ರೋಹಿಣಿ ಸಿಂಧೂರಿ ವಿರುದ್ಧದ ಪೋಸ್ಟ್ ಡಿಲೀಟ್‌ ಮಾಡಲು ರೂಪಾಗೆ 24 ಗಂಟೆ ಟೈಂ ನೀಡಿದ ಸುಪ್ರೀಂ

By Suvarna NewsFirst Published Dec 14, 2023, 4:04 PM IST
Highlights

ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಬರೆದ ಪೋಸ್ಟ್‌ಗಳನ್ನು ತಕ್ಷಣವೇ ಡಿಲೀಟ್‌ ಮಾಡಿ ಎಂದು ಐಪಿಎಸ್ ಅಧಿಕಾರಿ ರೂಪಾ ಮೌದ್ಗಿಲ್ ಗೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.

ನವದೆಹಲಿ (ಡಿ.14): ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಬರೆದ ಪೋಸ್ಟ್‌ಗಳನ್ನು ತಕ್ಷಣವೇ ಡಿಲೀಟ್‌ ಮಾಡಿ ಎಂದು ಐಪಿಎಸ್ ಅಧಿಕಾರಿ ರೂಪಾ ಮೌದ್ಗಿಲ್ ಗೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.  ಪೋಸ್ಟ್‌ಗಳನ್ನು 24 ಗಂಟೆಯಲ್ಲಿ
ತೆರವು ಮಾಡಬೇಕು ಎಂದಿದ್ದು, ಒಂದು ವೇಳೆ ಸಿಂಧೂರಿ ವಿರುದ್ಧ ಬರೆದಿರುವ ಪೋಸ್ಟ್ ಅನ್ನು ಡಿಲೀಟ್‌ ಮಾಡಲು ಇಷ್ಟವಿಲ್ಲದಿದ್ದರೆ ತಮ್ಮ ಬರಹವನ್ನು ವಾಪಸ್ ಪಡೆದಿರೋದಾಗಿ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಬರೆದು ಹಾಕಬೇಕು ಎಂದು ಸುಪ್ರೀಂ ಕೋರ್ಟ್‌ ರೂಪಾ ಅವರಿಗೆ ಸೂಚನೆ ನೀಡಿದೆ.

ಕ್ರಿಮಿನಲ್‌ ಕೇಸ್‌ ಗಳನ್ನು ರದ್ದುಗೊಳಿಸುವಂತೆ ಕೋರಿ ರೂಪಾ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ನ್ಯಾಯಮೂರ್ತಿಗಳಾದ ಅಭಯ್ ಎಸ್ ಓಕಾ ಮತ್ತು ಪಂಕಜ್ ಮಿಥಾಲ್ ಅವರನ್ನೊಳಗೊಂಡ ಪೀಠ ಈ ನಿರ್ಧಾರ ಪ್ರಕಟಿಸಿದೆ. ಈ ವರ್ಷದ ಆರಂಭದಲ್ಲಿ ರೂಪಾ ಅವರು ಸಿಂಧೂರಿ ಅವರ ಬಗೆಗಿನ ವೈಯಕ್ತಿಕ ಚಿತ್ರಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡ ಬಳಿಕ ಕರ್ನಾಟಕದ ಇಬ್ಬರು ಐಎಎಸ್‌ ಅಧಿಕಾರಿಗಳು ಸಾರ್ವಜನಿಕ ವೇದಿಕೆಯಲ್ಲಿ ಗಲಾಟೆ ಮಾಡಿಕೊಂಡಿದ್ದರು.

ಸಂಸತ್ ದಾಳಿಗೆ ಕೆರಳಿದ ಪ್ರತಿಪಕ್ಷ,ಲೋಕಸಭೆಯಿಂದ 14 ಸಂಸದರ ಅಮಾನತು!

2023ರ ಫೆಬ್ರುವರಿ 14 ಹಾಗೂ 16 ರಂದು ಐಪಿಎಸ್ ಅಧಿಕಾರಿ ಡಿ. ರೂಪಾ ಮೌದ್ಗಿಲ್ ಅವರು ತಮ್ಮ ಸೋಷಿಯಲ್‌ ಮೀಡಿಯಾ ಖಾತೆಯಲ್ಲಿ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರ ವಿರುದ್ಧ ಹಲವು ಆರೋಪಗಳನ್ನು ಮಾಡಿದ್ದರು. ಇದರಿಂದ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರು ತನ್ನ ವ್ಯಕ್ತಿತ್ವಕ್ಕೆ ರೂಪಾ ಧಕ್ಕೆ ತಂದಿದ್ದಾರೆ. ಕೆಲವು ಮಾಧ್ಯಮಗಳಲ್ಲಿ ನನ್ನ ಬಗ್ಗೆ ಇಲ್ಲಸಲ್ಲದ ಹೇಳಿಕೆಗಳನ್ನು ಕೂಡ ನೀಡಿದ್ದಾರೆ. ನನ್ನ ವೈಯಕ್ತಿಕ ತೇಜೋವಧೆ ಮಾಡಲಾಗಿದೆ ಎಂದು ನ್ಯಾಯಾಲಯದಲ್ಲಿ ಧಾವೆ ಹೂಡಿದ್ದರು. ಕ್ರಿಮಿನಲ್ ಮಾನಹಾನಿ ಪ್ರಕರಣ ದಾಖಲು ಮಾಡಿರುವ ರೋಹಿಣಿ ಸಿಂಧೂರಿ, ರೂಪಾ ವಿರುದ್ಧ 1 ಕೋಟಿ ರೂ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.

ನಿನ್ನೆ ಸುಪ್ರೀಂ ಕೋರ್ಟ್ ಇಬ್ಬರೂ ಅಧಿಕಾರಿಗಳು ತಮ್ಮ ವಿವಾದಗಳನ್ನು ಮಧ್ಯಸ್ಥಿಕೆ ಮೂಲಕ ಬಗೆಹರಿಸಿಕೊಳ್ಳುವಂತೆ ಸೂಚಿಸಿತ್ತು. ಆದರೆ ಇಂದು ಮಧ್ಯಸ್ಥಿಕೆ ವಿಫಲವಾಗಿದೆ ಎಂದು ನ್ಯಾಯಾಲಯಕ್ಕೆ ತಿಳಿಸಲಾಯಿತು. ಇಬ್ಬರೂ ಅಧಿಕಾರಿಗಳು ಖುದ್ದು ನ್ಯಾಯಾಲಯಕ್ಕೆ ಹಾಜರಾಗಿದ್ದರು.

ಪ್ರಸಿದ್ಧ ಮಹಿಳಾ ಉದ್ಯಮಿಯ ಕೈ ಹಿಡಿದ ದಕ್ಷಿಣದ ಸೂಪರ್‌ಸ್ಟಾರ್‌ ನಟ, ಗಂಡನಿಗಿಂತ ಹೆಚ್ಚು ಆಸ್ತಿ ಇದ್ರೂ ಸರಳ ಸುಂದರಿ!

ಅಧಿಕಾರಿಗಳು ತಮ್ಮ ವಿವಾದಗಳನ್ನು ಸೌಹಾರ್ದಯುತವಾಗಿ ಬಗೆಹರಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂಬುದನ್ನು ತಿಳಿದ   ಪೀಠ ಬೇಸರ ವ್ಯಕ್ತಪಡಿಸಿತು. ಐಎಎಸ್-ಐಪಿಎಸ್ ಅಧಿಕಾರಿಗಳು ಹೀಗೆ ಜಗಳವಾಡಿದರೆ ಆಡಳಿತ ಹೇಗೆ? ಈ ವಿಷಯವನ್ನು ಈಗ ಅರ್ಹತೆಯ ಮೇಲೆ ವಿಚಾರಣೆ ನಡೆಸಲಾಗುವುದು ಎಂದು ನ್ಯಾಯಮೂರ್ತಿ ಓಕಾ ಆಶ್ಚರ್ಯ ವ್ಯಕ್ತಪಡಿಸಿ ಹೇಳಿದರು.

click me!