ಬೇಸಿಗೆ ಆರಂಭದಲ್ಲೇ 324 ಹಳ್ಳಿಗಳಲ್ಲಿ ಕುಡಿವ ನೀರಿಲ್ಲ! 76 ಗ್ರಾಮಕ್ಕೆ ಟ್ಯಾಂಕರ್, 248 ಹಳ್ಳಿಗೆ ಬೋರ್‌ ನೀರು

Kannadaprabha News   | Kannada Prabha
Published : Apr 05, 2026, 05:06 AM IST
Priyank kharge on Karnataka water crisis

ಸಾರಾಂಶ

ರಾಜ್ಯದ 20 ಜಿಲ್ಲೆಗಳ 324 ಗ್ರಾಮಗಳಲ್ಲಿ ತೀವ್ರ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದೆ. ಈ ಹಿನ್ನೆಲೆ, ಸರ್ಕಾರವು 76 ಟ್ಯಾಂಕರ್ ಮತ್ತು 280 ಖಾಸಗಿ ಕೊಳವೆ ಬಾವಿಗಳ ಮೂಲಕ ನೀರು ಸರಬರಾಜು ಮಾಡುತ್ತಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ತುರ್ತು ನಿರ್ವಹಣೆಗಾಗಿ 60 ಕೋಟಿ ರೂ. ಬಿಡುಗಡೆ

ಬೆಂಗಳೂರು (ಏ.5): ಬಿರುಬಿಸಿಲ ತಾಪ ಏರುತ್ತಿರುವ ನಡುವೆಯೇ ರಾಜ್ಯದ 20 ಜಿಲ್ಲೆಗಳ 60 ತಾಲೂಕುಗಳ 324 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಕಾಣಿಸಿಕೊಂಡಿದೆ. ಈ ಪೈಕಿ 76 ಗ್ರಾಮಗಳಿಗೆ 76 ಟ್ಯಾಂಕರ್‌ಗಳ ಮೂಲಕ ಹಾಗೂ 248 ಗ್ರಾಮಗಳಿಗೆ 280 ಖಾಸಗಿ ಕೊಳವೆ ಬಾವಿಗಳನ್ನು ಬಾಡಿಗೆ ಪಡೆದು ಕುಡಿಯುವ ನೀರೊದಗಿಸಲಾಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಕುಡಿಯುವ ನೀರಿಗೆ ಸಂಬಂಧಿಸಿ ತುರ್ತು ಕಾಮಗಾರಿಗಳನ್ನು ನಿರ್ವಹಿಸಲು ಈಗಾಗಲೇ 60 ಕೋಟಿ ರು. ಹಾಗೂ ಶುದ್ಧ ಕುಡಿಯುವ ನೀರಿನ ಘಟಕಗಳ ದುರಸ್ತಿಗಾಗಿ 14.50 ಕೋಟಿ ರು. ಅನ್ನು ಜಿಲ್ಲೆಗಳಿಗೆ ಹಂಚಿಕೆ ಮಾಡಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬೇಸಿಗೆ ಅವಧಿಯಲ್ಲಿ ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರು ಸರಬರಾಜು ನಿರಾತಂಕವಾಗಿರಲು ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಸೇರಿ ತಾಲೂಕು ಹಾಗೂ ಗ್ರಾಪಂ ಮಟ್ಟದಲ್ಲಿ ಅಧಿಕಾರಿಗಳು ನಿಗಾ ಇರಿಸಿದ್ದು, ಪರಿಶೀಲನಾ ಸಭೆ ನಡೆಸುತ್ತಿದ್ದಾರೆ. ರಾಜ್ಯದ 31 ಜಿಲ್ಲೆಗಳಲ್ಲಿ 26,676 ಗ್ರಾಮಗಳಿದ್ದು, 57,883 ಜನವಸತಿ ಪ್ರದೇಶಗಳಲ್ಲಿ 1,01,30,798 ಮನೆಗಳು ಇವೆ. ಗ್ರಾಮೀಣ ಪ್ರದೇಶದ ಜನರಿಗೆ ಕುಡಿಯುವ ಸಮಸ್ಯೆ ಎದುರಾದಲ್ಲಿ ಖಾಸಗಿ ಬೋರ್‌ವೆಲ್‌ಗಳನ್ನು ಬಾಡಿಗೆ ಪಡೆಯಲಾಗುವುದು. ಅಗತ್ಯಬಿದ್ದಲ್ಲಿ ಟ್ಯಾಂಕರ್‌ ಮೂಲಕವೂ ನೀರು ಸರಬರಾಜು ಮಾಡಲಾಗುವುದು. ಕೊಳವೆ ಬಾವಿಗಳನ್ನು ಫ್ಲಶಿಂಗ್‌ ಮತ್ತು ಆಳಗೊಳಿಸುವುದರೊಂದಿಗೆ ನೀರಿನ ಸಮಸ್ಯೆ ಬಗೆಹರಿಸಲು ಪ್ರಯತ್ನಿಸಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.

ಕಂಟ್ರೋಲ್‌ ರೂಂ ಸ್ಥಾಪನೆ:

ಕುಡಿಯುವ ನೀರಿನ ಅಭಾವ ಪರಿಸ್ಥಿತಿಯನ್ನು ಸಮರ್ಪಕವಾಗಿ ನಿರ್ವಹಿಸಲು ಎಲ್ಲಾ ಜಿಪಂಗಳಲ್ಲಿ 24/7 ಕಂಟ್ರೋಲ್‌ ರೂಮ್‌ ತೆರೆಯಲಾಗಿದೆ, ತಾಲೂಕು ಮಟ್ಟದಲ್ಲಿ ಕಾರ್ಯಾನಿರ್ವಾಹಕ ಅಧಿಕಾರಿಗಳ ಮೂಲಕ ಕ್ಷಿಪ್ರ ಕಾರ್ಯಪಡೆ ರಚಿಸಿ ಪರಿಸ್ಥಿತಿ ನಿರ್ವಹಿಸಲಾಗುತ್ತಿದೆ ಎಂದು ಸಚಿವ ವಿವರಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಹಳೆಯ ವಾಹನಗಳಿಗೆ HSRP ನಂಬರ್ ಪ್ಲೇಟ್ ಅಳವಡಿಕೆ ಗೊಂದಲ: ಸಾರಿಗೆ ಇಲಾಖೆಯ ಸ್ಪಷ್ಟನೆ
ಎಸ್ಸೆಸ್ಸೆಲ್ಸಿ ಗ್ರೇಡಿಂಗ್ ಪದ್ಧತಿಗೆ ರಾಜ್ಯಪಾಲರು ವಿರೋಧ, ನಾಳೆ ರಾಜಭವನಕ್ಕೆ ಕರವೇ ಮುತ್ತಿಗೆ