SWR job notification Kannada row: ರೈಲ್ವೆ ಪರೀಕ್ಷೆಯಲ್ಲಿ ಮತ್ತೆ ಕನ್ನಡ ಕಡೆಗಣನೆ; ಹಿಂದಿ, ಆಂಗ್ಲ ಭಾಷೆಯಲ್ಲಿ ಹೊರಡಿಸಿದ್ದಅಧಿಸೂಚನೆಗೆ ತಡೆ

Kannadaprabha News   | Kannada Prabha
Published : Apr 01, 2026, 04:46 AM IST
Railway Job Notification Without Kannada Language Requirement Put on Hold

ಸಾರಾಂಶ

ನೈಋತ್ಯ ರೈಲ್ವೆ ವಲಯದ ಹುಬ್ಬಳ್ಳಿ ವಿಭಾಗದಲ್ಲಿ ಮುಂಬಡ್ತಿ ಪರೀಕ್ಷೆಗೆ ಕನ್ನಡವನ್ನು ಕಡೆಗಣಿಸಿ, ಕೇವಲ ಆಂಗ್ಲ ಹಿಂದಿಯಲ್ಲಿ ಅಧಿಸೂಚನೆ ಹೊರಡಿಸಲಾಗಿತ್ತು. ಈ ಹಿಂದೆ ಇದೇ ಕಾರಣಕ್ಕೆ ಪ್ರತಿಭಟನೆ ನಡೆದು ಪರೀಕ್ಷೆ ರದ್ದಾಗಿದ್ದ ಹಿನ್ನೆಲೆ, ಇದೀಗ ಹೊಸ ಅಧಿಸೂಚನೆ ರೈಲ್ವೆ ಇಲಾಖೆ ತಡೆ ಹಿಡಿದಿದೆ.

 ಹುಬ್ಬಳ್ಳಿ (ಏ.1): ನೈಋತ್ಯ ರೈಲ್ವೆ ವಲಯದ ಹುಬ್ಬಳ್ಳಿ ವಿಭಾಗದಲ್ಲಿ ಖಾಲಿ ಇರುವ ಹುದ್ದೆಗಳ ಮುಂಬಡ್ತಿ ಪರೀಕ್ಷೆಗಾಗಿ ಮತ್ತೆ ಕನ್ನಡ ಬಿಟ್ಟು ಅಧಿಸೂಚನೆ ಹೊರಡಿಸಿದ್ದ ರೈಲ್ವೆ ಇಲಾಖೆ, ನಾಲ್ಕೇ ದಿನದಲ್ಲಿ ಅಧಿಸೂಚನೆಯನ್ನು ತಡೆ ಹಿಡಿದಿದೆ.

ಹುಬ್ಬಳ್ಳಿ ವಿಭಾಗದಲ್ಲಿ Chief commercial cum Ticket supervisor Level 6 against 10% LDCE Quota of commercial department ಹುದ್ದೆಗಾಗಿ ಯುಆರ್‌-07, ಎಸ್‌ಸಿ-1, ಎಸ್‌ಟಿ-1 ಸೇರಿ ಒಟ್ಟು 9 ಹುದ್ದೆಗಳ ನೇಮಕಾತಿಗೆ ಆಂಗ್ಲ ಮತ್ತು ಹಿಂದಿಯಲ್ಲಿ ಪರೀಕ್ಷೆ ನಡೆಸುವುದಾಗಿ ಮಾ.27ರಂದು ಅಧಿಸೂಚನೆ ಹೊರಡಿಸಿತ್ತು. ಅರ್ಜಿ ಸಲ್ಲಿಕೆಗೆ ಏ.27 ಕೊನೆಯ ದಿನ ನಿಗದಿಗೊಳಿಸಲಾಗಿತ್ತು. ಆದರೆ, ಈ ಆದೇಶವನ್ನು ಈಗ ವಲಯದ ಹಿರಿಯ ಅಧಿಕಾರಿಗಳು ತಡೆ ಹಿಡಿದಿದ್ದಾರೆ. ಇಲಾಖೆಯ ಸಲಹೆ ಬರುವವರೆಗೂ ತಡೆ ಹಿಡಿಯಲಾಗಿದೆ ಎಂದು ತಿಳಿಸಲಾಗಿದೆ.

ಈ ಹಿಂದೆ, ಮಾರ್ಚ್‌ 17ರಂದು ನೈಋತ್ಯ ರೈಲ್ವೆ ವಿಭಾಗದಲ್ಲಿರುವ ಗೂಡ್ಸ್‌ ಟ್ರೈನ್‌ ಮ್ಯಾನೇಜರ್‌ ಹಾಗೂ ಹುಬ್ಬಳ್ಳಿ ವಿಭಾಗದಲ್ಲಿ ಎಲ್‌ಡಿಸಿಇ (ಲಿಮಿಟೆಡ್‌ ಡಿಪಾರ್ಟ್‌ ಮೆಂಟಲ್‌ ಕಾಂಪಿಟಿಟೀವ್‌ ಎಕ್ಸಾಮಿನೇಷನ್‌) ಮುಂಬಡ್ತಿ ಹುದ್ದೆಗಳಿಗೆ ನಡೆಸಲಾದ ಪರೀಕ್ಷೆ ವೇಳೆ ಕೂಡ ಕನ್ನಡವನ್ನು ಕಡೆಗಣಿಸಲಾಗಿತ್ತು. ಕೊನೆ ಕ್ಷಣದಲ್ಲಿ ಕನ್ನಡ ಬಿಟ್ಟು ಆಂಗ್ಲ ಮತ್ತು ಹಿಂದಿ ಭಾಷೆಯಲ್ಲಿ ಪರೀಕ್ಷೆ ನಡೆಸಲು ಮುಂದಾಗಿದ್ದ ಕುರಿತು ‘ಕನ್ನಡಪ್ರಭ’ ವಿಶೇಷ ವರದಿ ಪ್ರಕಟಿಸಿತ್ತು. ಆಗ ಕರವೇ ಕಾರ್ಯಕರ್ತರು ತೀವ್ರ ಪ್ರತಿಭಟನೆ ನಡೆಸಿದ್ದರು. ಪ್ರತಿಭಟನೆಗೆ ಮಣಿದು ಪರೀಕ್ಷೆಯನ್ನು ರದ್ದುಪಡಿಸಲಾಗಿತ್ತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸಿಎಂ ಸಿದ್ದರಾಮಯ್ಯ ತಂದಿರುವ ಸೂಟ್‌ಕೇಸ್ ಕೆಲಸ ಮಾಡಲ್ಲ: ಬಿ.ವೈ.ವಿಜಯೇಂದ್ರ ವಾಗ್ದಾಳಿ
ಕನ್ನಡದ ನಟಿ ಸೌಮ್ಯ ಶೆಟ್ಟಿ ಮದುವೆಯಾದ ಒಂದೇ ತಿಂಗಳಿಗೆ ಗಂಡ ಆತ್ಮ*ಹತ್ಯೆ! ಸೊಸೆ ವಿರುದ್ಧ ತಿರುಗಿಬಿದ್ದ ಮಾವ!