ಸುರಪುರ ವಿಧಾನಸಭಾ ಕ್ಷೇತ್ರಕ್ಕೆ ಮೇ 7ರಂದು ಉಪ ಚುನಾವಣೆ ಘೋಷಣೆ

By Sathish Kumar KHFirst Published Mar 16, 2024, 4:04 PM IST
Highlights

ಲೋಕಸಭಾ ಚುನಾವಣೆಯ ವೇಳೆಯೇ ಕರ್ನಾಟಕದ ಸುರಪುರ ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆಯು ನಡೆಯಲಿದೆ ಎಂದು ಭಾರತೀಯ ಚುನಾವಣಾ ಆಯೋಗದ ಅಧ್ಯಕ್ಷ ರಾಜೀವ್ ಕುಮಾರ್ ಹೇಳಿದ್ದಾರೆ.

ಬೆಂಗಳೂರು (ಮಾ.16): ದೇಶದಲ್ಲಿ ನಡೆಯುವ ಲೋಕಸಭಾ ಚುನಾವಣೆಯ ವೇಳೆಯೇ ಕರ್ನಾಟಕದ ಸುರಪುರ ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆಯು ನಡೆಯಲಿದೆ ಎಂದು ಭಾರತೀಯ ಚುನಾವಣಾ ಆಯೋಗದ ಅಧ್ಯಕ್ಷ ರಾಜೀವ್ ಕುಮಾರ್ ಹೇಳಿದ್ದಾರೆ.

ದೇಶದಲ್ಲಿ ಒಟ್ಟು ನಾಲ್ಕು ರಾಜ್ಯದಲ್ಲಿ ತೆರವಾದ ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ಮಾಡಲಾಗುತ್ತದೆ. ಲೋಕಸಭಾ ಚುನಾವಣೆ ವೇಳೆಯೇ ವಿಧಾನಸಭಾ ಕ್ಷೇತ್ರಗಳಿಗೂ ಉಪ ಚುನಾವಣೆ ಮಾಡಲಾಗುತ್ತದೆ. ಕರ್ನಾಟಕದಲ್ಲಿ ಒಟ್ಟು 2 ಹಂತಗಳಲ್ಲಿ ಲೋಕಸಭಾ ಚುನಾವಣೆ ನಡೆಯಲಿದೆ. ಅದರಲ್ಲಿ ಉತ್ತರ ಕರ್ನಾಟಕದಲ್ಲಿ ಮೇ 7ಕ್ಕೆ 2ನೇ ಹಂತದ ಚುನಾವಣೆ ನಡೆಯಲಿದ್ದು, ಇದೇ ವೇಳೆ ಸುರಪುರ ವಿಧಾನಸಭಾ ಕ್ಷೇತ್ರಕ್ಕೂ ಉಪ ಚುನಾವಣೆ ನಡೆಯಲಿದೆ ಎಂದು ತಿಳಿಸಿದರು.

Breaking: ಲೋಕಸಭೆಗೆ ಏಪ್ರಿಲ್ 19 ರಿಂದ 7 ಹಂತಗಳಲ್ಲಿ ಮತದಾನ, ಜೂನ್‌ 4 ರಂದು ಫಲಿತಾಂಶ

ಸುರಪುರ ವಿಧಾನಸಭಾ ಕ್ಷೇತ್ರದ ಹಾಲಿ ಶಾಸಕ ರಾಜಾ ವೆಂಕಟಪ್ಪ ನಾಯಕ (67) ಹೃದಯಾಘಾತ ಫೆ.25ರಂದು ಸಾವನ್ನಪ್ಪಿದ್ದರು. ಕಾಂಗ್ರೆಸ್‌ ಶಾಸಕರಾಗಿದ್ದ ಇವರು ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಸಿದ್ದರು. ಇದರ ಬೆನ್ನಲ್ಲಿಯೇ ಶಾಸಕರು ಅನಾರೋಗ್ಯದಿಂದ ಮೃತಪಟ್ಟಿದ್ದರು. ಈ ಹಿನ್ನೆಲೆಯಲ್ಲಿ ಸುರಪುರ ವಿಧಾನಸಭಾ ಕ್ಷೇತ್ರದಲ್ಲಿ ತೆರವಾದ ಶಾಸಕ ಸ್ಥಾನಕ್ಕೆ ಈಗ ಉಪಚುನಾವಣೆಯನ್ನು ಕೈಗೊಳ್ಳಲಾಗುತ್ತಿದೆ. ರಾಜಾ ವೆಂಕಟಪಟ್ಟ ನಾಯಕ ಅವರಿಗೆ ಕಿಡ್ನಿ ಸ್ಟೋನ್ ಆಗಿದ್ದು, ಆಪರೇಶನ್ ಕೂಡ ಮಾಡಲಾಗಿತ್ತು. ಇದರ ಜೊತೆಗೆ, ಬಹು ಅಂಗಾಂಗ ವೈಫಲ್ಯವೂ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಉಂಟಾಗಿತ್ತು. ಕಳೆದ 15 ದಿನಗಳ ಹಿಂದೆ ಮೈಸೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡು ಬಂದಿದ್ದರು. ಆದರೆ, ಇಂದು ದಿಢೀರನೆ ಹೃದಯಾಘಾತ ಸಂಭವಿಸಿದ್ದು, ಕೂಡಲೇ ಅವರನ್ನು ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದೇ ನಿಧನರಾಗಿದ್ದರು.

ಇಂದಿನಿಂದಲೇ ನೀತಿ ಸಂಹಿತೆ ಜಾರಿ: ಚುನಾವಣೆ ಘೋಷಣೆ ಆದ ಬೆನ್ನಲ್ಲಿಯೇ ನೀತಿ ಸಂಹಿತೆ ಜಾರಿಯಾಗಿದೆ. ಅದರಂತೆ ಸರ್ಕಾರ/ಸಚಿವರು ಅನುದಾನ ಅಥವಾ ಭರವಸೆಗಳನ್ನು ಪ್ರಕಟಿಸುವಂತಿಲ್ಲ. ಶಂಕುಸ್ಥಾಪನೆ, ಉದ್ಘಾಟನೆ, ಚಾಲನೆ ಕಾರ್ಯಕ್ರಮ ನೆರವೇರಿಸುವಂತಿಲ್ಲ. ಮತದಾರರ ಮೇಲೆ ಪ್ರಭಾವ ಬೀರುವಂತಹ ನೇಮಕಾತಿ ಮಾಡುವಂತಿಲ್ಲ ಹಾಗೂ ಚುನಾವಣೆ ಕೆಲಸಕ್ಕೆ ರಾಜಕಾರಣಿಗಳು ಸರ್ಕಾರಿ ವಾಹನ ಬಳಸುವಂತಿಲ್ಲ.

ಕರ್ನಾಟಕ ಮೊದಲ ಹಂತದ ಚುನಾವಣೆ
ನಾಮಪತ್ರ ಸಲ್ಲಿಕೆ ಆರಂಭ- ಮಾರ್ಚ್ 28
ನಾಮಪತ್ರ ಸಲ್ಲಿಕೆಗೆ ಕೊನೇ ದಿನ- ಏಪ್ರಿಲ್ 4
ನಾಮಪತ್ರ ಪರಿಶೀಲನೆ- ಏಪ್ರಿಲ್ 5
ನಾಮಪತ್ರ ವಾಪಸ್​ಗೆ ಕೊನೇ ದಿನ- ಏಪ್ರಿಲ್ 8
ಮತದಾನ-  ಏಪ್ರಿಲ್ 26

ಆಂಧ್ರ ಪ್ರದೇಶ ಸೇರಿ 4 ರಾಜ್ಯಗಳ ವಿಧಾನಸಭಾ ಚುನಾವಣಾ ದಿನಾಂಕ ಘೋಷಣೆ!

ಕರ್ನಾಟಕ 2ನೇ ಹಂತದ ಚುನಾವಣೆ
ನಾಮಪತ್ರ ಸಲ್ಲಿಕೆ ಆರಂಭ- ಏಪ್ರಿಲ್ 12
ನಾಮಪತ್ರ ಸಲ್ಲಿಕೆಗೆ ಕೊನೇ ದಿನ- ಏಪ್ರಿಲ್ 19
ನಾಮಪತ್ರ ಪರಿಶೀಲನೆ- ಏಪ್ರಿಲ್ 20
ನಾಮಪತ್ರ ವಾಪಸ್​ಗೆ ಕೊನೇ ದಿನ- ಏಪ್ರಿಲ್ 22
ಮತದಾನ- ಮೇ 7

click me!