ಕಲುಷಿತ ನೀರು ಅಥವಾ ಆಹಾರ ಸೇವನೆಯಿಂದ ಒಂದೇ ಗ್ರಾಮದ 28 ಮಂದಿ ಏಕಾಏಕಿ ಅಸ್ವಸ್ಥರಾದ ಘಟನೆ ತುಮಕೂರು ತಾಲೂಕಿನ ಶೆಟ್ಟಪ್ಪನಹಳ್ಳಿಯಲ್ಲಿ ನಡೆದಿದೆ. fಜಯಲಕ್ಷ್ಮಿ (35), ಬೋರಮ್ಮ (68), ಬೈರಪ್ಪ(80), ಗಂಗಮ್ಮ (70), ನಂಜಮ್ಮ(85) ಆಹಾರ ಸೇವನೆಯಿಂದ ಅಸ್ವಸ್ಥಗೊಂಡವರು. ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು 20 ಕ್ಕೂ ಹೆಚ್ಚು ಜನರಿಗೆ ಗ್ರಾಮದಲ್ಲೇ ಚಿಕಿತ್ಸೆ ನೀಡಲಾಗ್ತಿದೆ.
ವರದಿ : ಮಹಂತೇಶ್ ಕುಮಾರ್ ಏಷ್ಯನೆಟ್ ಸುವರ್ಣ ನ್ಯೂಸ್ ತುಮಕೂರು.
ತುಮಕೂರು (ಸೆ.26): ಕಲುಷಿತ ನೀರು ಅಥವಾ ಆಹಾರ ಸೇವನೆಯಿಂದ ಒಂದೇ ಗ್ರಾಮದ 28 ಮಂದಿ ಏಕಾಏಕಿ ಅಸ್ವಸ್ಥರಾದ ಘಟನೆ ತುಮಕೂರು ತಾಲೂಕಿನ ಶೆಟ್ಟಪ್ಪನಹಳ್ಳಿಯಲ್ಲಿ ನಡೆದಿದೆ.
ಜಯಲಕ್ಷ್ಮಿ (35), ಬೋರಮ್ಮ (68), ಬೈರಪ್ಪ(80), ಗಂಗಮ್ಮ (70), ನಂಜಮ್ಮ(85) ಆಹಾರ ಸೇವನೆಯಿಂದ ಅಸ್ವಸ್ಥಗೊಂಡವರು. ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು 20 ಕ್ಕೂ ಹೆಚ್ಚು ಜನರಿಗೆ ಗ್ರಾಮದಲ್ಲೇ ಚಿಕಿತ್ಸೆ ನೀಡಲಾಗ್ತಿದೆ.
ಚಿತ್ರದುರ್ಗ: ಕೆಟ್ಟ ಮೇಲೆ ಬುದ್ದಿ ಬಂತು ಅನ್ನೋ ಹಾಗೆ ಅಭಿವೃದ್ಧಿಗೆ ಮುಂದಾದ ಸರ್ಕಾರ..!
ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಕೆಲವರು ಭಾನುವಾರ ಗಣಪತಿ ವಿಸರ್ಜನೆ ವೇಳೆ ಪ್ರಸಾದ ತಿಂದ ಬಳಿಕ ಹೀಗಾಗಿದೆ ಎನ್ನುತ್ತಿದ್ರೆ, ಮತ್ತೆ ಕೆಲವರು ಕಲುಷಿತ ನೀರಿನ ಸೇವನೆಯಿಂದ ದುರಂತ ಸಂಭವಿಸಿದೆ ಎನ್ನುತ್ತಿದ್ದಾರೆ. ಇನ್ನೂ ಕೆಲವರು ಅಣಬೆ ತಿಂದುದ್ದರಿಂದಲೇ ಅಸ್ವಸ್ಥರಾಗಿದ್ದಾರೆ ಎನ್ನುತ್ತಿದ್ದಾರೆ.
ಕಳೆದ ಭಾನುವಾರ ಗ್ರಾಮದ ಓರ್ವರಿಗೆ ವಾಂತಿ ಭೇದಿ ಕಾಣಿಸಿಕೊಂಡಿತ್ತು. ನಂತರ ನಿನ್ನೆ ಬೆಳಗ್ಗೆ 10 ಗಂಟೆ ಸುಮಾರಿಗೆ 6 ಜನರ ಆರೋಗ್ಯದಲ್ಲಿ ಏರುಪೇರಾಗಿತ್ತು. ಬಳಿಕ ಅಸ್ವಸ್ಥರು ಗೂಳೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆದಿದ್ದರು. ಈ ವೇಳೆ ಕೂಡಲೇ ಎಚ್ಚೆತ್ತ ಆರೋಗ್ಯ ಅಧಿಕಾರಿಗಳು ತಂಡ ಸಮೇತ ಶೆಟ್ಟಪ್ಪನಹಳ್ಳಿ ಗ್ರಾಮಕ್ಕೆ ಭೇಟಿ ನೀಡಿ ಆರೋಗ್ಯ ತಪಾಸಣೆ ನಡೆಸಿದ್ದಾರೆ.
ಸುರಪುರ: ಕಲುಷಿತ ನೀರು ಸೇವಿಸಿ ಮತ್ತೆ 22ಕ್ಕೂ ಅಧಿಕ ಮಕ್ಕಳು ಅಸ್ವಸ್ಥ!
ಇದುವರೆಗೆ ಸುಮಾರು 28 ಜನರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಆರೋಗ್ಯ ಇಲಾಖೆ ಅಧಿಕಾರಿಗಳು ಗ್ರಾಮದಲ್ಲೇ ಮೊಕ್ಕಾಂ ಹೂಡಿ ಮನೆಮನೆಗೆ ತೆರಳಿ ಚಿಕಿತ್ಸೆ ನೀಡುತ್ತಿದ್ದಾರೆ. ಸದ್ಯ ಅಸ್ವಸ್ಥಗೊಂಡಿದ್ದ 28 ಜನರಲ್ಲಿ 24 ಜನರ ಆರೋಗ್ಯದಲ್ಲಿ ಚೇತರಿಕೆ ಕಾಣಿಸಿಕೊಂಡಿದೆ ಎನ್ನಲಾಗಿದೆ.
ಇನ್ನು ಘಟನೆ ಬಗ್ಗೆ ಆರೋಗ್ಯ ಇಲಾಖೆ ಅಧಿಕಾರಿಗಳು ಮಾಹಿತಿ ಕಲೆಹಾಕುತ್ತಿದ್ದು, ಕುಡಿಯುವ ನೀರನ್ನು ಕೂಡ ಲ್ಯಾಬ್ ಗೆ ಕಳುಹಿಸಿದ್ದಾರೆ. ಲ್ಯಾಬ್ ವರದಿ ಬಂದ ಬಳಿಕ ಘಟನೆಯ ಸತ್ಯಾಸತ್ಯಾತೆ ತಿಳಿಯಬೇಕಿದೆ.