ಬಿಬಿಎಂಪಿ ಚುನಾವಣೆ ನಡೆಸಲು ಸುಪ್ರೀಂಕೋರ್ಟ್ ಸೂಚನೆ

Published : May 10, 2022, 05:20 PM ISTUpdated : May 10, 2022, 05:28 PM IST
ಬಿಬಿಎಂಪಿ ಚುನಾವಣೆ ನಡೆಸಲು ಸುಪ್ರೀಂಕೋರ್ಟ್ ಸೂಚನೆ

ಸಾರಾಂಶ

* ಇಡೀ ದೇಶಾದ್ಯಂತ ಕಾರ್ಪೋರೇಷನ್ ಎಲೆಕ್ಷನ್ ಗೆ ತ್ರಿದಸ್ಯ ಪೀಠ ಮಹತ್ವದ ತೀರ್ಪು  * ಬಿಬಿಎಂಪಿ ಚುನಾವಣೆ ನಡೆಸಲು ಸುಪ್ರೀಂಕೋರ್ಟ್ ಸೂಚನೆ * ಹಳೇ ವಾಡ್೯ ಸಂಖ್ಯೆಗೆ ಚುನಾವಣೆ 

ಬೆಂಗಳೂರು, (ಮೇ.10): ಬಿಬಿಎಂಪಿ ಚುನಾವಣೆ (BBMP Elecction) ನಡೆಸಲು ಸುಪ್ರೀಕೋರ್ಟ್ ಸೂಚನೆ ನೀಡಿದೆ. ಇಡೀ ದೇಶಾದ್ಯಂತ ಕಾರ್ಪೋರೇಷನ್ ಎಲೆಕ್ಷನ್ ಸುಪ್ರೀಂಕೋರ್ಟ್ (Supreme Court)  ತ್ರಿದಸ್ಯ ಪೀಠ ಮಹತ್ವದ ತೀರ್ಪು ನೀಡಿದೆ.

ಡಿ ಲಿಮಿಟೇಷನ್ ಮಾಡಿ ಆದೇಶ ಹೊರಡಿಸದೆ. ಈ ಹಿನ್ನೆಲೆಯಲ್ಲಿ 198 ವಾರ್ಡ್ ಗಳಿಗೆ ಮಾತ್ರ ಈ ಬಾರಿ ಚುನಾವಣೆ ನಡೆಯಲಿದೆ. ಎರಡು ವಾರದಲ್ಲಿ ನೋಟಿಫಿಕೇಷನ್ ಹೊರಡಿಸುವಂತೆ ಸುಪ್ರೀಂಕೋರ್ಟ್ ಸೂಚಿಸಿದೆ.

ಸುರೇಶ್ ಮೋಹನ್ ಮತ್ತು ಮಧ್ಯಪ್ರದೇಶದ ನಡುವೆ ಇದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಹಳೇ ವಾಡ್೯ ಸಂಖ್ಯೆಗೆ ಚುನಾವಣೆ ಮಾಡಿ. ಎಸ್ಸಿ, ಎಸ್ಟಿ ಮೀಸಲಾತಿ ಹೊರತು ಪಡಿಸಿ ಉಳಿದವುಗಳನ್ನು ಜನರಲ್ ಎಂದು ಪರಿಗಣಿಸಿ ಚುನಾವಣೆ ನಡೆಸಿ ಎಂದು ತೀರ್ಪು ನೀಡಿದೆ.

BBMP ಚುನಾವಣೆ ಅರ್ಜಿ ತುರ್ತು ವಿಚಾರಣೆ ನಡೆಸಲು ಸುಪ್ರೀಂ ಸಮ್ಮತಿ

198 ವಾರ್ಡ್‌ಗಳನ್ನು ಹೊಂದಿರುವ ಬಿಬಿಎಂಪಿಯ ವಾರ್ಡ್‌ಗಳ ಸಂಖ್ಯೆಯನ್ನು ಹೆಚ್ಚಿಸಲು ಸರ್ಕಾರ ತೀರ್ಮಾನ ಕೈಗೊಂಡಿದ್ದು, ಚುನಾವಣೆ ವಿಳಂಬವಾಗಿತ್ತು. 

ಕರ್ನಾಟಕ ನಗರ ಪಾಲಿಕೆಯ ಮೂರನೇ ತಿದ್ದುಪಡಿ ಕಾಯಿದೆ (2020) ಅನುಸಾರ 243 ವಾರ್ಡ್‌ಗಳಿಗೆ ಬದಲಾಗಿ 2020ರ ಸೆ.23ರಂದು ಹೊರಡಿಸಿರುವ ಅಧಿಸೂಚನೆಯಂತೆ 198 ವಾರ್ಡ್‌ಗಳಿಗೆ ಆರು ವಾರಗಳ ಒಳಗಾಗಿ ಚುನಾವಣೆ ನಡೆಸುವಂತೆ ಕರ್ನಾಟಕ ಹೈಕೋರ್ಟ್‌ 2020ರ ಡಿಸೆಂಬರ್‌ 4ರಂದು ರಾಜ್ಯ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಿತ್ತು.

ನಂತರ ರಾಜ್ಯ ವಿಧಾನಸಭೆಯು ಹೈಕೋರ್ಟ್‌ ಆದೇಶವನ್ನು ರದ್ದುಪಡಿಸಿ 243 ವಾರ್ಡ್‌ಗಳಿಗೆ ಚುನಾವಣೆ ನಡೆಸಬೇಕು ಎಂಬ ನಿರ್ಣಯ ಅಂಗೀಕರಿಸಿತ್ತು. ಅಲ್ಲದೇ ಹೈಕೋರ್ಟ್‌ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿತ್ತು.

ಬಿಬಿಎಂಪಿ ಚುನಾವಣೆಗೆ ಹೆದರಲ್ಲ, ಎದುರಿಸ್ತೀವಿ ಎಂದ ಅಶೋಕ್
ಮಧ್ಯಪ್ರದೇಶದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆ ವಿಳಂಬ ಕುರಿತ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ದೇಶಾದ್ಯಂತ ಸ್ಥಳೀಯ ಸಂಸ್ಥೆಗಳ ಚುನಾವಣೆ ತಡೆ ಹಿಡಿಯದೇ ಕೂಡಲೇ ನಡೆಸುವಂತೆ ಆದೇಶಿಸಿದೆ. ಈ ಬಗ್ಗೆ ಪ್ರತಿಕ್ರಿಯಿಸಿದ ಸಚಿವ ಆರ್ ಅಶೋಕ್,ಬಿಬಿಎಂಪಿ ಚುನಾವಣೆಗೆ ನಾವು ಹೆದರಲ್ಲ, ಎದುರಿಸ್ತೀವಿ ಎಂದರು.

ಕರ್ನಾಟಕದ ಅರ್ಜಿ ಕೂಡ ಸುಪ್ರೀಂಕೋರ್ಟ್ ಮುಂದಿದ್ದು, ಅದರ ವಿಚಾರಣೆ ನಡೆದಿದೆ. ಅದರ ನಡುವೆ ಈ ತೀರ್ಪು ಬಂದಿದ್ದು, ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು. ಆದರೆ ಚುನಾವಣೆ ಘೋಷಣೆ ವಿಷಯ ಚುನಾವಣಾಧಿಕಾರಿಗೆ ಸಂಬಂಧಿಸಿದ್ದೇ ಹೊರತು ಸರಕಾರಕ್ಕೆ ಅಲ್ಲ ಎಂದು ಹೇಳಿದರು.

ಬಿಜೆಪಿ ಪಕ್ಷ ಚುನಾವಣೆ ಎದುರಿಸಲು ಸಜ್ಜಾಗಿದೆ ಹೊರತು ಹೆದರಿಕೆ ಇಲ್ಲ. ಬಿಬಿಎಂಪಿ ಚುನಾವಣೆ ನಡೆಸುವುದಾದರೆ ಹಿಂದೂಳಿದ ವರ್ಗ, ಮಹಿಳೆ ಮತ್ತು ಎಸ್ಸಿ/ಎಸ್ಟಿ ಮೀಸಲು ಕುರಿತು ತೀರ್ಮಾನ ಕೈಗೊಳ್ಳಲಾಗುವುದು. ಸುಪ್ರೀಂಕೋರ್ಟ್ ಕೂಡ ಈ ಹಿಂದೆ ಚುನಾವಣೆ ನಡೆದ ವಾರ್ಡ್ ಗಳಷ್ಟೇ ಚುನಾವಣೆ ನಡೆಸಲು ಸೂಚಿಸಿದೆ ಎಂದು ತಿಳಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಇನ್ಮುಂದೆ ನೂರು ಗ್ಯಾರಂಟಿ ಘೋಷಣೆ ಮಾಡಿದರೂ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ: ಛಲವಾದಿ ನಾರಾಯಣಸ್ವಾಮಿ
Breaking ಮಂಡ್ಯ ಬಸ್ ಅಪಘಾತದಲ್ಲಿ 23 ಪ್ರಯಾಣಿಕರಿಗೆ ಗಾಯ, ಇಬ್ಬರು ಗಂಭೀರ