ಜಿಲ್ಲೆಯ ಸಕ್ಕರೆ ಕಾರ್ಖಾನೆಗಳು ನವೆಂಬರ್ 1 ರ ನಂತರವೇ ಕಬ್ಬು ನುರಿಸುವ ಕಾರ್ಯ ಪ್ರಾರಂಭಿಸಬೇಕು. ಸರ್ಕಾರದ ಆದೇಶವನ್ನು ಎಲ್ಲ 27 ಕಾರ್ಖಾನೆಯವರು ಕಡ್ಡಾಯವಾಗಿ ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಕಾರ್ಖಾನೆಗಳಿಗೆ ಸೂಚನೆ ನೀಡಿದರು.
ಬೆಳಗಾವಿ (ಅ.7): ಜಿಲ್ಲೆಯ ಸಕ್ಕರೆ ಕಾರ್ಖಾನೆಗಳು ನವೆಂಬರ್ 1 ರ ನಂತರವೇ ಕಬ್ಬು ನುರಿಸುವ ಕಾರ್ಯ ಪ್ರಾರಂಭಿಸಬೇಕು. ಸರ್ಕಾರದ ಆದೇಶವನ್ನು ಎಲ್ಲ 27 ಕಾರ್ಖಾನೆಯವರು ಕಡ್ಡಾಯವಾಗಿ ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಕಾರ್ಖಾನೆಗಳಿಗೆ ಸೂಚನೆ ನೀಡಿದರು.
2023-24 ನೇ ಸಾಲಿನ ಕಬ್ಬು ನುರಿಸುವ ಹಂಗಾಮು ಪ್ರಾರಂಭಿಸುವ ಕುರಿತು ನಗರದ ಎಸ್.ನಿಜಲಿಂಗಪ್ಪ ಸಕ್ಕರೆ ಸಂಸ್ಥೆಯಲ್ಲಿ ಶನಿವಾರ ನಡೆದ ಸಕ್ಕರೆ ಕಾರ್ಖಾನೆಗಳ ಮಾಲೀಕರು, ವ್ಯವಸ್ಥಾಪಕ ನಿರ್ದೇಶಕರುಗಳ/ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕಿಟ್ ಬಚ್ಚಿಟ್ಟುಕೊಂಡ ಕಾರ್ಮಿಕ ಇಲಾಖೆ: ಮಕ್ಕಳಿಗೆ ಸಿಗಬೇಕಿದ್ದ ಶೈಕ್ಷಣಿಕ ಸಾಮಗ್ರಿಗಳು ಇಲಿ, ಹೆಗ್ಗಣ ಪಾಲು..!
ಎಫ್ ಆರ್ ಪಿ ದರದಲ್ಲಿ ರೈತರಿಗೆ ನೀಡುವ ಮೊತ್ತ ಹಾಗೂ H&T ಮೊತ್ತ ಕಾರ್ಖಾನೆ ನೋಟಿಸ್ ಬೋರ್ಡ್ ಗೆ ಅಂಟಿಸಬೇಕು. ಈ ಬಗ್ಗೆ ಕಬ್ಬು ಪೂರೈಕೆದಾರ ರೈತರಿಗೆ ಮಾಹಿತಿ ನೀಡಬೇಕು ಕಬ್ಬಿನ ತೂಕದ ಮಷಿನ್ ದಲ್ಲಿ ಕಡ್ಡಾಯವಾಗಿ ಪಾರದರ್ಶಕ ವ್ಯವಸ್ಥೆ ಅನುಷ್ಠಾನ ಮಾಡಬೇಕು. ರಿಕವರಿ ಸ್ಯಾಂಪಲ್ ಮಷಿನ್ ಅಳವಡಿಸಿ ರೈತರಿಗೆ ಅನ್ಯಾಯ ಆಗದಂತೆ ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.
ಅನೀರಿಕ್ಷಿತ ಭೇಟಿ-ತೂಕ ಪರಿಶೀಲನೆ:
ಅನಿರೀಕ್ಷಿತವಾಗಿ ಸಕ್ಕರೆ ಕಾರ್ಖಾನೆಗಳಿಗೆ ಭೇಟಿ ನೀಡಿ ತಪಾಸಣೆಗೆ ಜಿಲ್ಲಾ ಮಟ್ಟದಲ್ಲಿ ತಂಡ ರಚನೆ ಮಾಡುವುದರ ಜತೆಗೆ ತೂಕ ಹಾಗೂ ರಿಕವರಿ ಪರಿಶೀಲನೆ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದರು.
ರೈತ ಮುಖಂಡರ ಜೊತೆ ಚರ್ಚಿಸಿ ದರ ಘೋಷಣೆ ಮಾಡಿ ಸರ್ಕಾರದ FRP ಪ್ರಕಾರ ನಿಗದಿತ ಸಮಯದಲ್ಲಿ ಪಾವತಿ ಮಾಡಬೇಕು. ಶುಗರ್ ಕಂಟ್ರೋಲ್ ಆದೇಶಗಳನ್ನು ಕಡ್ಡಾಯವಾಗಿ ನಿಯಮಾನುಸಾರ ಪಾಲನೆ ಮಾಡಬೇಕು ಎಂದು ಸಕ್ಕರೆ ಕಾರ್ಖಾನೆಗಳಿಗೆ ಸೂಚನೆ ನೀಡಿದರು.
ಸುವರ್ಣ ಸಾಧಕರು ಪ್ರಶಸ್ತಿಗೆ ಭಾಜನರಾದ ಬೆಳಗಾವಿ ರವಿ ಪೂಜಾರಿ
ಹೆಚ್ಚುವರಿ ಬೆಲೆ ನಿಗದಿಗೆ ಮನವಿ:
ಈ ಬಾರಿ ಬರಗಾಲ ಘೋಷಣೆಯಾಗಿರುವುದರಿಂದ ರೈತರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಸಕ್ಕರೆ ಕಾರ್ಖಾನೆಗಳು ಎಫ್.ಆರ್.ಪಿ. ದರಕ್ಕಿಂತ ಹೆಚ್ಚುವರಿಯಾಗಿ ದರ ನಿಗದಿಪಡಿಸಬೇಕು ಎಂದು ಜಿಲ್ಲಾಧಿಕಾರಿ ಅವರು ನಿತೇಶ್ ಪಾಟೀಲ ಅವರು ರೈತರ ಪರವಾಗಿ ಕಾರ್ಖಾನೆಗಳಿಗೆ ಮನವಿ ಮಾಡಿಕೊಂಡರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ್ ಗುಳೇದ, ಪ್ರೊಬೋಷನರಿ ಐ.ಎ.ಎಸ್. ಅಧಿಕಾರಿ ಶುಭಂ ಶುಕ್ಲಾ, ಆಹಾರ, ನಾಗರಿಕ ಸರಬರಾಜು ಇಲಾಖೆಯ ಜಂಟಿ ನಿರ್ದೇಶಕರಾದ ಶ್ರೀಶೈಲ್ ಕಂಕಣವಾಡಿ ಸಹಾಯಕ ನಿಯಂತ್ರಕರು ತೂಕ ಮಾಪನ ಇಲಾಖೆ, ಸಹಕಾರ ಇಲಾಖೆ, ಜಿಲ್ಲಾ ಪರಿಸರ ಅಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು.