ನಾಡಹಬ್ಬ ದಸರಾ ಉತ್ಸವಕ್ಕೆ ಕ್ಷಣಗಣನೆ ಶುರುವಾಗಿದೆ. ಸಾಂಸ್ಕೃತಿಕ ನಗರಿ ದೀಪಾಲಂಕಾಗಳಿಂದ ಕಂಗೊಳಿಸುತ್ತಿದೆ. ಈ ನಡುವೆ ನಗರದ ಹೊರವಲಯದಲ್ಲಿ ನೂರಕ್ಕೂ ಹೆಚ್ಚು ಯುವಕ-ಯುವತಿಯರು ರೇವ್ ಪಾರ್ಟಿ ಮಾಡಿರುವ ಅನುಮಾನ ವ್ಯಕ್ತವಾಗಿದೆ.
ಮೈಸೂರು (ಸೆ.29): ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಈ ಬಾರಿ ನಾಡಹಬ್ಬ ದಸರಾ ಮಹೋತ್ಸವದ ತಯಾರಿ ಅದ್ದೂರಿಯಾಗಿ ನಡೆದಿದೆ. ಎಲ್ಲೆಡೆ ದೀಪಗಳಿಂದ ಅಲಂಕಾರಿಸಲಾಗಿದೆ. ಅ.3 ರಿಂದ ದಸರಾ ಹಬ್ಬಕ್ಕೆ ಚಾಲನೆ ನೀಡಲು ಎಲ್ಲ ತಯಾರಿ ನಡೆದಿದೆ. ಈ ನಡುವೆ ಮೈಸೂರಿನ ಹೊರವಲಯದ ಕೆಆರ್ಎಸ್ ಬ್ಯಾಕ್ ವಾಟರ್ನಲ್ಲಿ ನೂರಕ್ಕೂ ಅಧಿಕ ಯುವತಿ-ಯುವತಿಯರಿಂದ ರೇವಾ ಪಾರ್ಟಿ ನಡೆದಿರುವ ಎಂಬ ಅನುಮಾನ ವ್ಯಕ್ತವಾಗಿದೆ. ಖಚಿತ ಮಾಹಿತಿ ಮೇರೆಗೆ ಮೈಸೂರು ಪೊಲೀಸರು ದಾಳಿ ನಡೆಸಿ ಸುಮಾರು 50ಕ್ಕೂ ಯುವಕ-ಯುವತಿಯರನ್ನು ವಶಕ್ಕೆ ಪಡೆದಿದ್ದಾರೆ.
ಖಚಿತ ಮಾಹಿತಿ ಮೇರೆಗೆ ಎ.ಎಸ್.ಪಿ ಪಿ.ನಾಗೇಂದ್ರ ಹಾಗೂ ಡಿವೈಎಸ್ಪಿ ಕರೀಂ ನೇತೃತ್ವದಲ್ಲಿ ಪಾರ್ಟಿ ನಡೆಯುತ್ತಿದ್ದ ಸ್ಳಳಕ್ಕೆ ತೆರಳಿ ದಾಳಿ ನಡೆಸಿದ ಪೊಲೀಸರು. ಪೊಲೀಸರು ಬರುತ್ತಿದ್ದಂತೆ ಕುಡಿದು ತೂರಾಡುತ್ತಿದ್ದ ಯುವಕ-ಯುವತಿಯರು ಚೆಲ್ಲಾಪಿಲ್ಲಿಯಾಗಿ ಓಡಿದ್ದಾರೆ. ಪಾರ್ಟಿಯಲ್ಲಿ ಭಾಗಿಯಾಗಿದ್ದ 50ಕ್ಕೂ ಯುವಕರನ್ನು ವಶಕ್ಕೆ ಪಡೆದಿರುವ ಪೊಲೀಸರು. ಕೆಲವರು ಅಲ್ಲಿಂದ ತಪ್ಪಿಸಿಕೊಳ್ಳು ಯತ್ನಿಸಿದ್ದಾರೆ. ವಶಕ್ಕೆ ಪಡೆಯುವ ವೇಳೆ ಕುಡಿದ ಮತ್ತಿನಲ್ಲಿ ಪೊಲೀಸರು ಮೇಲೆಯೇ ಹಲ್ಲೆಗೆ ಮುಂದಾಗಿದ್ದ ಆರೋಪವೂ ಕೇಳಿಬಂದಿದೆ. ಸದ್ಯ ಪಾರ್ಟಿಯಲ್ಲಿ ಯಾವುದೇ ಮಾದಕ ವಸ್ತು ಮಾದಕ ದ್ರವ್ಯ ಸಿಕ್ಕಿಲ್ಲ. ಮದ್ಯ, ಸಿಗರೇಟ್ ಸ್ಥಳದಲ್ಲಿ ಪತ್ತೆಯಾಗಿವೆ. ಅಲ್ಲಿದ್ದ ಎಲ್ಲರ ರಕ್ತದ ಮಾದರಿ ಸಂಗ್ರಹಿಸಿ ಎಫ್‌ಎಸ್‌ಎಲ್‌ಗೆ ಪರೀಕ್ಷೆಗೆ ಕಳಿಸಿರುವ ಪೊಲೀಸರು. ಪಾರ್ಟಿ ನಡೆದ ಸ್ಥಳಕ್ಕೆ ಎಫ್‌ಎಸ್‌ಎಲ್ ತಂಡ ಭೇಟಿ ನೀಡಿದ್ದ ಪರಿಶೀಲನೆ ನಡೆಸಿದ್ದಾರೆ. ವರದಿ ಬಳಿಕ ಈ ಬಗ್ಗೆ ಸ್ಪಷ್ಟತೆ ಸಿಗಲಿದೆ.
undefined
ಬೆಂಗಳೂರು ರೇವ್ ಪಾರ್ಟಿ ಪ್ರಕರಣ: ಮಾಧ್ಯಮ ಹೇಳಿಕೆ ನೀಡದಂತೆ ನಟಿ ಹೇಮಾಗೆ ಕಲಾವಿದರ ಸಂಘ ವಾರ್ನ್!
ಒಂದೆಡೆ ದಸರಾ ಉತ್ಸವಕ್ಕೆ ಸಿದ್ಧತೆ ನಡೆಯುತ್ತಿದೆ. ಅತ್ತ ಮೈಸೂರು ಹೊರವಲಯದಲ್ಲಿ ದಸರಾ ಹಬ್ಬವನ್ನೇ ನೆಪ ಮಾಡಿಕೊಂಡು ಯುವಕರನ್ನ ಒಂದೆಡೆ ಸೇರಿಸಿ ರೇವ್ ಪಾರ್ಟಿನಡೆಸಿದ್ದರು ಎನ್ನಲಾಗಿದೆ. ಈ ಪಾರ್ಟಿಗೆ ಇಸ್ರೇಲ್ನಿಂದ ರ್ಯಾಪರ್ ಗ್ರೇನ್ ರಿಪ್ಪರ್(Rapper Grain Ripper) ಕರೆಸಿದ್ದರು ಎನ್ನಲಾಗಿದೆ. ಪಾರ್ಟಿಯಲ್ಲಿ ಸುಮಾರು 150ಕ್ಕೂ ಹೆಚ್ಚು ಯುವಕ-ಯುವತಿಯರು ಭಾಗಿಯಾಗಿದ್ದರು. ಆಯೋಜಕರು ಪ್ರತಿಯೊಬ್ಬರಿಗೂ 2000 ರೂ. ನಿಗದಿ ಮಾಡಿದ್ದರು ಎನ್ನಲಾಗಿದೆ. ಆಯೋಜಿಸಿದವರು ಯಾರು? ಪಾರ್ಟಿಯಲ್ಲಿ ಮಾದಕ ವಸ್ತು ಬಳಕೆಯಾಗಿತ್ತೆ? ಎಲ್ಲ ಆಯಾಮಗಳಲ್ಲಿ ವಿಚಾರಣೆಗೆ ಮುಂದಾಗಿರುವ ಪೊಲೀಸರು.