ಶ್ರೀರಾಮಲು ಮುಂದೆಯೇ ಆತ್ಮಹತ್ಯೆಗೆ ಯತ್ನಿಸಿದ ಸ್ವಾಮೀಜಿ: ಸಚಿವರು ಕಕ್ಕಾಬಿಕ್ಕಿ..!

Published : Feb 13, 2021, 07:27 PM IST
ಶ್ರೀರಾಮಲು ಮುಂದೆಯೇ ಆತ್ಮಹತ್ಯೆಗೆ ಯತ್ನಿಸಿದ ಸ್ವಾಮೀಜಿ: ಸಚಿವರು ಕಕ್ಕಾಬಿಕ್ಕಿ..!

ಸಾರಾಂಶ

ಸ್ವಾಮೀಜಿಯೊಬ್ಬರು ಸಚಿವ ಬಿ. ಶ್ರೀರಾಮುಲು ಮುಂದೆಯೇ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದ್ದು, ಶ್ರೀರಾಮುಲು ಕಕ್ಕಾಬಿಕ್ಕಿಯಾಗಿದ್ದಾರೆ.

ಚಿತ್ರದುರ್ಗ, (ಫೆ.13): ಸಮಾಜ ಕಲ್ಯಾಣ ಸಚಿವ ಬಿ. ಶ್ರೀರಾಮುಲು ಮುಂದೆಯೇ ಸ್ವಾಮೀಜಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.

ಚಿತ್ರದುರ್ಗದ ಬಿಜೆಪಿ ಕಚೇರಿಯಲ್ಲಿ ನಡೆದಿದ್ದ ಕಾರ್ಯಕ್ರಮದಲ್ಲಿ ಸಚಿವರು ಭಾಗವಹಿಸಿದ್ದ ವೇಳೆ ಶರಣರ ಸುಜ್ಞಾನ ಮಂಟಪದ ತಿಪ್ಪೇರುದ್ರ ಸ್ವಾಮೀಜಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಬಿಜೆಪಿಗೆ ಖಡಕ್ ಎಚ್ಚರಿಕೆ ಸಂದೇಶ ರವಾನಿಸಿದ ಜಯ ಮೃತ್ಯುಂಜಯ ಸ್ವಾಮೀಜಿ

 ತಕ್ಷಣ ಪೋಲೀಸರು ಜಾಗೃತವಾಗಿ ಸ್ವಾಮೀಜಿ ಕೈಯಲ್ಲಿದ್ದ ವಿಷದ ಬಾಟಲಿಯನ್ನು ಕಸಿದುಕೊಂಡಿದ್ದಾರೆ. ಈ ಮೂಲಕ ಅಪಾಯದಿಂದ ಪಾರು ಮಾಡಿದ್ದು, ಸದ್ಯ ಸ್ವಾಮೀಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. 

ಕುಣಿಗಲ್, ಚಿತ್ರದುರ್ಗ ಯೋಗವನ ಬೆಟ್ಟದ ಪೀಠಾಧ್ಯಕ್ಷ ಸ್ಥಾನ ತಪ್ಪಿದ ಹಿನ್ನೆಲೆ ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾಗಿದ್ದಾರೆ. ಪಕ್ಷದ ಕಚೇರಿ ಸಮೀಪ ನಡೆದ ಈ ಅಹಿತಕರ ಘಟನೆಯಿಂದಾಗಿ ಸಚಿವ ಶ್ರೀರಾಮುಲು ಮಾತ್ರ ಕಕ್ಕಾಬಿಕ್ಕಿಯಾದರು.

ಅಧಿಕಾರ ಹಾಗೂ ಹಣದ ಬಲದಿಂದಾಗಿ ತನಗೆ ನ್ಯಾಯಯುತವಾಗಿ ಸಿಗಬೇಕಿದ್ದ ಪೀಠಾಧಿಕಾರ ಕೈತಪ್ಪಿದೆ ಎಂದು ಸ್ವಾಮೀಜಿ ಸಚಿವ ರಾಮುಲು ಅವರ ಬಳಿ ಅಳಲು ತೋಡಿಕೊಂಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಶಾಲೆಯಿಂದ ಮರಳುತ್ತಿದ್ದ ವೇಳೆ ಬೀದಿ ನಾಯಿ ದಾಳಿ, 5 ವರ್ಷದ LKG ಬಾಲಕಿಗೆ ಗಂಭೀರ ಗಾಯ
ಕರ್ನಾಟಕದಲ್ಲಿ ನಿಮ್ಹಾನ್ಸ್ ಮಾದರಿಯ ಮತ್ತಷ್ಟು ಸಂಸ್ಥೆಗಳು ಅಗತ್ಯ: ಸಚಿವ ಶರಣ ಪ್ರಕಾಶ್ ಪಾಟೀಲ್