸಾಯದಲ್ಲಿ ಕಂಡುಬರುವ ರೋಗಗಳ ಕುರಿತು ಹಾಗೂ ಬೆಳೆಗಳ ವಿವಿಧ ಪರೀಕ್ಷೆಗಳನ್ನು ಕೈಗೊಂಡು ರೋಗಗಳನ್ನು ನಿರ್ಮೂಲನೆ ಮಾಡುವ ಕೀಟನಾಶಕಗಳ ಬಗ್ಗೆ ಉತ್ತಮ ಮಾಹಿತಿ ನೀಡುವಲ್ಲಿ ಉತ್ತಮ ಕಾರ್ಯವನ್ನು ನಿರ್ವಹಿಸುತ್ತಿದೆ.

ಕೃಷಿ ವಿವಿಯಿಂದ ಪದವಿಗಳನ್ನು ಪಡೆದುಕೊಂಡ ವಿದ್ಯಾರ್ಥಿಗಳು ಮುಂದಿನ ತಮ್ಮ ಉಜ್ವಲ ಭವಿಷ್ಯವನ್ನು ರೂಪಿಸಿಕೊಂಡು ಕೃಷಿಯಲ್ಲಿ ಹೆಚ್ಚಿನ ಸಾಧನೆ ಮಾಡಲು ಮುಂದಾಗಬೇಕು ಎಂದು ಕಿವಿ ಮಾತು ಹೇಳಿದರು. ಸಮಾರಂಭದಲ್ಲಿ ನವದೆಹಲಿಯ ಭಾರತೀಯ ಕೃಷಿ ಅನುಸಂಧಾನ ಪರಿಷತ್ತಿನ (ಐಸಿಎಆರ್) ಕೃಷಿ ತಾಂತ್ರಿಕತೆ ವಿಭಾಗದ ಉಪ ಮಹಾನಿರ್ದೇಶಕ ಡಾ.ಎಸ್.ಎನ್ ಝಾ ಅವರು ಘಟಿಕೋತ್ಸವ ಭಾಷಣ ನೆರವೇರಿಸಿದರು. ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ಡಾ.ಎಂ.ಹನುಮಂತಪ್ಪ ಎಲ್ಲರನ್ನು ಸ್ವಾಗತಿಸಿ, ಅತಿಥಿಗಳ ಪರಿಚಯ ಮಾಡಿ, ವಿವಿಯ ಗುರಿ-ಸಾಧನೆ ಕುರಿತು ಟಿಪ್ಪಣಿ ಮಂಡಿಸಿದರು.

ಕಾಂಗ್ರೆಸ್ ಗ್ಯಾರಂಟಿಗಳನ್ನು ನಿಲ್ಲಿಸಲು ಯಾರಿಂದಲೂ ಸಾಧ್ಯವಿಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಈ ಸಂದರ್ಭದಲ್ಲಿ ರಾಯಚೂರು ವಿವಿಯ ಕುಲಪತಿ ಹರೀಶ ರಾಮಸ್ವಾಮಿ, ಜಿಪಂ ಸಿಇಒ ರಾಹುಲ್‌ ತುಕಾರಾಮ್‌ ಪಾಂಡ್ವೆ, ಸೇರಿದಂತೆ ವಿವಿದ ವ್ಯವಸ್ಥಾಪನಾ ಮಂಡಳಿ ಸದಸ್ಯರು, ವಿದ್ಯಾವಿಷಯಕ ಪರಿಷತ್ತಿನ ಸದಸ್ಯರು, ವಿವಿ ಬೋಧಕ-ಬೋಧಕೇತರ ಸಿಬ್ಬಂದಿ, ಕೃಷಿ ವಿದ್ಯಾರ್ಥಿಗಳು, ಪಾಲಕರು ಉಪಸ್ಥಿತರಿದ್ದರು.

click me!