ಇಬ್ಬರು ಒಪ್ಪಿ ಅರ್ಜಿ ವಾಪಸ್ ಪಡೆದ್ರೆ ವ್ಯಾಜ್ಯ ಇತ್ಯರ್ಥ: ರೂಪ-ರೋಹಿಣಿಗೆ ಸುಪ್ರೀಂಕೋರ್ಟ್‌ ಸಲಹೆ

By Govindaraj S  |  First Published May 8, 2024, 10:33 AM IST

ಒಬ್ಬರು ಮತ್ತೊಬ್ಬರ ವಿರುದ್ಧ ಆರೋಪಗಳ ಮಾಡುವುದನ್ನು ಮುಂದುವರಿಸುವುದರ ಬದಲಾಗಿ ಸಂಧಾನ ಸಾಧ್ಯತೆಯತ್ತ ಗಮನಹರಿಸುವಂತೆ ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಐಪಿಎಸ್‌ ಅಧಿಕಾರಿ ರೂಪಾ ಮೌದ್ಗಿಲ್‌ಗೆ ಸುಪ್ರೀಂಕೋರ್ಟ್‌ ಸಲಹೆ ನೀಡಿದೆ.


ಬೆಂಗಳೂರು (ಮೇ.08): ಒಬ್ಬರು ಮತ್ತೊಬ್ಬರ ವಿರುದ್ಧ ಆರೋಪಗಳ ಮಾಡುವುದನ್ನು ಮುಂದುವರಿಸುವುದರ ಬದಲಾಗಿ ಸಂಧಾನ ಸಾಧ್ಯತೆಯತ್ತ ಗಮನಹರಿಸುವಂತೆ ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಐಪಿಎಸ್‌ ಅಧಿಕಾರಿ ರೂಪಾ ಮೌದ್ಗಿಲ್‌ಗೆ ಸುಪ್ರೀಂಕೋರ್ಟ್‌ ಸಲಹೆ ನೀಡಿದೆ. ಸಿಂಧೂರಿ ದೂರಿನ ಹಿನ್ನೆಲೆಯಲ್ಲಿ ದಾಖಲಾಗಿರುವ ಕ್ರಿಮಿನಲ್‌ ಮಾನಹಾನಿ ಪ್ರಕರಣ ರದ್ದುಪಡಿಸಲು ಕರ್ನಾಟಕ ಹೈಕೋರ್ಟ್‌ ನಿರಾಕರಿಸಿರುವುದನ್ನು ಪ್ರಶ್ನಿಸಿ ರೂಪಾ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿಗಳಾದ ಅಭಯ್‌ ಶ್ರೀನಿವಾಸ್‌ ಓಕ್‌ ಮತ್ತು ಪಂಕಜ್‌ ಮಿತ್ತಲ್‌ ಅವರ ನೇತೃತ್ವದ ವಿಭಾಗೀಯ ಪೀಠ ನಡೆಸಿತು.

ಇಬ್ಬರೂ ಅಧಿಕಾರಿಗಳು ಸಾರ್ವಜನಿಕ ಸೇವೆಯಲ್ಲಿದ್ದು, ಈ ನಡತೆ ಮುಂದುವರಿಯಬಾರದು. ಇಬ್ಬರೂ ಯುವ ಅಧಿಕಾರಿಗಳಾಗಿದ್ದು, ಈ ಹಣಾಹಣಿ ಮುಂದುವರಿದರೆ ಅವರ ವೃತ್ತಿಗೆ ಹಾನಿಯಾಗುತ್ತದೆ ಎಂದು ನ್ಯಾಯಾಲಯ ಹೇಳಿದೆ. ಉಭಯ ಪಕ್ಷಕಾರರು ಆರೋಪಗಳನ್ನು ಹಿಂಪಡೆಯಲು ಒಪ್ಪಿದರೆ ಬಾಕಿ ಇರುವ ಪ್ರಕರಣಗಳು ಸೇರಿ ಇಬ್ಬರ ನಡುವೆ ಬಾಕಿ ಇರುವ ಎಲ್ಲಾ ದಾವೆಗಳು ರದ್ದಾಗಲಿವೆ ಎಂದು ನ್ಯಾಯಾಲಯ ಹೇಳಿದೆ.

Tap to resize

Latest Videos

ಬಿಡಿಎ ಕಾಂಪ್ಲೆಕ್ಸ್ ಲೀಸ್‌ಗೆ ನೀಡಲು 200 ಕೋಟಿ ಕಿಕ್‌ ಬ್ಯಾಕ್: ಆರ್‌.ಅಶೋಕ್

ಸಿಂಧೂರಿ ವಿರುದ್ಧದ ಪೋಸ್ಟ್‌ ಡಿಲೀಟ್‌ಗೆ ರೂಪಾಗೆ ಸೂಚನೆ: ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ಜತೆಗಿನ ಕಿತ್ತಾಟ ಪ್ರಕರಣದಲ್ಲಿ ಐಪಿಎಸ್‌ ಅಧಿಕಾರಿ ಡಿ.ರೂಪಾ ಅವರಿಗೆ ಸುಪ್ರೀಂ ಕೋರ್ಟಲ್ಲಿ ಹಿನ್ನಡೆಯಾಗಿದೆ. ರೋಹಿಣಿ ಸಿಂಧೂರಿ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಹಾಕಿರುವ ಪೋಸ್ಟ್‌ಗಳನ್ನು 24 ಗಂಟೆಯೊಳಗೆ ತೆಗೆದು ಹಾಕುವಂತೆ ಡಿ.ರೂಪಾ ಅವರಿಗೆ ಕೋರ್ಟ್‌ ಸೂಚನೆ ನೀಡಿದೆ.

ಒಂದು ವೇಳೆ ಇದು ಸಾಧ್ಯವಾಗದಿದ್ದರೆ ಎಲ್ಲಾ ಟೀಕೆ-ಟಿಪ್ಪಣಿಗಳನ್ನು ಹಿಂಪಡೆದಿರುವ ಕುರಿತು ಪೋಸ್ಟ್‌ ಹಾಕಲು ಸೂಚಿಸಿದೆ. ರೋಹಿಣಿ ಸಿಂಧೂರಿ ಅವರು ಸಲ್ಲಿಸಿರುವ ಕ್ರಿಮಿನಲ್‌ ಮಾನನಷ್ಟ ಮೊಕದ್ದಮೆ ರದ್ದುಗೊಳಿಸುವಂತೆ ಕೋರಿ ರೂಪಾ ಅವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ವೇಳೆ ನ್ಯಾ. ಅಭಯನಚಂದ್ರ ಓಕಾ ನೇತೃತ್ವದ ದ್ವಿಸದಸ್ಯ ಪೀಠವು ಮೌಖಿಕವಾಗಿ ಈ ನಿರ್ದೇಶನ ನೀಡಿದೆ.

ಪ್ರಜ್ವಲ್‌ ರೇವಣ್ಣನದ್ದು ಅತಿರೇಕದ ಹೇಯ ಕೃತ್ಯ: ಸಚಿವ ಎಂ.ಬಿ.ಪಾಟೀಲ್

ಕೆಲ ತಿಂಗಳುಗಳ ಹಿಂದೆ ರೂಪ ಅವರು ರೋಹಿಣಿ ಸಿಂಧೂರಿ ಅವರ ಕೆಲ ವೈಯಕ್ತಿಕ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡದ್ದು ಮತ್ತು ಭ್ರಷ್ಚಾಚಾರದ ಆರೋಪ ಮಾಡಿದ ಹಿನ್ನೆಲೆಯಲ್ಲಿ ಇಬ್ಬರೂ ಮಹಿಳಾ ಅಧಿಕಾರಿಗಳು ಸಾರ್ವಜನಿಕವಾಗಿ ವಾಗ್ವಾದಕ್ಕಿಳಿದಿದ್ದರು. ಬಳಿಕ ರೂಪಾ ವಿರುದ್ಧ ರೋಹಿಣಿ ಸಿಂಧೂರಿ ಅವರು ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.

click me!