ವಿಧಾನಸಭೆ (ಡಿ.16): ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್‌ಗಳಲ್ಲಿ (KSRTC Bus) ವಿದ್ಯಾರ್ಥಿಗಳ ಬಸ್ ಪಾಸ್ (Bus Pass) ಸಂಚಾರ ಮಿತಿಯನ್ನು 60 ಕಿ.ಮೀ.ನಿಂದ 100 ಕಿ.ಮೀ.ವರೆಗೆ ಹೆಚ್ಚಿಸುವ ಬಗ್ಗೆ ಪರಿಶೀಲಿಸಲಾಗುವುದು ಎಂದು ಎಂದು ಸಾರಿಗೆ ಸಚಿವ ಬಿ. ಶ್ರೀರಾಮುಲು (B Shriramulu) ಭರವಸೆ ನೀಡಿದ್ದಾರೆ. ಬುಧವಾರ ಜೆಡಿಎಸ್ ಸದಸ್ಯ ಎಚ್.ಕೆ.ಕುಮಾರಸ್ವಾಮಿ (HK Kumaraswamy) ಪ್ರಶ್ನೆಗೆ ಉತ್ತರಿಸಿದ ಅವರು, ಪ್ರಸ್ತುತ 60 ಕಿ.ಮೀ. ಮಿತಿಯವರೆಗೆ ಪ್ರಯಾಣಿಸಲು ವಿದ್ಯಾರ್ಥಿಗಳಿಗೆ (Students) ಬಸ್ ಪಾಸ್ ವಿತರಣೆ ಮಾಡಲಾಗುತ್ತಿದೆ. 60 ಕಿ.ಮೀ. ಮಿತಿಯಿಂದ 100 ಕಿ.ಮೀ.ಗೆ ಹೆಚ್ಚಿಸುವ ಬಗ್ಗೆ ಅಧಿಕಾರಿಗಳ ಜತೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದರು.
ಈಗಾಗಲೇ ಶಾಲಾ ಕಾಲೇಜುಗಳು (School - College) ಪ್ರಾರಂಭವಾಗಿರುವುದರಿಂದ ಶೈಕ್ಷಣಿಕ ದಾಖಲೆಗಳನ್ನು ಒದಗಿಸಿ ಸೇವಾಸಿಂಧು ಮೂಲಕವು ಸಹ ಬಸ್‌ಪಾಸ್ ಪಡೆಯಲು ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದರು.
ಹಳೆ ಬಸ್‌ಗಳ ಅನುಪಯುಕ್ತಗೊಳಿಸಲು ಕ್ರಮ: 9 ಲಕ್ಷ ಕಿ.ಮೀ. ಕ್ರಮಿಸಿದ ಸಾರಿಗೆ ಸಂಸ್ಥೆಯ ಎಲ್ಲ ಬಸ್‌ಗಳನ್ನು ಅನುಪಯುಕ್ತಗೊಳಿಸಲು ಕ್ರಮ ವಹಿಸಲಾಗಿದೆ ಎಂದು ಮತ್ತೊಂದು ಪ್ರಶ್ನೆಗೆ ಸಾರಿಗೆ ಸಚಿವ ಬಿ.ಶ್ರೀರಾಮುಲು ತಿಳಿಸಿದರು.
ಬಿಜೆಪಿಯ (BJP) ಅಪ್ಪಚ್ಚು ರಂಜನ್ (Appachu Ranjan ) ಪ್ರಶ್ನೆಗೆ ಈ ಉತ್ತರ ನೀಡಿದ ಅವರು, ಹಳೆಯ ವಾಹನಗಳನ್ನು (Vehicle) ತೆಗೆದು ಹೊಸ ವಾಹನಗಳನ್ನು ನೀಡಲು ಕ್ರಮ ಕೈಗೊಳ್ಳಲಾಗಿದೆ. ಒಂಬತ್ತು ಲಕ್ಷ ಕಿ.ಮೀ. ಕ್ರಮಿಸಿದ ಸಾರಿಗೆ ಸಂಸ್ಥೆಗಳ ಬಸ್‌ಗಳನ್ನು ಗುಜರಿಗೆ ಹಾಕಲಾಗುತ್ತಿದೆ ಎಂದು ಹೇಳಿದರು.
ಕೇಂದ್ರ ಸರ್ಕಾರ 15 ವರ್ಷಗಳ ಕಾಲ ವಾಹನ ಓಡಾಡಿದ ವಾಹನಗಳನ್ನು ಅನುಪಯುಕ್ತಗೊಳಿಸಬೇಕು ಎಂಬ ಯೋಜನೆಯನ್ನು ಅನುಷ್ಠಾನಗೊಳಿಸಲಾಗುವುದು ಎಂದು ಕಾಂಗ್ರೆಸ ಸದಸ್ಯ ಡಿ.ಕೆ. ಶಿವಕುಮಾರ್ (DK Shivakumar) ಅವರ ಪೂರಕ ಪ್ರಶ್ನೆಗೆ ಸಚಿವರು ಉತ್ತರಿಸಿದರು.
ಕೋವಿಡ್ (Covid ) ಹಿನ್ನೆಲೆಯಲ್ಲಿ ನಿಗಮ ತೀವ್ರ ಸಂಕಷ್ಟದಲ್ಲಿದ್ದು, ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ತುಂಬಾ ಕಷ್ಟಕರವಾಗಿದೆ. ಆರ್ಥಿಕ ಮಿತಿಯನ್ನು ಗಮನದಲ್ಲಿರಿಸಿಕೊಂಡು ಕುಶಾಲನಗರದಲ್ಲಿ ವಿಭಾಗೀಯ ಕಾರ್ಯಗಾರ ಆರಂಭಿಸಲು ಕ್ರಮವಹಿಸಲಾಗುವುದು ಎಂದರು.
ಆದಾಯ ಹೆಚ್ಚಿಸಲು ಕ್ರಮ: ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯನ್ನು ಲಾಭ ದಾಯಕವಾಗಿಸುವ ನಿಟ್ಟಿನಲ್ಲಿ ಸಲಹೆಗಳನ್ನು ನೀಡಲು ಸರ್ಕಾರವು ಐಎಎಸ್ (IAS) ಅಧಿಕಾರಿ ಶ್ರೀನಿವಾಸ ಮೂರ್ತಿ ಅವರ ಏಕಸದಸ್ಯ ಸಮಿತಿಯನ್ನು ರಚಿಸಿದೆ. ಸಮಿತಿಯ ಮಾಡುವ ಶಿಫಾರಸ್ಸಿನ ಮೇರೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಪಕ್ಷೇತರ ಸದಸ್ಯ ಶರತ್ ಬಚ್ಚೇಗೌಡ ಅವರ ಪ್ರಶ್ನೆಗೆ ಸಚಿವ ಬಿ. ಶ್ರೀರಾಮುಲು ಉತ್ತರಿಸಿದರು.
ಉಚಿತ ಬಸ್ ಪಾಸ್ : ಜಿಲ್ಲೆಯ ಬಡವರ, ಕೂಲಿ ಕಾರ್ಮಿಕರ ಹಾಗೂ ರೈತ ಮಕ್ಕಳ ವಿದ್ಯಾಭ್ಯಾಸಕ್ಕೆ (education) ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಉಚಿತ ಬಸ್ ಪಾಸ್ (Bus Pass) ನೀಡುವ ಉದ್ದೇಶ ಹೊಂದಲಾಗಿದೆ ಎಂದು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಕೆ.ಎನ್.ರಾಜಣ್ಣ ತಿಳಿಸಿದರು.
ಮಧುಗಿರಿ ಪಟ್ಟಣದ ಸ್ವಗೃಹದಲ್ಲಿ ಬುಧವಾರ ವಿಎಸ್‌ಎಸ್‌ಎನ್ ಕಾರ್ಯದರ್ಶಿಯಾಗಿ ಟಿ.ವಿ.ಎಸ್.ಮಂಜುನಾಥ್ ಅವರನ್ನು ನೇಮಿಸಿದ ಹಿನ್ನೆಲೆಯಲ್ಲಿ ತುರುವೇಕೆರೆ, ಗಂಜಲಗುಂಟೆ, ವಿಎಸ್‌ಎಸ್‌ಎನ್ ಮತ್ತು ಕಾಂಗ್ರೆಸ್ ಪಕ್ಷದ ಮುಖಂಡರು ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಅಭಿನಂದನೆ ಸ್ವೀಕರಿಸಿ ಅವರು ಮಾತನಾಡಿದರು.
ತುಮಕೂರು ಜಿಲ್ಲೆಯಲ್ಲಿ ರೈತರಿಗೆ ಮತ್ತು ಅತಿ ಸಣ್ಣ ರೈತರಿಗೆ ಡಿಸಿಸಿ ಬ್ಯಾಂಕ್‌ನಿಂದ ಸಾಲ ಪಡೆದ ರೈತರು ನೆಮ್ಮದಿಯಿಂದ ಜೀವನ ನಡೆಸಲು ಸಾಧ್ಯವಾಗಲಿದೆ. ಕಾರಣ ಮೀಟರ್ ಬಡ್ಡಿ ಹಾವಳಿಯಿಂದ ಪಾರಾಗಿ ರೈತರು ಅಭಿವೃದ್ಧಿ ಹೊಂದಲು ಡಿಸಿಸಿ ಬ್ಯಾಂಕ್ ನೆರವಾಗಲಿದೆ.
ಮುಂದಿನ ದಿನಗಳಲ್ಲಿ ಎಲ್ಲ ರೈತರಿಗೂ ಸಾಲ ನೀಡಲಾಗುವುದು. ಡಿಸಿಸಿ ಬ್ಯಾಂಕ್ ವತಿಯಿಂದ ಈಗಾಗಲೇ ಮೃತಪಟ್ಟರೈತರ ಕುಟುಂಬದ 1 ಲಕ್ಷದವರೆಗಿನ ಸಾಲ ಮನ್ನಾ ಮಾಡುಲಾಗುತ್ತಿದ್ದು, ಕೊರೋನಾ ಹಿನ್ನೆಲೆಯಲ್ಲಿ ಜಿಲ್ಲೆಯ 50 ಸಾವಿರ ಬೀದಿ ಬದಿ ವ್ಯಾಪಾರಿಗಳಿಗೆ ಹತ್ತು ಸಾವಿರ ರುಗಳವರೆಗೂ ಸಾಲ ನೀಡಲಾಗಿದ್ದು ಬಡವರು, ರೈತರು ಹಾಗೂ ಕೂಲಿಕಾರ್ಮಿಕರು ಪಡೆದ ಸಾಲವನ್ನು ಸಮರ್ಪಕವಾಗಿ ಸದ್ಬಳಕೆ ಮಾಡಿಕೊಂಡು ತಮ್ಮ ಜೀವನ ಮಟ್ಟಸುಧಾರಿಸಿಕೊಳ್ಳುವಂತೆ ಸಲಹೆ ನೀಡಿದರು.
ಯಾರೇ ಸಾಲ ಪಡೆದರು ಅದನ್ನು ಸದುಪಯೋಗ ಪಡಿಸಿಕೊಂಡು ಸಮಯಕ್ಕೆ ಸರಿಯಾಗಿ ಪಡೆದ ಸಾಲವನ್ನು ಮರು ಪಾವತಿ ಮಾಡುವುದು ಸಾಲ ಪಡೆದವರ ಕರ್ತವ್ಯವಾಗಿದ್ದು ಕಾರ್ಯದರ್ಶಿಗಳು ಆ ನಿಟ್ಟಿನಲ್ಲಿ ಸಾಲ ನೀಡುವ ಮತ್ತು ಮರುಪಾವತಿ ಬಗ್ಗೆ ಮುತುವರ್ಜಿ ವಹಿಸಬೇಕು. ವಿಎಸ್‌ಎಸ್‌ಎನ್ ಸಂಘಗಳ ಅಭ್ಯುದಯ್ಕಕೆ ಪ್ರಮಾಣಿಕವಾಗಿ ಶ್ರಮಿಸಬೇಕು ಎಂದರು