ಯಾದಗಿರಿ ಜಿಲ್ಲೆಯ ಸುರಪುರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಬಿಜೆಪಿ ನರಸಿಂಹನಾಯಕ (ರಾಜುಗೌಡ) ಅವರನ್ನು ಅಭ್ಯರ್ಥಿಯಾಗಿ ಘೋಷಣೆ ಮಾಡಿದೆ.
ಬೆಂಗಳೂರು (ಮಾ.26): ರಾಜ್ಯದ ಯಾದಗಿರಿ ಜಿಲ್ಲೆಯ ಸುರಪುರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ನರಸಿಂಹನಾಯಕ (ರಾಜುಗೌಡ) ಅವರನ್ನು ಆಯ್ಕೆ ಮಾಡಿ ಬಿಜೆಪಿ ಹೈಕಮಾಂಡ್ ಪಟ್ಟಿಯನ್ನು ಬಿಡುಗಡೆ ಮಾಡಿದೆ.
ದೇಶಾದ್ಯಂತ ಈಗಾಗಲೇ ತೆರವಾಗಿರುವ ವಿಧಾನಸಭಾ ಅಭ್ಯರ್ಥಿಗಳ ಸ್ಥಾನಗಳಿಗೆ ಆಯಾ ರಾಜ್ಯದ ಲೋಕಸಭಾ ಚುನಾವಣೆ ವೇಳೆಯೇ ವಿಧಾನಸಭೆಗಳಿಗೂ ಉಪ ಚುನಾವಣೆ ಮಾಡಲಾಗುತ್ತಿದೆ. ಆದರೆ, ಈ ಹಿಂದೆ ಕರ್ನಾಟಕದಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಗೆಲುವು ಸಾಧಿಸಿದ್ದ ರಾಜಾ ವೆಂಕಟ್ಟಪ್ಪ ನಾಯಕ ಅವರು ಫೆ.25ರಂದು ಅನಾರೋಗ್ಯದಿಂದ ಸಾವನ್ನಪ್ಪಿದ್ದರು. ಈ ಹಿನ್ನೆಲೆಯಲ್ಲಿ ಸುರಪುರ ವಿಧಾನಸಭಾ ಕ್ಷೇತ್ರಕ್ಕೆ ತೆರವಾದ ಸ್ಥಾನಕ್ಕೆ ಲೋಕಸಭಾ ಚುನಾವಣೆ ಜೊತೆ ಜೊತೆಗೆ ಮೇ 7ರಂದು ಉಪ ಚುನಾವಣೆ ನಡೆಸಲು ಕೇಂದ್ರ ಚುನಾವಣಾ ಆಯೋಗ ಘೋಷಣೆ ಮಾಡಿತ್ತು. ಈ ಹಿನ್ನೆಲೆಯಲ್ಲಿ ಬಿಜೆಪಿಯಿಂದ ಸುರಪುರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯನ್ನಾಗಿ ನರಸಿಂಹನಾಯಕ (ರಾಜುಗೌಡ) ಅವರನ್ನು ಆಯ್ಕೆ ಮಾಡಲಾಗಿದೆ.
undefined
ಸುರಪುರ ಉಪಚುನಾವಣೆಗೆ ಅಭ್ಯರ್ಥಿ ಪ್ರಕಟಿಸಿದ ಕಾಂಗ್ರೆಸ್
ದೇಶಾದ್ಯಂತ ಈಗಾಗಲೇ ತೆರವಾಗಿರುವ ವಿಧಾನಸಭಾ ಅಭ್ಯರ್ಥಿಗಳ ಸ್ಥಾನಗಳಿಗೆ ಆಯಾ ರಾಜ್ಯದ ಲೋಕಸಭಾ ಚುನಾವಣೆ ವೇಳೆಯೇ ವಿಧಾನಸಭೆಗಳಿಗೂ ಉಪ ಚುನಾವಣೆ ಮಾಡಲಾಗುತ್ತಿದೆ. ಆದರೆ, ರಾಜ್ಯದಲ್ಲಿ ಕಳೆದ 10 ತಿಂಗಳ ಹಿಂದೆ ಕರ್ನಾಟಕದಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಗೆಲುವು ಸಾಧಿಸಿದ್ದ ರಾಜಾ ವೆಂಕಟ್ಟಪ್ಪ ನಾಯಕ ಅವರು ಫೆ.25ರಂದು ಅನಾರೋಗ್ಯದಿಂದ ಸಾವನ್ನಪ್ಪಿದ್ದರು. ಈ ಹಿನ್ನೆಲೆಯಲ್ಲಿ ಸುರಪುರ ವಿಧಾನಸಭಾ ಕ್ಷೇತ್ರಕ್ಕೆ ತೆರವಾದ ಸ್ಥಾನಕ್ಕೆ ಲೋಕಸಭಾ ಚುನಾವಣೆ ಜೊತೆ ಜೊತೆಗೆ ಮೇ 7ರಂದು ಉಪ ಚುನಾವಣೆ ನಡೆಸಲು ಕೇಂದ್ರ ಚುನಾವಣಾ ಆಯೋಗ ಘೋಷಣೆ ಮಾಡಿತ್ತು. ಈ ಹಿನ್ನೆಲೆಯಲ್ಲಿ ಬಿಜೆಪಿಯಿಂದ ಸುರಪುರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯನ್ನಾಗಿ ನರಸಿಂಹನಾಯಕ (ರಾಜುಗೌಡ) ಅವರನ್ನು ಆಯ್ಕೆ ಮಾಡಲಾಗಿದೆ.
ಕಳೆದ ವರ್ಷ ನಡೆದ ಕರ್ನಾಟಕ ವಿಧಾನಸಭಾ ಚುನಾವನೆಯಲ್ಲಿಯೂ ಕೂಡ ಬಿಜೆಪಿ ಅಭ್ಯರ್ಥಿಯಾಗಿ ರಾಜುಗೌಡ ಅವರು ಸ್ಪರ್ಧಿಸಿದಿದ್ದರು. ಆದರೆ, ರಾಜಾ ವೆಂಕಟಪ್ಪ ನಾಯಕ ವಿರುದ್ಧ ಸೋಲನುಭವಿಸಿದ್ದರು. ರಾಜಾ ವೆಂಕಟ್ಟಪ್ಪ ನಾಯಕ 1,12,922 ಮತಗಳನ್ನು ಪಡೆದುಕೊಂಡರೆ, ಅವರ ವಿರುದ್ಧ ಸ್ಪರ್ಧೆ ಮಾಡಿದ್ದ 87,746 ಮತಗಳನ್ನು ಪಡೆದಿದ್ದರು. ಇನ್ನು 20 ಸಾವಿರ ಮತಗಳಿಂದ ಸೋಲು ಅನುಭವಿಸಿದ್ದ ರಾಜುಗೌಡ ಅವರಿಗೆ ಉಪ ಚುನಾವಣೆಯಲ್ಲಿಯೂ ಬಿಜೆಪಿ ಮಣೆ ಹಾಕಿದೆ.
Lok Sabha election 2024: ಕರ್ನಾಟಕದ ಯಾವ ಜಿಲ್ಲೆಗಳಲ್ಲಿ ಯಾವಾಗ ಮತದಾನ?
ಸುರಪುರ ವಿಧಾನಸಭೆ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನೇರಾನೇರ ಪೈಪೋಟಿ ನಡೆಸಲಿವೆ. ಜೊತೆಗೆ, ಲೋಕಸಭಾ ಚುನಾವಣೆಗೆ ಬಿಜೆಪಿಯೊಂದಿಗೆ ಜೆಡಿಎಸ್ ಕೂಡ ಮೈತ್ರಿ ಮಾಡಿಕೊಂಡಿದ್ದು, ಇದು ಬಿಜೆಪಿ ಅಭ್ಯರ್ಥಿ ರಾಜುಗೌಡ ಅವರಿಗೆ ಪ್ಲಸ್ ಪಾಯಿಂಟ್ ಆಗಿದೆ.