ಸ್ವಾತಂತ್ರ್ಯ ಪೂರ್ವದಲ್ಲಿ ಊರಿನ ಮುಖಂಡರು ಹಾಗೂ ಅರ್ಚಕರ ನೇತೃತ್ವದಲ್ಲಿ ದೇವ ಸ್ಥಾನಗಳು ನಡೆಯುತ್ತಿದ್ದವು. ಕೇಂದ್ರ ಸರ್ಕಾರ ಕೂಡಲೇ ಮಠ-ಮಾನ್ಯಗಳಿಗೆ ವಿಶೇಷ ಕಾಯ್ದೆ ತರಬೇಕು ಎಂದು ಅಭಿಪ್ರಾಯಪಟ್ಟ ಮಂತ್ರಾಲಯದ ಸುಬುಧೇಂದ್ರ ತೀರ್ಥರು
ಬೆಂಗಳೂರು(ಸೆ.24): ತಿರುಪತಿ ಲಡ್ಡು ಪ್ರಸಾದಕ್ಕೆ ಕಲಬೆರೆಕೆ ತುಪ್ಪ ಪೂರೈಕೆ ವಿವಾದದ ಬೆನ್ನಲ್ಲೇ ರಾಜ್ಯದಲ್ಲೂ ಇದೀಗ ದೇವಸ್ಥಾನಗಳನ್ನು ಸರ್ಕಾರದ ಹಿಡಿತ ದಿಂದ ಮುಕ್ತಗೊಳಿಸುವ ಹಾಗೂ ದೇಗುಲಗಳ ನಿರ್ವಹಣೆಗೆ ಮಠಾಧೀಶರ ನೇತೃತ್ವದಲ್ಲಿ ಪ್ರತ್ಯೇಕ ನಿಯಂತ್ರಣ ಮಂಡಳಿ ಸ್ಥಾಪಿಸುವಂತೆ ನಾಡಿನ ಪ್ರಮುಖ ಸಂತರಿಂದ ಆಗ್ರಹ ಕೇಳಿಬಂದಿದೆ.
ಆಂಧ್ರದ ಡಿಸಿಎಂ ಪವನ್ ಕಲ್ಯಾಣ್ ಅವರು ಹಿಂದೂ ದೇಗುಲಗಳ ರಕ್ಷಣೆಗೆ ಸನಾತನ ಧರ್ಮ ರಕ್ಷಣಾ ಮಂಡಳಿ ಸ್ಥಾಪನೆ ಕುರಿತ ಅಭಿಪ್ರಾಯ ತೇಲಿಬಿಟ್ಟಿದ್ದರು. ಇದರ ಬೆನ್ನಲ್ಲೇ ರಾಜ್ಯದ ಪ್ರಮುಖ ಮಠಾಧೀಶರಾದ ಪೇಜಾವರ ಮಠದ ವಿಶ್ವಪ್ರಸನ್ನ ಸ್ವಾಮೀಜಿ, ಉಡುಪಿ ಪರ್ಯಾಯ ಪುತ್ತಿಗೆ ಮಠದ ಸುಭುದೇಂದ್ರ ಶ್ರೀಗಳು, ಮಂತ್ರಾಲಯದ ಸುಭುದೇಂದ್ರ ತೀರ್ಥರು ಹಾಗೂ ಭಂಡಾರಕೇರಿ ಮಠಾಧೀಶ ಶ್ರೀ ವಿದ್ಯೆಶ ತೀರ್ಥರು ಹಿಂದೂಗಳನ್ನು ಸರ್ಕಾರದ ಹಿಡಿತದಿಂದ ಮುಕ್ತಗೊಳಿಸಿ ಹಿಂದೂಗಳ ಕೈಗೆ ನೀಡುವಂತೆ ಒತ್ತಾಯಿಸಿದ್ದಾರೆ.
ಭಕ್ತರ, ಜನರ ಭಾವನೆಗಳ ಜೊತೆ ಆಟ ಸರಿಯಲ್ಲ: ಸಚಿವ ಎಂ.ಬಿ.ಪಾಟೀಲ್
ಸ್ವಾತಂತ್ರ್ಯ ಪೂರ್ವದಲ್ಲಿ ಊರಿನ ಮುಖಂಡರು ಹಾಗೂ ಅರ್ಚಕರ ನೇತೃತ್ವದಲ್ಲಿ ದೇವ ಸ್ಥಾನಗಳು ನಡೆಯುತ್ತಿದ್ದವು. ಕೇಂದ್ರ ಸರ್ಕಾರ ಕೂಡಲೇ ಮಠ-ಮಾನ್ಯಗಳಿಗೆ ವಿಶೇಷ ಕಾಯ್ದೆ ತರಬೇಕು ಎಂದು ಮಂತ್ರಾಲಯದ ಸುಬುಧೇಂದ್ರ ತೀರ್ಥರು ಅಭಿಪ್ರಾಯಪಟ್ಟಿದ್ದಾರೆ. ಇನ್ನು ಪೇಜಾವರ ಮಠದ ವಿಶ್ವಪ್ರಸನ್ನ ಶ್ರೀಗಳು ಕೂಡ ಇದೇ ರೀತಿಯ ಅಭಿಪ್ರಾಯ ವ್ಯಕ್ತಪಡಿಸಿದ್ದು, ಹಿಂದೂ ಧಾರ್ಮಿಕ ಕೇಂದ್ರಗಳು ಸರ್ಕಾರದ ಅಧೀನದಲ್ಲಿರಬಾ ರದು. ಹಿಂದೂ ಸಂಸ್ಥೆಗಳ ಆಡಳಿತಕ್ಕೆ ಒಳಪಡಬೇಕು ಎಂದು ಸುಪ್ರೀಂ ಕೋರ್ಟ್ ಕೊಡ ತೀರ್ಪು ಇದೆ. ಈ ಹಿನ್ನೆಲೆಯಲ್ಲಿ ಕೂಡಲೇ ಎಲ್ಲ ದೇವಸ್ಥಾನಗಳನ್ನು ಸರ್ಕಾರದಿಂದ ಮುಕ್ತಗೊಳಿಸಿ ಹಿಂದೂಗಳಿಗೆ ಒಪ್ಪಿಸಬೇಕು ಎಂದಿದ್ದಾರೆ. ಪುತ್ತಿಗೆ ಮಠದ ಸುಗುಣೇಂದ್ರ ತೀರ್ಥರು ಕೂಡ, ಸರ್ಕಾರಗಳು ಒಂದು ನಿರ್ದಿಷ್ಟವಾದ ಧರ್ಮವನ್ನು ಮಾತ್ರ ನಿಯಂತ್ರಿಸುವುದು ಸರಿಯಲ್ಲ ಎಂದಿದ್ದಾರೆ.