ಬೆಂಗಳೂರಿನ ಪ್ರತಿಷ್ಠಿತ ಕಾಲೇಜುಗಳು, ಹಾಸ್ಟೆಲ್‌ಗಳಲ್ಲಿ ದಿಢೀರ್ ಡ್ರಗ್ ಡೆಸ್ಟ್: ಸಿಕ್ಕಿಬಿದ್ದ ವಿದ್ಯಾರ್ಥಿಗಳೆಷ್ಟು?

Published : Mar 05, 2026, 08:55 AM IST
drug testing

ಸಾರಾಂಶ

ಬೆಂಗಳೂರಿನ 8 ಖಾಸಗಿ ಕಾಲೇಜುಗಳ ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಪೊಲೀಸರು ಮಾದಕ ವಸ್ತು ಪರೀಕ್ಷೆಗೆ ಒಳಪಡಿಸಿದ್ದಾರೆ. ಈ ತಪಾಸಣೆಯಲ್ಲಿ ಕೆಲ ವಿದ್ಯಾರ್ಥಿಗಳು ಡ್ರಗ್ಸ್ ಸೇವಿಸಿದ್ದು ದೃಢಪಟ್ಟಿದ್ದು, ಅವರಿಗೆ 'ಸನ್ಮಿತ್ರ' ಯೋಜನೆಯಡಿ ವ್ಯಸನಮುಕ್ತರಾಗಲು ಪೊಲೀಸರು ನೆರವು ನೀಡಲಿದ್ದಾರೆ.

ಒಂದು ಸಾವಿರ ಅಧಿಕ ವಿದ್ಯಾರ್ಥಿಗಳಿಗೆ ಡ್ರಗ್ ಟೆಸ್ಟ್:

ಬೆಂಗಳೂರು: ಮಾದಕ ವಸ್ತು ಸೇವನೆ ಜಾಗೃತಿ ಕಾರ್ಯಕ್ರಮದ ಅಂಗವಾಗಿ ನಗರದ 8 ಖಾಸಗಿ ಪದವಿ ಕಾಲೇಜುಗಳ ಸುಮಾರು ಒಂದು ಸಾವಿರ ಅಧಿಕ ವಿದ್ಯಾರ್ಥಿಗಳನ್ನು ಪಶ್ಚಿಮ ವಿಭಾಗದ ಪೊಲೀಸರು ಬುಧವಾರ ಮಾದಕ ವಸ್ತು ಪರೀಕ್ಷೆಗೆ ಒಳಪಡಿಸಿದರು. ವಿಜಯನಗರ ಉಪ ವಿಭಾಗದ ವ್ಯಾಪ್ತಿಯ 8 ಕಾಲೇಜು ಹಾಗೂ 2 ಹಾಸ್ಟೆಲ್‌ಗಳಲ್ಲಿ ಡ್ರಗ್ಸ್ ಸೇವನೆ ಬಗ್ಗೆ ತಪಾಸಣೆ ನಡೆದಿದೆ. ಈ ವೇಳೆ ಕೆಲ ವಿದ್ಯಾರ್ಥಿಗಳು ಡ್ರಗ್ಸ್ ಸೇವಿಸಿದ್ದು ದೃಢಪಟ್ಟಿದ್ದು, ಆ ವಿದ್ಯಾರ್ಥಿಗಳನ್ನು ವ್ಯಸನ ಮುಕ್ತ ಮಾಡುವುದಕ್ಕೆ ಸನ್ಮಿತ್ರ ಕಾರ್ಯಕ್ರಮದಡಿ ಪೋಷಕರಿಗೆ ಪೊಲೀಸರು ನೆರವು ನೀಡಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಾದಕ ವಸ್ತು ಮಾರಾಟ ಜಾಲ ಶೈಕ್ಷಣಿಕ ವಲಯಕ್ಕೆ ಹರಡುತ್ತಿದೆ. ಇತ್ತೀಚೆಗೆ ಡ್ರಗ್ಸ್ ಪ್ರಕರಣಗಳಲ್ಲಿ ಬಂಧಿತರಾದ ಪೆಡ್ಲರ್‌ಗಳ ವಿಚಾರಣೆ ವೇಳೆ ಡ್ರಗ್ಸ್ ಮಾಫಿಯಾದ ಪ್ರಮುಖ ಗ್ರಾಹಕರೇ ವಿದ್ಯಾರ್ಥಿಗಳಾಗಿದ್ದಾರೆ ಎಂಬ ಆತಂಕದ ಸಂಗತಿ ಬಯಲಾಗಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರು, ಕಾಲೇಜು ಕಾರಿಡಾರ್‌ಗಳಿಗೆ ಹರಡಿರುವ ಡ್ರಗ್ಸ್ ಮಾರಾಟ ಜಾಲದ ಬೇರು ಕತ್ತರಿಸಲು ಮುಂದಾಗಿದ್ದಾರೆ.

ಇದನ್ನೂ ಓದಿ: ಹಾಸನ ಬಾಗಲಕೋಟೆಯಲ್ಲಿ ಲೋಕಾಯುಕ್ತ ದಾಳಿ: ಲೋಕಾ ಅಧಿಕಾರಿಗಳಿಗೆ ಮನೆ ಬಾಗಿಲು ತೆರೆಯದ ಇಂಜಿನಿಯರ್ ಸತ್ಯಾನಾರಾಯಣ

ಇದರ ಭಾಗವಾಗಿ ವಿದ್ಯಾರ್ಥಿಗಳಿಗೆ ಡ್ರಗ್ಸ್ ತಪಾಸಣೆ ನಡೆಸಲು ವಿಜಯನಗರ ಉಪ ವಿಭಾಗದ ಪೊಲೀಸರು ನಿರ್ಧರಿಸಿದರು. ಈ ಕಾರ್ಯಕ್ರಮಕ್ಕೆ ಕಾಲೇಜುಗಳ ಆಡಳಿತ ಮಂಡಳಿಗಳು ಹಾಗೂ ಪುಣ್ಯ, ಪದ್ಮ ದೇವಯ್ಯ, ಕಾಡೆ, ಶರಾವತಿ, ಕಾಂಗರೂ ಕೇರ್ ಆಸ್ಪತ್ರೆಗಳು ಪರೀಕ್ಷೆಯ ಕಿಟ್‌ಗಳು ಹಾಗೂ ಸಿಬ್ಬಂದಿಯನ್ನು ಒದಗಿಸಿದ್ದವು. ಡ್ರಗ್ಸ್ ಸೇವನೆ ದುಷ್ಪರಿಣಾಮ ಬಗ್ಗೆ ಕಾಲೇಜುಗಳ ಆಡಳಿತ ಮಂಡಳಿಗೆ ಪೊಲೀಸರು ಮನವರಿಕೆ ಮಾಡಿಕೊಟ್ಟರು. ಬಳಿಕ ತಮ್ಮ ಕಾಲೇಜುಗಳಲ್ಲಿ ಡ್ರಗ್ಸ್ ತಪಾಸಣೆಗೆ ಆಡಳಿತ ಮಂಡಳಿಗಳು ಸಹ ಸಮ್ಮತಿಸಿದವು

ಹೇಗೆ ಕಾರ್ಯಕ್ರಮ?: ವಿಜಯನಗರ ವ್ಯಾಪ್ತಿಯ 8 ಪದವಿ ಕಾಲೇಜುಗಳಲ್ಲಿ ಖಾಸಗಿ ಆಸ್ಪತ್ರೆಗಳ ಸಹಕಾರದಲ್ಲಿ ಡ್ರಗ್ಸ್ ತಪಾಸಣಾ ಕಾರ್ಯಕ್ರಮ ಆಯೋಜಿಸಲಾಗಿತ್ತು. ಆ ಕಾಲೇಜಿನಲ್ಲಿ ಒಂದು ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳಿಂದ ಸ್ಯಾಂಪಲ್ಸ್ ಸಂಗ್ರಹಿಸಲಾಯಿತು. ಸ್ಯಾಂಪಲ್ಸ್ ಪರೀಕ್ಷಿಸಿದಾಗ ಅರ್ಧದಷ್ಟು ವಿದ್ಯಾರ್ಥಿಗಳಲ್ಲಿ ಡ್ರಗ್ಸ್ ಸೇವಿಸಿದ ಲಕ್ಷಣದ ಶಂಕೆ ಮೂಡಿತು. ಬಳಿಕ ಆ ವಿದ್ಯಾರ್ಥಿಗಳನ್ನು ಮತ್ತೆ ಪರೀಕ್ಷೆಗೊಳಪಡಿಸಿದಾಗ ಬೆರಣಿಕೆಯಷ್ಟು ವಿದ್ಯಾರ್ಥಿಗಳಲ್ಲಿ ಡ್ರಗ್ಸ್ ಸೇವನೆ ದೃಢಪಟ್ಟಿದೆ ಎಂದು ಮೂಲಗಳು ಹೇಳಿವೆ.

ಇದನ್ನೂ ಓದಿ: ಲೋಕಾ ದಾಳಿಗೊಳಗಾದ KREIS ಎಂಜಿನಿಯರ್ ಜನಾರ್ಧನ್ ಒಂದು ತಿಂಗಳಿಂದ ನಿಗೂಢ ನಾಪತ್ತೆ

ವ್ಯಸನಿಗಳಿಗೆ ಖಾಕಿ ಸನ್ಮಿತ್ರ

ವಿದ್ಯಾರ್ಥಿಗಳಲ್ಲಿ ಮಾದಕ ವಸ್ತು ಚಟ ಮುಕ್ತಗೊಳಿಸಲು 'ಸನ್ಮಿತ್ರ' ಹೆಸರಿನ ಯೋಜನೆಯನ್ನು ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ ಎಂ.ಎಸ್ ಸಲೀಂ ಜಾರಿಗೊಳಿದ್ದಾರೆ. ಈ ಕಾರ್ಯಕ್ರಮದ ಮೂಲಕ ಡ್ರಗ್ಸ್ ವ್ಯಸನಿ ವಿದ್ಯಾರ್ಥಿಗಳಿಗೆ ಪೊಲೀಸರ ನೆರವು ಸಿಗಲಿದೆ. ಆ ವಿದ್ಯಾರ್ಥಿಗಳನ್ನು ಕೌನ್ಸೆಲಿಂಗ್‌ಗೆ ಒಳಪಡಿಸಿ ಯಾವ ಕಾರಣಕ್ಕೆ ಆತ ಡ್ರಗ್ಸ್‌ಗೆ ದಾಸನಾದ ಎಂದು ತಿಳಿಯಲಾಗುತ್ತದೆ. ಆನಂತರ ಆ ವಿದ್ಯಾರ್ಥಿ ಪೋಷಕರ ಜತೆ ಸಮಾಲೋಚಿಸಿ ಡ್ರಗ್ಸ್ ಸೇವನೆಯಿಂದ ಆತನನ್ನು ದೂರವಾಗಿಸಲು ಪ್ರಯತ್ನಿಸಲಾಗುತ್ತದೆ. ಈ ವಿದ್ಯಾರ್ಥಿಗಳ ಮೇಲೆ ನಿರಂತರವಾಗಿ ಪೊಲೀಸರು ನಿಗಾ ವಹಿಸಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಹಾಸನ ಬಾಗಲಕೋಟೆಯಲ್ಲಿ ಲೋಕಾಯುಕ್ತ ದಾಳಿ: ಲೋಕಾ ಅಧಿಕಾರಿಗಳಿಗೆ ಮನೆ ಬಾಗಿಲು ತೆರೆಯದ ಇಂಜಿನಿಯರ್ ಸತ್ಯಾನಾರಾಯಣ
ಲೋಕಾ ದಾಳಿಗೊಳಗಾದ KREIS ಎಂಜಿನಿಯರ್ ಜನಾರ್ಧನ್ ಒಂದು ತಿಂಗಳಿಂದ ನಿಗೂಢ ನಾಪತ್ತೆ