
ಬೆಂಗಳೂರು (ಸೆ.26): ಕರ್ನಾಟಕ ಮಾಧ್ಯಮ ಅಕಾಡೆಮಿ ಸದಸ್ಯರನ್ನಾಗಿ ಸುವರ್ಣ ನ್ಯೂಸ್ ಔಟ್‌ಪುಟ್ ಎಡಿಟರ್ ಶ್ರೀಮತಿ ಎಂ.ಸಿ. ಶೋಭಾ ಅವರನ್ನು ರಾಜ್ಯ ಸರ್ಕಾರ ನೇಮಕ ಮಾಡಿದೆ.
ಈ ಕುರಿತು ಕರ್ನಾಟಕ ಸಚಿವಾಲಯದಿಂದ ಹೊರಡಿಸಲಾದ ಅಧಿಸೂಚನೆಯಲ್ಲಿ ಪತ್ರಿಕೆ ಹಾಗೂ ಮಾಧ್ಯಮಗಳಲ್ಲಿ ಕೆಲಸ ಮಾಡುತ್ತಿರುವ 11 ಜನ ಹಿರಿಯ ಪತ್ರಕರ್ತರು ಮತ್ತು ವರದಿಗಾರರನ್ನು ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ. ಸುವರ್ಣ ನ್ಯೂಸ್ ಔಟ್‌ಪುಟ್ ಮುಖ್ಯಸ್ಥರಾದ ಶ್ರೀಮತಿ ಎಂ.ಸಿ. ಶೋಭಾ ಹಾಗೂ ಕನ್ನಡ ಪ್ರಭ ಉಡುಪಿ ಜಿಲ್ಲಾ ವರದಿಗಾರರಾದ ಯು. ಸುರೇಂದ್ರ ಶೆಣೈ ಅವರು ಹನ್ನೊಂದು ಸದಸ್ಯರ ಬಳಗದಲ್ಲಿದ್ದಾರೆ. ಜೊತೆಗೆ, ಎರಡು ಪತ್ರಿಕೋದ್ಯಮ ಕಾಲೇಜುಗಳ ಮುಖ್ಯಸ್ಥರನ್ನು ಪದನಿಮಿತ್ತ ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ. ಮುಂದಿನ ಆದೇಶದವರೆಗೂ ಈ ಸದಸ್ಯರು ಕರ್ನಾಟಕ ಮಾಧ್ಯಮ ಅಕಾಡೆಮಿ ಸದಸ್ಯರಾಗಿ ಕಾರ್ಯ ನಿರ್ವಹಿಸಲಿದ್ದಾರೆ.
ಕನ್ನಡಿಗರನ್ನು ಕೆಣಕಿದ ಸುಗಂಧ ಶರ್ಮಾಗೆ ಇದೆಂಥಾ ಸ್ಥಿತಿ ಬಂತು: ಕೆಲಸ ಕಳೆದುಕೊಂಡವಳಿಗೆ ನೆಲೆ ಕಳೆದುಕೊಳ್ಳುವ ಆತಂಕ!
ಮಾಧ್ಯಮ ಅಕಾಡೆಮಿ ಸದಸ್ಯರಾಗಿ ಆಯ್ಕೆಯಾದವರು:
ಪದನಿಮಿತ್ತ ಸದಸ್ಯರು
ಮೈಸೂರು ಮಾನಸ ಗಂಗೋತ್ರಿ ಕಾಲೇಜು ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥರು
ಮಂಗಳೂರು ಮಂಗಳ ಗಂಗೋತ್ರಿ ಕಾಲೇಜು ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥರು
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ