Breaking: ಸುರಪುರ ಶಾಸಕ ರಾಜಾ ವೆಂಕಟಪ್ಪ ನಾಯಕ ಹೃದಯಾಘಾತಕ್ಕೆ ಬಲಿ

By Sathish Kumar KHFirst Published Feb 25, 2024, 2:46 PM IST
Highlights

ಸುರಪುರ ವಿಧಾನಸಭಾ ಕ್ಷೇತ್ರದ ಹಾಲಿ ಶಾಸಕ ರಾಜಾ ವೆಂಕಟಪ್ಪ ನಾಯಕ (67) ಹೃದಯಾಘಾತದಿಂದ ಬೆಂಗಳೂರಿನ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

ಯಾದಗಿರಿ (ಫೆ.25): ಸುರಪುರ ವಿಧಾನಸಭಾ ಕ್ಷೇತ್ರದ ಹಾಲಿ ಶಾಸಕ ರಾಜಾ ವೆಂಕಟಪ್ಪ ನಾಯಕ (67) ಹೃದಯಾಘಾತದಿಂದ ಬೆಂಗಳೂರಿನಲ್ಲಿ ಸಾವನ್ನಪ್ಪಿದ್ದಾರೆ. ಕಾಂಗ್ರೆಸ್‌ ಶಾಸಕರಾಗಿರುವ ಇವರು ಕಳೆದ ಎರಡು ದಿನಗಳ ಹಿಂದೆ ಉಗ್ರಾಣ ನಿಗಮದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಸಿದ್ದರು.

ರಾಜಾ ವೆಂಕಟಪಟ್ಟ ನಾಯಕ ಅವರಿಗೆ ಕಿಡ್ನಿ ಸ್ಟೋನ್ ಆಗಿದ್ದು, ಆಪರೇಶನ್ ಕೂಡ ಮಾಡಲಾಗಿತ್ತು. ಇದರ ಜೊತೆಗೆ, ಬಹು ಅಂಗಾಂಗ ವೈಫಲ್ಯವೂ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಉಂಟಾಗಿತ್ತು. ಕಳೆದ 15 ದಿನಗಳ ಹಿಂದೆ ಮೈಸೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡು ಬಂದಿದ್ದರು. ಆದರೆ, ಇಂದು ದಿಢೀರನೆ ಹೃದಯಾಘಾತ ಸಂಭವಿಸಿದ್ದು, ಕೂಡಲೇ ಅವರನ್ನು ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದೇ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ.

ಸುರಪುರ ವಿಧಾನಸಭಾ ಕ್ಷೇತ್ರದಿಂದ ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಈ ಬಾರಿ ಕಾಂಗ್ರೆಸ್‌ನಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ ನಂತರ ಸಚಿವರಾಗುತ್ತಾರೆ ಎಂಬ ನಂಬಿಕೆಯಿತ್ತು. ಆದರೆ, ಹೆಚ್ಚಿನ ಆಕಾಂಕ್ಷಿಗಳಿದ್ದರಿಂದ ಸಚಿವ ಸ್ಥಾನ ತಪ್ಪಿತ್ತು. ಇನ್ನು ಇವರ ಹಿರಿತನವನ್ನು ಪರಿಗಣಿಸಿ ಕಾಂಗ್ರೆಸ್‌ ಸರ್ಕಾರದಿಂದ ಉಗ್ರಾಣ ನಿಮಗದ ಅಧ್ಯಕ್ಷರನ್ನಾಗಿ ಮಾಡಿತ್ತು.

ಸಾರಾಯಿ ನಿಷೇಧದಿಂದ ಅತಂತ್ರ ಆದವರ ಮಕ್ಕಳಿಗೆ ಮದ್ಯ ಮಳಿಗೆ ಲೈಸನ್ಸ್‌?: ಆರ್‌.ಬಿ.ತಿಮ್ಮಾಪುರ

ಅಖಿಲ ಭಾರತ ಕಾಂಗ್ರೆಸ್‌ ಸಮಿತಿ (ಎಐಸಿಸಿ) ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಕುಟುಂಬಕ್ಕೆ ರಾಜಾ ವೆಂಕಟಪಟ್ಟ ನಾಯಕ ಅವರು ಆಪ್ತರಾಗಿದ್ದರು. ಈ ಹಿನ್ನೆಲೆಯಲ್ಲಿ ಅವರಿಗೆ ರಾಜಕೀಯದಲ್ಲಿ ಯಾವುದೇ ಹಿನ್ನಡೆ ಉಂಟಾಗಿರಲಿಲ್ಲ. ಇನ್ನು ಕಾಂಗ್ರೆಸ್ ಪಕ್ಷದಿಂದ್ಲೇ ರಾಜಕೀಯ ಜೀವನ ಆರಂಭಿಸಿದ್ದ ರಾಜಾ ವೆಂಕಟಪ್ಪ ನಾಯಕ ಅವರು ಮದ್ಯದಲ್ಲಿ ಜೆಡಿಎಸ್‌ಗೆ ಹೋಗಿದ್ದರು. ಪುನಃ ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ಕಾಂಗ್ರೆಸ್‌ ಸೇರ್ಪಡೆಯಾಗಿದ್ದರು. ಹಲವರು ರಾಜಾ ವೆಂಕಟಪ್ಪ ನಾಯಕ ಅವರ ರಾಜಕೀಯ ಜೀವನ ಅಂತ್ಯವಾಗುತ್ತದೆ ಎಂದು ಹೇಳಿದ್ದರೂ ಅದಕ್ಕೆ ಕಿವಿಗೊಡುತ್ತಿರಲಿಲ್ಲ. ಹೀಗಾಗಿ, 2023ರ ವಿಧಾನಸಭಾ ಚುನಾವಣೆಯಲ್ಲಿಯೂ ಗೆದ್ದು ವಿಧಾನಸಭೆಗೆ ಆಗಮಿಸಿದ್ದರು. 

ಧಾರ್ಮಿಕ ದತ್ತಿ ಕಾಯ್ದೆಗೆ ತಿದ್ದುಪಡಿ ತಂದಿದ್ದೇ ಯಡಿಯೂರಪ್ಪ: ಸಚಿವ ರಾಮಲಿಂಗಾರೆಡ್ಡಿ

ಸಂತಾಪ ಸೂಚಿಸಿದ ಮಲ್ಲಿಕಾರ್ಜುನ ಖರ್ಗೆ:  ತನ್ನ ಆಪ್ತ ರಾಜಾ ವೆಂಕಟಪಟ್ಟ ನಾಯಕ ಅವರ ನಿಧನದ ಬಗ್ಗೆ ಸಂತಾಪ ವ್ಯಕ್ತಪಡಿಸದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ನನ್ನ ಆತ್ಮೀಯರೂ ಆದ ರಾಜಾ ವೆಂಕಟಪ್ಪ ನಾಯಕ್ ನಿಧನರಾಗಿದ್ದಾರೆ. ಸುರಪುರದ ಜನಪ್ರಿಯ ಶಾಸಕರಾಗಿ ಚುನಾಯಿತರಾಗಿದ್ದವರು. ಜೊತೆಗೆ ಕರ್ನಾಟಕ ರಾಜ್ಯದ ಉಗ್ರಾಣ ನಿಗಮದ ಅಧ್ಯಕ್ಷರಾಗಿ ಇತ್ತೀಚೆಗೆ ನೇಮಕವಾಗಿದ್ದವರು. ಅವರು ನನಗೆ ಚಿರ ಪರಿಚಿತರು. ಸದಾ ಹಸನ್ಮುಖಿಯಾಗಿ ಎಲ್ಲರ ಜೊತೆ ಬೆರೆತು ಕೆಲಸ ಮಾಡುತ್ತಿದ್ದವರು. ಇವರು ಇಂದು ನಿಧನರಾದ ವಿಷಯ ತಿಳಿದು ಮನಸ್ಸಿಗೆ ಅತೀವ ನೋವಾಗಿದೆ. ಶ್ರೀಯುತರ ನಿಧನದಿಂದ ಕಲಬುರಗಿ ವಿಭಾಗದ ಪಕ್ಷದ ಎಲ್ಲ ಕಾರ್ಯಕರ್ತರಿಗೆ ತುಂಬಲಾರದ ನಷ್ಟ ಉಂಟಾಗಿದೆ. ಶ್ರೀಯುತರ ನಿಧನದಿಂದುಂಟಾದ ದುಃಖವನ್ನು ಸಹಿಸುವ ಶಕ್ತಿಯನ್ನು ಅವರ ಕುಟುಂಬ ವರ್ಗದವರಿಗೆ ನೀಡಲೆಂದು ಪ್ರಾರ್ಥಿಸುತ್ತೇನೆ. ಮೃತರ ಆತ್ಮಕ್ಕೆ ಚಿರ ಶಾಂತಿಯನ್ನು ನೀಡಲೆಂದು ವಿನಂತಿಸುತ್ತೇನೆ ಎಂದು ಸಂತಾಪ ಸೂಚಿಸಿದರು.

click me!