ಲೋಕ ಚುನಾವಣೆ ಹೊಸ್ತಿಲಲ್ಲೇ ಡಿಕೆಶಿ ವಿರುದ್ಧದ ಅಕ್ರಮ ಹಣ ವರ್ಗಾವಣೆ ಕೇಸ್ ರದ್ದು

Published : Mar 05, 2024, 01:21 PM ISTUpdated : Mar 05, 2024, 01:45 PM IST
ಲೋಕ ಚುನಾವಣೆ ಹೊಸ್ತಿಲಲ್ಲೇ ಡಿಕೆಶಿ ವಿರುದ್ಧದ ಅಕ್ರಮ ಹಣ ವರ್ಗಾವಣೆ ಕೇಸ್ ರದ್ದು

ಸಾರಾಂಶ

ಲೋಕಸಭಾ ಚುನಾವಣೆ ಹತ್ತಿರ ಇರುವಂತೆಯೇ ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ. ಹಣ ವರ್ಗಾವಣೆ ಕೇಸ್‌ನಲ್ಲಿ ಇಡಿ ದಾಖಲಿಸಿರುವ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್ ನೀಡಿರುವ ಆದೇಶವನ್ನು ಸುಪ್ರೀಂ ಕೋರ್ಟ್  ರದ್ದು ಮಾಡಿದೆ.

ನವದೆಹಲಿ (ಮಾ.5): ಲೋಕಸಭಾ ಚುನಾವಣೆ ಹತ್ತಿರ ಇರುವಂತೆಯೇ ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ. ಹಣ ವರ್ಗಾವಣೆ ಕೇಸ್‌ನಲ್ಲಿ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿರುವ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್ ನೀಡಿರುವ ಆದೇಶವನ್ನು ಸುಪ್ರೀಂ ಕೋರ್ಟ್  ರದ್ದು ಮಾಡಿದೆ. ಈ ಮೂಲಕ 2018ರ ಹಣ ವರ್ಗಾವಣೆ ಪ್ರಕರಣವನ್ನು ರದ್ದು ಮಾಡಿದೆ. ಇದೇ ಪ್ರಕರಣದಲ್ಲಿ ಡಿಕೆಶಿ ಜೈಲು ಪಾಲಾಗಿದ್ದರು. 

 ಈ ಪ್ರಕರಣದಲ್ಲಿ ಡಿಕೆಶಿ ಪಿತೂರಿ ಆರೋಪ ಹೊರಿಸಿದ್ದ ಇ ಡಿ  ಪಿಎಂಎಲ್ ಕಾಯಿದೆಯ 120B (ಕ್ರಿಮಿನಲ್ ಪಿತೂರಿ) ಅಡಿ  ಪ್ರಕರಣ ದಾಖಲಿಸಿತ್ತು. ಈ ಅಪರಾಧಗಳು ಆದಾಯ ತೆರಿಗೆ ಕಾಯಿದೆಯ ವೇಳಾಪಟ್ಟಿಯ ಭಾಗವಾಗಿರದ ಕಾರಣ ಹೈಕೋರ್ಟಿನ ತೀರ್ಪನ್ನು ರದ್ದುಗೊಳಿಸಲಾಗಿದೆ. PML ಕಾಯಿದೆಯ ಅಡಿಯಲ್ಲಿ ಎಲ್ಲಾ ಪ್ರಕ್ರಿಯೆಗಳನ್ನು ರದ್ದುಗೊಳಿಸಲಾಗಿದೆ. ಹೀಗಾಗಿ ಸುಪ್ರೀಂ ಆದೇಶದಿಂದ ಡಿಕೆಶಿಗೆ ಬಿಗ್‌ ರಿಲೀಫ್ ಸಿಕ್ಕಿದಂತಾಗಿದೆ. ಮಾತ್ರವಲ್ಲ   ಜಾರಿ ನಿರ್ದೇಶನಾಲಯದ ತನಿಖೆಯಿಂದ ನೆಮ್ಮದಿ ಸಿಕ್ಕಿದೆ.

ತೇಜಸ್ವಿ ಸೂರ್ಯ, ಸೂಲಿಬೆಲೆ ಹತ್ಯೆಗೆ ಸಂಚು, ಆರೋಪಿ ಅಜರ್‌ ಬಂಧನ

ಡಿಕೆ ಶಿವಕುಮಾರ್ ವಿರುದ್ಧದ ಪ್ರಕರಣದ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ಪೀಠ ಈ ಆದೇಶ ನೀಡಿದೆ. 2017ರ ಆಗಸ್ಟ್‌ನಲ್ಲಿ  ದೆಹಲಿಯಲ್ಲಿರುವ ಅವರ ಫ್ಲಾಟ್‌ಗಳಲ್ಲಿ ಲೆಕ್ಕವಿಲ್ಲದಷ್ಟು ಹಣ ಸಿಕ್ಕಿತ್ತು. ಈ ಹಿನ್ನೆಲೆ ಜಾರಿ ನಿರ್ದೇಶನಾಲಯ ಡಿಕೆ ಶಿವಕುಮಾರ್‌ ವಿರುದ್ಧ ಐಪಿಸಿ ಸೆಕ್ಷನ್‌ 120 B ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿತ್ತು.

Rameshwaram Cafe Blast ದೇಶದಾದ್ಯಂತ 17 ಕಡೆ ಎನ್‌ಐಎ ದಿಢೀರ್ ದಾಳಿ, ಐವರು ಅರೆಸ್ಟ್

ಕೇಸ್ ದಾಖಲಾಗುತ್ತಿದ್ದಂತೆಯೇ ಇಡಿ ಸಮನ್ಸ್‌ ಅನ್ನು ರದ್ದುಗೊಳಿಸುವಂತೆ ಡಿಕೆಶಿ ಹೈಕೋರ್ಟ್‌ ಮೊರೆ ಹೋಗಿದ್ದರು. ಆದರೆ, ಇಡಿ ಸಮನ್ಸ್‌ ರದ್ದುಪಡಿಸಲು ಕರ್ನಾಟಕ ಹೈಕೋರ್ಟ್‌ ನಿರಾಕರಿಸಿತ್ತು. ಈ ತೀರ್ಪು ಪ್ರಶ್ನಿಸಿ ಡಿಕೆಶಿ ಸುಪ್ರೀಂ ಕೋರ್ಟ್ ಮೆಟ್ಟಲೇರಿದ್ದರು. ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್‌ ಇಂದು ಪ್ರಕರಣ ರದ್ದು ಮಾಡಿದೆ. ಇದಕ್ಕೆ ಇಡಿ ಸುಪ್ರೀಂ ಆದೇಶವನ್ನು ಮರುಪರಿಶೀಲಿಸಲು ಮನವಿ ಮಾಡಿಕೊಂಡಿದೆ. ಒಂದು ವೇಳೆ ಮರುಪರಿಶೀಲನಾ ಮನವಿಗೆ ಒಪ್ಪಿ ಅಂಗೀಕರಿಸಿದರೆ, ಮತ್ತೆ ಇಡಿಯಿಂದ ತನಿಖೆ ಮುಂದುವರಿಯುವ ಸಾಧ್ಯತೆ ಇದೆ.  ಇನ್ನು  ಭ್ರಷ್ಚಾಚಾರ ಪ್ರಕರಣ ಡಿಕೆಶಿ ವಿರುದ್ಧ ಹಾಗೆಯೇ ಮುಂದುವರೆಯಲಿದೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಕಾರಲ್ಲ, ಸರ್ಕಾರ ಕೆಲಸಕ್ಕೆ ಓಡಾಡಲು ಹೆಲಿಕಾಪ್ಟರ್, ವಿಮಾನ ಖರೀದಿಗೆ ಡಿಕೆಶಿ ನೇತೃತ್ವದಲ್ಲಿ ಸಭೆ
ರಾಜ್ಯದಲ್ಲಿ 2.84 ಲಕ್ಷ ಸರ್ಕಾರಿ ಹುದ್ದೆ ಖಾಲಿ: 24,300 ಹುದ್ದೆ ಭರ್ತಿಗೆ ಅಂಕಿತ! ಇಲಾಖಾವಾರು ಮಾಹಿತಿ ಇಲ್ಲಿದೆ!