Smart Meter Scam: ಸಚಿವ ಜಾರ್ಜ್‌ ಆಪ್ತ ಉದ್ಯಮಿಗಳ ಮೇಲೆ ತೆರಿಗೆ ಇಲಾಖೆ ದಾಳಿ, ಎಂಬಸ್ಸಿ ಗ್ರೂಪ್‌ಗೂ ರೇಡ್‌ । ದಾಖಲೆಗಳ ವಶ

Kannadaprabha News, Ravi Janekal |   | Kannada Prabha
Published : Jul 31, 2025, 07:36 AM IST
Smart Meter Scam

ಸಾರಾಂಶ

ಇಂಧನ ಸಚಿವರ ಆಪ್ತ ರಿಯಲ್ ಎಸ್ಟೇಟ್ ಉದ್ಯಮಿಗಳು ಮತ್ತು ಎಲೆಕ್ಟ್ರಿಕ್ ಗುತ್ತಿಗೆದಾರರ ಮನೆ ಹಾಗೂ ಕಚೇರಿಗಳ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿದೆ. ಸ್ಮಾರ್ಟ್ ಮೀಟರ್ ಟೆಂಡರ್ ಅವ್ಯವಹಾರದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ ಎನ್ನಲಾಗಿದ್ದು, ಮಹತ್ವದ ದಾಖಲೆಗಳು ಪತ್ತೆಯಾಗಿವೆ.

ಬೆಂಗಳೂರು (ಜುಲೈ.31): ಇಂಧನ ಸಚಿವ ಕೆ.ಜೆ.ಜಾರ್ಜ್‌ ಆಪ್ತರು ಎನ್ನಲಾದ ರಿಯಲ್‌ ಎಸ್ಟೇಟ್‌ ಉದ್ಯಮಿಗಳು ಹಾಗೂ ಎಲೆಕ್ಟ್ರಿಕ್‌ ಗುತ್ತಿಗೆದಾರರ ಮನೆ ಮತ್ತು ಕಚೇರಿಗಳ ಮೇಲೆ ಆದಾಯ ತೆರಿಗೆ ಇಲಾಖೆ (ಐಟಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಎಂಬಸ್ಸಿ ಗ್ರೂಪ್‌ನ ಮುಖ್ಯಸ್ಥರು, ನಿರ್ದೇಶಕರು ಹಾಗೂ ಎಲೆಕ್ಟ್ರಿಕ್‌ ಗುತ್ತಿಗೆದಾರರ ಮನೆ ಮತ್ತು ಕಚೇರಿಗಳ ಮೇಲೆ ಐಟಿ ಅಧಿಕಾರಿಗಳು ಬುಧವಾರ ದಾಳಿ ನಡೆಸಿದ್ದಾರೆ. ದಾಳಿ ವೇಳೆ ಮಹತ್ವದ ದಾಖಲೆಗಳು ಪತ್ತೆಯಾಗಿದ್ದು, ಪರಿಶೀಲನೆ ಮುಂದುವರೆಸಿದ್ದಾರೆ. ಕೆಲವು ವ್ಯವಹಾರಗಳ ಹಿನ್ನೆಲೆಯಲ್ಲಿ ಐಟಿ ಸರ್ವೇ ನಡೆಸಲಾಗಿದೆ ಎನ್ನಲಾಗಿದೆ.

ಜು.28ರಂದು ಸಹ ಇಬ್ಬರು ಎಲೆಕ್ಟ್ರಿಕ್‌ ಗುತ್ತಿಗೆದಾರರ ಮನೆ, ಕಚೇರಿಗಳು ಸೇರಿ 12 ಕಡೆ ದಾಳಿ ನಡೆಸಿದ್ದ ಐಟಿ ಅಧಿಕಾರಿಗಳು ದಾಖಲೆಗಳನ್ನು ವಶಕ್ಕೆ ಪಡೆದು ಪರಿಶೀಲನೆ ನಡೆಸಿದ್ದರು. ಇದರ ಮುಂದುವರೆದ ಭಾಗವಾಗಿ ಬುಧವಾರವೂ ನಗರದ ಕೆಲ ಎಲೆಕ್ಟ್ರಿಕ್‌ ಗುತ್ತಿಗೆದಾರರ ಮನೆ ಹಾಗೂ ಕಚೇರಿಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ರಾಜ್ಯ ಸರ್ಕಾರದ ಸ್ಮಾರ್ಟ್‌ ಮೀಟರ್‌ ಟೆಂಡರ್‌ನಲ್ಲಿ ಅವ್ಯವಹಾರದ ಆರೋಪ ಕೇಳಿ ಬಂದಿದೆ. ಈ ಸಂಬಂಧ ಇಂಧನ ಸಚಿವ ಜಾರ್ಜ್‌ ಸೇರಿ ಬೆಸ್ಕಾಂನ ಕೆಲ ಅಧಿಕಾರಿಗಳ ವಿರುದ್ಧ ಬಿಜೆಪಿ ನಾಯಕರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಖಾಸಗಿ ದೂರು ದಾಖಲಿಸಿದ್ದಾರೆ. ಇದರ ಬೆನ್ನಲ್ಲೇ ಜಾರ್ಜ್‌ ಆಪ್ತರೆನ್ನಲಾದ ಎಲೆಕ್ಟ್ರಿಕ್‌ ಗುತ್ತಿಗೆದಾರರು, ರಿಯಲ್‌ ಎಸ್ಟೇಟ್‌ ಉದ್ಯಮಿಗಳ ಮನೆ ಹಾಗೂ ಕಚೇರಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎನ್ನಲಾಗಿದೆ. ಆದರೆ, ಈ ದಾಳಿ ಕುರಿತು ಆದಾಯ ತೆರಿಗೆ ಇಲಾಖೆ ಈವರೆಗೂ ಮಾಹಿತಿ ನೀಡಿಲ್ಲ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸಿಎಂ ಕುರ್ಚಿ ಪೈಪೋಟಿಯಲ್ಲಿ ರೈತ ಸಮಸ್ಯೆ ಗೌಣ: ಬಿ.ವೈ.ವಿಜಯೇಂದ್ರ ಟೀಕೆ
ಕರ್ನಾಟಕದಲ್ಲಿ ಶೇ.63 ಭ್ರಷ್ಟಾಚಾರ: ಸಿಬಿಐ ತನಿಖೆಗೆ ಒತ್ತಾಯಿಸಿದ ಆರ್‌.ಅಶೋಕ್‌