
ಬೆಳಗಾವಿ(ಜ.05): ಒಳಚರಂಡಿ ಮತ್ತು ಶುದ್ಧೀಕರಣ ಘಟಕ ಸ್ಥಾಪಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಮತ್ತು ಬೆಳಗಾವಿ ದಕ್ಷಿಣ ಬಿಜೆಪಿ ಶಾಸಕ ಅಭಯ್ ಪಾಟೀಲ್ ನಡುವೆ ವಾಗ್ವಾದ ನಡೆದಿದೆ.
ಬೆಳಗಾವಿ ಡಿಸಿ ಕಚೇರಿಯಲ್ಲಿ ನಡೆದ ರೈತರ ಸಭೆಯಲ್ಲಿ ಹೆಬ್ಬಾಳ್ಕರ್ ಮತ್ತು ಪಾಟೀಲ್ ನಡುವೆ ಮಾತಿನ ಚಕಮಕಿ ನಡೆದಿದೆ.
ಒಳಚರಂಡಿ ಮತ್ತು ಶುದ್ಧೀಕರಣ ಘಟಕ ಸ್ಥಾಪನೆಗೆ ಹಲಗಾ ಗ್ರಾಮದ ಬದಲಾಗಿ ಬೆಳಗಾವಿ ದಕ್ಷಿಣದಲ್ಲಿ ಇರುವ ಪಾಲಿಕೆ ಜಾಗೆಯಲ್ಲಿ ಮಾಡಲು ಅವಕಾಶವಿದೆ ಎಂದು ಹೆಬ್ಬಾಳ್ಕರ್ ಹೇಳಿದರು.
"
ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ ಶಾಸಕ ಅಭಯ ಪಾಟೀಲ್, ನನ್ನ ಮತಕ್ಷೇತ್ರದಲ್ಲಿ ಮೂಗು ತೂರಿಸುವುದು ಬೇಡ ಎಂದು ಏರುಧ್ವನಿಯಲ್ಲಿ ಹೇಳಿದರು.
ಇನ್ನು ಇಬ್ಬರು ಶಾಸಕರ ಕಿತ್ತಾಟ ಕಂಡು ಸಚಿವ ಸತೀಶ ಜಾರಕಿಹೊಳಿ ಮತ್ತು ಸಂಸದರು ಮೌನಕ್ಕೆ ಶರಣಾದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ