ಡಿಸಿಎಂ ಡಿ.ಕೆ. ಶಿವಕುಮಾರ್ ಮೇಲಿದ್ದ ಆದಾಯ ಮೀರಿ ಅಕ್ರಮ ಆಸ್ತಿ ಗಳಿಕೆ ಪ್ರಕರಣವನ್ನು ರದ್ದುಗೊಳಿಸುವಂತೆ ಸಲ್ಲಿಕೆ ಮಾಡಿದ್ದ ಮನವಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.
ನವದೆಹಲಿ (ಜು.15): ಡಿಸಿಎಂ ಡಿ.ಕೆ. ಶಿವಕುಮಾರ್ ಮೇಲಿದ್ದ ಆದಾಯ ಮೀರಿ ಅಕ್ರಮ ಆಸ್ತಿ ಗಳಿಕೆ ಪ್ರಕರಣವನ್ನು ರದ್ದುಗೊಳಿಸುವಂತೆ ಸಲ್ಲಿಕೆ ಮಾಡಿದ್ದ ಮನವಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.
ಕಳೆದ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಡಿ.ಕೆ.ಶಿವಕುಮಾರ್ (DK Shivamukar) ಇಂಧನ ಸಚಿವರಾಗಿದ್ದಾಗ ಅಕ್ರಮವಾಗಿ ಆದಾಯಕ್ಕಿಂತಲೂ ಮಿರಿದ ಆಸ್ತಿ ಗಳಿಕೆ (Illegal property gain) ಮಾಡಿದ್ದಾರೆಂಬ ಆರೋಪದ ಸಿಬಿಐ ತನಿಖೆ (CBI Investigation) ನಡೆಸುತ್ತಿದೆ. ಆದರೆ, ಪುನಃ ಅಧಿಕಾರಕ್ಕೆ ಬಂದಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ತಮ್ಮ ಮೇಲೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣವನ್ನು ಸರ್ಕಾರದಿಂದ ಹಿಂಪಡೆಯಲಾಗಿದೆ. ಈ ಹಿನ್ನೆಲೆಯಲ್ಲಿ ಸಿಬಿಐ ತನಿಖೆ ಮಾಡುತ್ತಿರುವುದನ್ನು ಸ್ಥಗಿತಗೊಳಿಸುವಂತೆ ಹೈಕೋರ್ಟ್ ಮೆಟ್ಟಿಲೇರಿದ್ದರು. ಆದರೆ, ಹೈಕೋರ್ಟ್‌ನಲ್ಲಿ ಈ ಅರ್ಜಿಯನ್ನು ತಿರಸ್ಕರಿಸಿದ್ದರಿಂದ ಪುನಃ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಹೋಗಿದ್ದರು.
ವಾಲ್ಮೀಕಿ ನಿಗಮದಲ್ಲಿ ವ್ಯವಸ್ಥಿತವಾಗಿ ವಂಚನೆ ಮಾಡಿದ್ದಾರೆ: ಡಿ.ಕೆ.ಶಿವಕುಮಾರ್
ಇನ್ನು ಸುಪ್ರೀಂ ಕೋರ್ಟ್‌ನಲ್ಲಿ ಸೋಮವಾರ ಡಿ.ಕೆ. ಶಿವಕುಮಾರ್ ಅರ್ಜಿಯನ್ನು ವಿಚಾರಣೆ ಮಾಡಿದ ನ್ಯಾಯಮೂರ್ತಿ ಬೇಲಾ ಎಂ. ತ್ರಿವೇದಿ (Bela M Trivedi) ನೇತೃತ್ವದ ಪೀಠವು ನಿಮ್ಮ ಮೇಲಿರುವ ಪ್ರಕರಣ ವಜಾಗೊಳಿಸಲು ಸಾಧ್ಯವಿಲ್ಲವೆಂದು ನಿರಾಕರಣೆ ಮಾಡಿದೆ. ಈ ಮೂಲಕ ಡಿ.ಕೆ. ಶಿವಕುಮಾರ್ ಸಲ್ಲಿಕೆ ಮಾಡಿದ್ದ ಮನವಿ ಅರ್ಜಿಯನ್ನು ತಿರಸ್ಕರಿಸಿದೆ. ಇದರಿಂದ ಪುನಃ ಡಿಕೆಶಿಗೆ ಸಿಬಿಐ (CBI) ಸಂಕಷ್ಟ ಎದುರಾಗಲಿದೆ. ಈಗಾಗಲೇ ಅಕ್ರಮ ಹಣ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಹುಪಾಲು ತನಿಖೆ ಮುಕ್ತಾಯಗೊಂಡಿದ್ದು, ಇನ್ನು ಶೇ.20 ರಷ್ಟು ತನಿಖೆ ಮಾಡುವುದು ಬಾಕಿಯಿದೆ. ಈ ಹಿನ್ನೆಲೆಯಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ವಿಚಾರಣೆ ಮಾಡಬೇಕಿದೆ ಎಂದು ಸಿಬಿಐ ಹೇಳಿದೆ. ಆದರೆ, ಸಿಬಿಐ ವಿಚಾರಣೆಗೆ ಹಾಜರಾಗದೇ ಕೋರ್ಟ್ ಮೂಲಕ ತಪ್ಪಿಸಿಕೊಳ್ಳುತ್ತಿದ್ದಾರೆ.
ವಿಧಾನ ಮಂಡಲ ಅಧಿವೇಶನ ಚರ್ಚೆಗೆ ಸಮರ್ಪಕ ಉತ್ತರ ಕೊಡಿ; ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ
ಈಗ ಸುಪ್ರೀಂ ಕೋರ್ಟ್‌ನಿಂದ ಅಕ್ರಮ ಆಸ್ತಿ ಗಳಿಕೆಗೆ ಸಂಬಂಧಿಸಿದ ಅರ್ಜಿಯನ್ನು ವಜಾಗೊಳಿಸಲು ನಿರಾಕರಣೆ ಮಾಡಿದ್ದರಿಂದ ಪುನಃ ಸಿಬಿಐ ತನಿಖೆ ಎದುರಿಸುವ ಸಾಧ್ಯತೆಯಿದೆ. ಡಿ.ಕೆ.ಶಿವಕುಮಾರ್ ಅವರನ್ನು ವಿಚಾರಣೆ ಮಾಡಿದ ಬಳಿಕ ಸಿಬಿಐ ಚಾರ್ಜ್ ಶೀಟ್ ಸಲ್ಲಿಕೆ ಮಾಡಲಿದೆ. ಆಗ ಅಕ್ರಮ ಹಣ ಗಳಿಕೆಯ ಮೂಲಗಳನ್ನು ಪತ್ತೆಹಚ್ಚಿ ಸಾರ್ವಜನಿಕ ಹಣ ದುರುಪಯೋಗ ಮಾಡಿರುವುದು ಸಾಬೀತಾದಲ್ಲಿ ಶಿಕ್ಷೆಯಾಗುವ ಸಾಧ್ಯತೆಯನ್ನೂ ಅಲ್ಲಗಳೆಯುವಂತಿಲ್ಲ.