ಅಕ್ರಮ ಆಸ್ತಿ ಗಳಿಕೆ ಕೇಸಲ್ಲಿ ಡಿ.ಕೆ. ಶಿವಕುಮಾರ್‌ಗೆ ಬಿಗ್‌ ರಿಲೀಫ್‌ ಕೊಟ್ಟ ಸುಪ್ರೀಂ ಕೋರ್ಟ್: ಸಿಬಿಐಗೆ ಹಿನ್ನಡೆ

By Sathish Kumar KH  |  First Published Jul 31, 2023, 12:34 PM IST

ಡಿಸಿಎಂ ಡಿ.ಕೆ. ಶಿವಕುಮಾರ್‌ ಅಕ್ರಮ ಆಸ್ತಿ ಗಳಿಕೆ ಪ್ರಕರಣದ ತನಿಖೆಗೆ ತಡೆಯಾಜ್ಞೆ ನೀಡಿರುವ ಹೈಕೋರ್ಟ್‌ ಆದೇಶದಲ್ಲಿ ಮಧ್ಯಪ್ರವೇಶ ಮಾಡುವುದಿಲ್ಲ ಎಂದು ಸುಪ್ರೀಂ ಕೋರ್ಟ್‌ ತಿಳಿಸಿದೆ.


ನವದೆಹಲಿ (ಜು.31): ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರ ಆದಾಯಕ್ಕಿಂತ ಮೀರಿ ಅಕ್ರಮ ಆಸ್ತಿ ಗಳಿಕೆ ಪ್ರಕರಣದ ತನಿಖೆಗೆ ತಡೆಯಾಜ್ಞೆ ತೆರವುಗೊಳಿಸುವಂತೆ ಸಿಬಿಐ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮಾಡಿದ ಸುಪ್ರೀಂ ಕೋರ್ಟ್‌ ತ್ರಿಸದಸ್ಯ ಪೀಠವು ಹೈಕೋರ್ಟ್‌ ಆದೇಶದಲ್ಲಿ ಮಧ್ಯಪ್ರವೇಶ ಮಾಡುವುದು ಸಾಧ್ಯವಿಲ್ಲ ಎಂದು ಆದೇಶ ಹೊರಡಿಸಿದೆ.

ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು ಆದಾಯಕ್ಕೂ ಮೀರಿ‌ ಆಸ್ತಿಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಲೋಕಸಭಾ ಚುನಾವಣೆ ವೇಳೆ ತನಿಖೆಗೆ ತಡೆಯಾಜ್ಞೆ ನೀಡುವಂತೆ ಹೈಕೋರ್ಟ್‌ನಿಂದ ಆದೇಶ ನೀಡಲಾಗಿತ್ತು. ಇದನ್ನು ಪ್ರಶ್ನೆ ಮಾಡಿದ್ದ ಕೇಂದ್ರೀಯ ತನಿಖಾ ದಳ (ಸಿಬಿಐ) ಕರ್ನಾಟಕ ಹೈಕೋರ್ಟ್‌ನ ಮಧ್ಯಂತರ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ ಮೊರೆ ಹೋಗಿತ್ತು. ಈ ಕುರಿತು ಚುನಾವಣಾ ಸಂದರ್ಭದಲ್ಲಿ ವಿಚಾರಣೆ ಮಾಡಿದ್ದ ಸುಪ್ರೀಂ ಕೋರ್ಟ್‌ ವಿಚಾರಣೆಯಲ್ಲಿ ಜು.31ಕ್ಕೆ ನಿಗದಿ ಮಾಡಿತ್ತು. ಇಂದು (ಸೋಮವಾರ) ಕರ್ನಾಟಕ ಹೈಕೋರ್ಟ್‌ನ ಮಧ್ಯಂತರ ಆದೇಶದ ವಿರುದ್ಧ ಸಿಬಿಐ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆ ಮಾಡಿದ ಸುಪ್ರೀಂ ಕೋರ್ಟ್ ತ್ರಿಸದಸ್ಯ ಪೀಠವು ಮಧ್ಯಂತರ ಆದೇಶದಲ್ಲಿ ನಾವು ಮಧ್ಯಪ್ರವೇಶ ಮಾಡುವುದಿಲ್ಲ ಎಂದು ತಿಳಿಸಿದೆ. ಈ ಮೂಲಕ ಡಿಸಿಎಂ ಡಿ.ಕೆ. ಶಿವಕುಮಾರ್‌ಗೆ ಬಿಗ್‌ ರಿಲೀಫ್‌ ಸಿಕ್ಕಂತಾಗಿದೆ. 

Tap to resize

Latest Videos

ಐದು ಗ್ಯಾರಂಟಿಗಳ ಕಾರಣದಿಂದ ಈ ವರ್ಷ ಸರ್ಕಾರದಿಂದ ಅಭಿವೃದ್ಧಿ ಸಾಧ್ಯವಿಲ್ಲ: ಡಿಸಿಎಂ ಡಿಕೆ ಶಿವಕುಮಾರ್‌

ಪ್ರಕರಣದ ಹಿನ್ನೆಲೆಯೇನು? ಕಾಂಗ್ರೆಸ್‌ ಸರ್ಕಾರದ ಕಳೆದ ಅವಧಿಯಲ್ಲಿ 2013ರಿಂದ 2018ರ ಡಿ.ಕೆ. ಶಿವಕುಮಾರ್‌ ಅವರು ಇಂಧನ ಖಾತೆ ಸಚಿವರಾಗಿದ್ದರು. ಈ ವೇಳೆ ಆದಾಯಕ್ಕೂ ಮೀರಿ ಅಕ್ರಮ ಆಸ್ತಿ ಗಳಿಕೆ ಮಾಡಿದ್ದಾರೆಂಬ ಆರೋಪದ ಹಿನ್ನೆಲೆಯಲ್ಲಿ ಸಿಬಿಐ ತನಿಖೆ ನಡೆಸುತ್ತಿದೆ. ಆದರೆ, ಕರ್ನಾಟಕ ವಿಧಾನಸಭಾ ಚುನಾವಣೆ ವೇಳೆ ವಿಚಾರಣೆಗೆ ಬರುವಂತೆ ಸಿಬಿಐ ನೋಟಿಸ್‌ ನಿಡಿದ್ದರಿಂದ ತಮ್ಮ ಚುನಾವಣಾ ಪ್ರಚಾರ ಕಾರ್ಯಗಳಿಗೆ ಹಿನ್ನಡೆ ಉಂಟಾಗಲಿದ್ದು, ತನಿಖೆಗೆ ತಾತ್ಕಾಲಿಕ ತಡೆಯಾಜ್ಞೆ ನೀಡುವಂತೆ ಡಿ.ಕೆ. ಶಿವಕುಮಾರ್‌ ಹೈಕೋರ್ಟ್‌ಗೆ ಅರ್ಜಿ ಸಲ್ಲಿಕೆ ಮಾಡಿದ್ದರು. ಇದನ್ನು ವಿಚಾರಣೆ ಮಾಡಿದ್ದ ಹೈಕೋರ್ಟ್‌ ಮಧ್ಯಂತರ ಆದೇಶದ ಮೂಲಕ ಸಿಬಿಐ ತನಿಖೆಗೆ ತಡೆಯಾಜ್ಞೆ ನೀಡಿತ್ತು. ಆದರೆ, ತನಿಖೆ ತಡೆಯಾಜ್ಞೆಯನ್ನು ತೆರವುಗೊಳಿಸಲು ಸಿಬಿಐ ಸುಪ್ರೀಂ ಕೋರ್ಟ್‌ ಮೊರೆ ಹೋಗಿತ್ತು. 

ಹಿಂದಿನ ರದ್ದಾದ ಕಾಮಗಾರಿಗಳಿಗೆ ಮರುಚಾಲನೆ: ಡಿಸಿಎಂ ಡಿ.ಕೆ. ಶಿವಕುಮಾರ್‌

ಮಧ್ಯಂತರ ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾ: 
ಸುಪ್ರೀಂ ಕೋರ್ಟ್‌ನಲ್ಲಿ ನ್ಯಾ.ಬಿ.ಆರ್ ಗವಾಯಿ ನೇತೃತ್ವದ ತ್ರಿಸದ್ಯ ಪೀಠವು ಸಿಬಿಐ ಸಲ್ಲಿಕೆ ಮಾಡಿದ್ದ ಡಿ.ಕೆ. ಶಿವಕುಮಾರ್‌ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣದ ತನಿಖೆಗೆ ತಡೆಯಾಜ್ಞೆ ತೆರವು ಕೋರಿ‌ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದೆ. ಕರ್ನಾಟಕ ಹೈಕೋರ್ಟ್‌ನ ಮಧ್ಯಂತರ ಆದೇಶದಲ್ಲಿ ಮಧ್ಯಪ್ರವೇಶ ಸಾಧ್ಯವಿಲ್ಲ ಎಂದು ತಿಳಿಸಿದೆ. ಇನ್ನು ಕರ್ನಾಟಕ ಹೈಕೋರ್ಟ್‌ನಿಂದ ಚುನಾವಣಾ ಕಾರ್ಯದ ನಿಮಿತ್ತ ನೀಡಲಾಗಿದ್ದ ತಡೆಯಾಜ್ಞೆಯನ್ನು ತೆರವು ಮಾಡಿದ ನಂತರ  ಸಿಬಿಐ ತನಿಖಾ ಕಾರ್ಯವು ಮುಮದುವರೆಯಲಿದೆ. 

click me!