ಇಂದು ಅಥವಾ ನಾಳೆ 225 ವಾರ್ಡ್‌ ಅಂತಿಮ ಪಟ್ಟಿಸರ್ಕಾರಕ್ಕೆ ಸಲ್ಲಿಕೆ?

Published : Sep 07, 2023, 05:21 AM IST
ಇಂದು ಅಥವಾ ನಾಳೆ 225 ವಾರ್ಡ್‌ ಅಂತಿಮ ಪಟ್ಟಿಸರ್ಕಾರಕ್ಕೆ ಸಲ್ಲಿಕೆ?

ಸಾರಾಂಶ

ಬಿಬಿಎಂಪಿಯ 225 ವಾರ್ಡ್‌ ಮರು ವಿಂಗಡಣೆ ಸಂಬಂಧಿಸಿದಂತೆ ಸಲ್ಲಿಕೆಯಾದ ಆಕ್ಷೇಪಣೆಗಳ ಪರಿಶೀಲನಾ ಕಾರ್ಯ ಬಹುತೇಕ ಪೂರ್ಣಗೊಳಿಸಿರುವ ಬಿಬಿಎಂಪಿ ಮುಖ್ಯ ಆಯುಕ್ತರ ನೇತೃತ್ವದ ಸಮಿತಿಯು ಶುಕ್ರವಾರದೊಳಗೆ ಸರ್ಕಾರಕ್ಕೆ ಅಂತಿಮ ವಾರ್ಡ್‌ ಪಟ್ಟಿಸಲ್ಲಿಸಲಿದೆ.

ಬೆಂಗಳೂರು (ಸೆ.7) :  ಬಿಬಿಎಂಪಿಯ 225 ವಾರ್ಡ್‌ ಮರು ವಿಂಗಡಣೆ ಸಂಬಂಧಿಸಿದಂತೆ ಸಲ್ಲಿಕೆಯಾದ ಆಕ್ಷೇಪಣೆಗಳ ಪರಿಶೀಲನಾ ಕಾರ್ಯ ಬಹುತೇಕ ಪೂರ್ಣಗೊಳಿಸಿರುವ ಬಿಬಿಎಂಪಿ ಮುಖ್ಯ ಆಯುಕ್ತರ ನೇತೃತ್ವದ ಸಮಿತಿಯು ಶುಕ್ರವಾರದೊಳಗೆ ಸರ್ಕಾರಕ್ಕೆ ಅಂತಿಮ ವಾರ್ಡ್‌ ಪಟ್ಟಿಸಲ್ಲಿಸಲಿದೆ.

ರಾಜ್ಯ ಸರ್ಕಾರ ವಾರ್ಡ್‌ ಸಂಖ್ಯೆಯನ್ನು 225ಕ್ಕೆ ಇಳಿಸಿ ಹೊರಡಿಸಿರುವ ವಾರ್ಡ್‌ ಮರು ವಿಂಗಡಣೆ ಕರಡು ಅಧಿಸೂಚನೆಗೆ ಸುಮಾರು ಮೂರು ಸಾವಿರ ಆಕ್ಷೇಪಣೆ ಸಲ್ಲಿಕೆಯಾಗಿವೆ. ಈ ಆಕ್ಷೇಪಣೆಗಳನ್ನು ಕಳೆದ ಎರಡು ದಿನಗಳಿಂದ ಪರಿಶೀಲನೆ ಮಾಡುತ್ತಿರುವ ಬಿಬಿಎಂಪಿ ಮುಖ್ಯ ಆಯುಕ್ತರ ನೇತೃತ್ವದ ವಾರ್ಡ್‌ ಮರು ವಿಂಗಡಣಾ ಸಮಿತಿ ಬಹುತೇಕ ಪೂರ್ಣಗೊಳಿಸಿದೆ. ಗುರುವಾರ ಅಥವಾ ಶುಕ್ರವಾರ ರಾಜ್ಯ ಸರ್ಕಾರಕ್ಕೆ ವಾರ್ಡ್‌ಗಳ ಪಟ್ಟಿಯನ್ನು ಸಲ್ಲಿಸಲಿದೆ ಎಂದು ಮೂಲಗಳು ತಿಳಿಸಿವೆ.

ನೂತನ ವಾರ್ಡ್‌ ರಚನೆಯಲ್ಲಿಯೂ ಲೋಪದೋಷ: ಮಾಜಿ ಕಾರ್ಪೊರೇಟರ್‌ಗಳ ಆರೋಪ

ರಾಜ್ಯ ಸರ್ಕಾರ ಸೋಮವಾರ ಈ ಕುರಿತು ಅಂತಿಮ ಅಧಿಸೂಚನೆ ಹೊರಡಿಸುವ ಸಾಧ್ಯತೆ ಇದೆ. ಬಳಿಕ ರಾಜ್ಯ ಸರ್ಕಾರ ಸೆ.13ಕ್ಕೆ ವಾರ್ಡ್‌ ಮರು ವಿಂಗಡಣೆಯ ಪಟ್ಟಿಯನ್ನು ಹೈಕೋರ್ಚ್‌ಗೆ ಸಲ್ಲಿಸಲಿದೆ.

ಮೀಸಲಾತಿ ಬಾಕಿ

225 ವಾರ್ಡ್‌ಗಳಿಗೆ ಸಂಬಂಧಿಸಿದಂತೆ ರಾಜ್ಯಪತ್ರ ಹೊರಡಿಸಿದ ಬಳಿಕ ರಾಜ್ಯ ಸರ್ಕಾರ 225 ವಾರ್ಡ್‌ಗಳಿಗೆ ಮೀಸಲಾತಿ ನಿಗದಿ ಪಡಿಸಿ ಕರಡು ಅಧಿಸೂಚನೆ ಹೊರಡಿಸಿ ಸಾರ್ವಜನಿಕರಿಂದ ವಾರ್ಡ್‌ ಮೀಸಲಾತಿಗೆ ಸಂಬಂಧಿಸಿದಂತೆ ಆಕ್ಷೇಪಣೆ ಆಹ್ವಾನಿಸಲಿದೆ. ಸಲ್ಲಿಕೆಯಾದ ಆಕ್ಷೇಪಣೆ ಪರಿಶೀಲಿಸಿ ಅಂತಿಮ ಮೀಸಲಾತಿ ಪಟ್ಟಿಪ್ರಕಟಿಸಿ ಬಿಬಿಎಂಪಿಯ ವಾರ್ಡ್‌ಗಳ ಚುನಾವಣೆಗೆ ರಾಜ್ಯ ಚುನಾವಣಾ ಆಯೋಗಕ್ಕೆ ಪಟ್ಟಿರವಾನಿಸಲಿದೆ. ನಂತರ ರಾಜ್ಯ ಚುನಾವಣಾ ಆಯೋಗ ಅಧಿಸೂಚನೆ ಹೊರಡಿಸಿ ಚುನಾವಣೆ ನಡೆಸಬೇಕಿದೆ. ಈ ನಡುವೆ ಅತೃಪ್ತರು ನ್ಯಾಯಾಲಯದ ಮೊರೆ ಹೋದರೆ ಚುನಾವಣೆ ಮತ್ತಷ್ಟುವಿಳಂಬವಾಗುವ ಸಾಧ್ಯತೆ ಇದೆ. 

BBMP: 225 ವಾರ್ಡ್‌ಗಳ ಕರಡು ಪ್ರಕಟ; ಪಟ್ಟಿ ಇಲ್ಲಿದೆ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಗ್ರೇಟರ್‌ ಬೆಂಗಳೂರು.. ವೈಜ್ಞಾನಿಕವಾಗಿ ಕಸ ಸಂಸ್ಕರಣೆ, ಆತಂಕ ಬೇಡ: ಡಿ.ಕೆ.ಶಿವಕುಮಾರ್‌
ಅನ್ನಭಾಗ್ಯ ಅಕ್ಕಿ ಫಾರಿನ್‌ಗೆ ಪ್ರಕರಣ: ಎಸ್ಐಟಿ ತನಿಖೆಗೆ ಸಿ.ಟಿ.ರವಿ ಆಗ್ರಹ