ಗೌರಿ ಲಂಕೇಶ್ ಹತ್ಯೆ: ಮೋಹನ್ ನಾಯಕ್ ಜಾಮೀನು ರದ್ದತಿಗೆ ರಾಜ್ಯ ಸರ್ಕಾರ ಸಲ್ಲಿಸಿದ್ದ ಅರ್ಜಿ ವಜಾ

By Gowthami KFirst Published Aug 22, 2024, 12:57 PM IST
Highlights

ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಆರೋಪಿ ಮೋಹನ್ ನಾಯಕ್‌ಗೆ ಜಾಮೀನು ನೀಡಿದ್ದ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಲಾಗಿದೆ. ಗೌರಿ  ಸಹೋದರಿ ಕವಿತಾ ಲಂಕೇಶ್ ಮತ್ತು ಕರ್ನಾಟಕ ಸರ್ಕಾರ ಅರ್ಜಿ ಸಲ್ಲಿಸಿತ್ತು.

ನವದೆಹಲಿ(ಆ.22): ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಮೋಹನ್‌ ನಾಯಕ್‌ ಗೆ ಜಾಮೀನು ನೀಡಿದ ಹೈಕೋರ್ಟ್‌ ಆದೇಶ ಪ್ರಶ್ನಿಸಿ  ಜಾಮೀನು ಅರ್ಜಿ ವಜಾಗೊಳಿಸುವಂತೆ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ್ದ ವಿಶೇಷ ಅರ್ಜಿ ವಜಾಗೊಂಡಿದೆ.

ಗೌರಿ ಸಹೋದರಿ ಕವಿತಾ ಲಂಕೇಶ್ ಮತ್ತು ಕರ್ನಾಟಕ ರಾಜ್ಯ ಸರ್ಕಾರ ,  ಮೋಹನ್‌ ನಾಯಕ್‌ ಗೆ ಜಾಮೀನು ನೀಡಿದ ಹೈಕೋರ್ಟ್‌ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ ಗೆ ಮೇಲ್ಮನವಿ ಅರ್ಜಿ ಸಲ್ಲಿಸಿತ್ತು. ನ್ಯಾ.ಬೇಲಾ ಎಂ ತ್ರಿವೇದಿ ನೇತೃತ್ವದ ಸುಪ್ರೀಂ ಪೀಠ  ಹೈಕೋರ್ಟ್ ಆದೇಶದಲ್ಲಿ ನಾವು ಮಧ್ಯ ಪ್ರವೇಶ ಮಾಡಲ್ಲ ಎಂದು ಕಾರಣ ನೀಡಿ, ಅರ್ಜಿಯನ್ನು ವಜಾಗೊಳಿಸಿದೆ.

Latest Videos

3 ಲಕ್ಷಕ್ಕೂ ಹೆಚ್ಚು ಕೋಟ್ಯಾಧಿಪತಿಗಳು ವಾಸಿಸುವ ವಿಶ್ವದ ಅತ್ಯಂತ ಶ್ರೀಮಂತ ನಗರವಿದು!

ಗೌರಿ ಲಂಕೇಶ್‌ ಅವರನ್ನು 2017ರ ಸೆ.5ರಂದು ಹತ್ಯೆ ಮಾಡಲಾಗಿತ್ತು. ಈ ಪ್ರಕರಣದ ಆರೋಪಿ ಮೋಹನ್‌ ನಾಯಕ್‌ಗೆ ಕರ್ನಾಟಕ ಹೈಕೋರ್ಟ್‌ 2023ರ ಡಿ.7ರಂದು ಜಾಮೀನು ನೀಡಿತ್ತು. ಇದನ್ನು ವಿರೋಧಿಸಿ ಕರ್ನಾಟಕ ಸರ್ಕಾರವು ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿತ್ತು. ಈ ಮಧ್ಯೆ, ಜನವರಿಯಲ್ಲಿ ಗೌರಿ ಲಂಕೇಶ್‌ ಸೋದರಿ ಕವಿತಾ ಲಂಕೇಶ್ ಕೂಡ ಈ ಸಂಬಂಧ ಅರ್ಜಿ ಸಲ್ಲಿಸಿದ್ದರು.

ಬೆಂಗಳೂರಿಗರಿಗೆ ಶಾಕ್! ನಾನು ನೀರಿನ ಬಿಲ್ ಹೆಚ್ಚಳ ಮಾಡೇ ಮಾಡುತ್ತೇನೆ: ಡಿಕೆ ಶಿವಕುಮಾರ್‌

ಇಡೀ ಪ್ರಕರಣದಲ್ಲಿ 11ನೇ ಆರೋಪಿಯಾಗಿರುವ  ಆರೋಪಿ ಮೋಹನ್ ನಾಯಕ್  ಜಾಮೀನು ಪಡೆದ ಮೊದಲಿಗನಾಗಿದ್ದಾನೆ. ಗೌರಿ ಲಂಕೇಶ್ ಹತ್ಯೆಯ ಪ್ರಮುಖ ರೂವಾರಿ ಅಮೋಲ್ ಕಾಳೆ. ಪರಶುರಾಮ್ ವಾಗ್ಮೋರೆ ಗುಂಡು ಹಾರಿಸಿದ್ದರೆ, ಬೈಕ್ ಚಲಾಯಿಸಿದ ಆರೋಪ ಗಣೇಶ್ ಮಿಸ್ಕಿನ್ ಮೇಲಿದೆ. ಪ್ರಕರಣದ ತನಿಖೆ ನಡೆಸಿದ್ದ ವಿಶೇಷ ತನಿಖಾ ತಂಡ  (ಎಸ್‌ಐಟಿ) 17 ಆರೋಪಿಗಳನ್ನು ಬಂಧಿಸಿ, ಅವರ ವಿರುದ್ಧ 8,500 ಪುಟಗಳ ದೋಷಾರೋಪ ಪಟ್ಟಿ ಸಲ್ಲಿಸಿತ್ತು. ಪ್ರಕರಣದಲ್ಲಿ ಒಟ್ಟು 527 ಸಾಕ್ಷಿಗಳಿದ್ದಾರೆ. ಪ್ರಕರಣದಲ್ಲಿ ಮೋಹನ್‌ ನಾಯಕ್‌ 11ನೇ ಆರೋಪಿಯಾಗಿದ್ದು, ಕೊಲೆಗೆ ಸಂಚು ರೂಪಿಸಿದ ಆರೋಪ ಆತನ ಮೇಲಿದೆ.

click me!