
ಕೊಪ್ಪಳ(ಆ.11): ಕೊಪ್ಪಳ ತಾಲೂಕಿನ ಮುನಿರಾಬಾದ್ ಬಳಿ ಇರುವ ತುಂಗಭದ್ರಾ ಜಲಾಶಯದ 19 ನಂಬರ್‌ಗೇಟ್ ನ ಚೈನ್ ಲಿಂಕ್ ಶನಿವಾರ ರಾತ್ರಿ 11 ಗಂಟೆಯ ಸುಮಾರಿಗೆ ತುಂಡಾಗಿದೆ. ಇದರಿಂದಾಗಿ 1 ಲಕ್ಷ ಕ್ಯೂಸೆಕ್‌ಗೂ ಅಧಿಕ ನೀರು ಡ್ಯಾಂನಿಂದ ನದಿಗೆ ಹರಿದು ಹೋಗುತ್ತಿದೆ.
ಈ ಹಿನ್ನೆಲೆಯಲ್ಲಿ ನದಿ ಪಾತ್ರದ ಜನರು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ. ರಾತ್ರೋರಾತ್ರಿ ಸಚಿವ ಶಿವರಾಜ್ ತಂಗಡಗಿ ಹಾಗೂ ಶಾಸಕ ರಾಘವೇಂದ್ರ ಹಿಟ್ನಾಳ್ ಡ್ಯಾಂಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಸದ್ಯಕ್ಕೆ ಗೇಟ್‌ನ ರಿಪೇರಿ ಕಷ್ಟ ಎನ್ನಲಾಗಿದೆ. ಹೀಗಾಗಿ ಡ್ಯಾಂನಲ್ಲಿ ಒತ್ತಡ ಕಡಿಮೆ ಮಾಡಲು ಇತರ ಗೇಟ್‌ಗಳಿಂದ 1 ಲಕ್ಷ ಕ್ಯುಸೆಕ್‌ಗೂ ಹೆಚ್ಚು ನೀರು ಬಿಡಲಾಗುತ್ತಿದೆ. ಜನರು ನದಿ ಕಡೆ ಹೋಗದಂತೆ ಡಂಗುರ ಸಾರಲಾಗುತ್ತಿದೆ.
ಹೊಸಪೇಟೆ: ತುಂಗಭದ್ರಾ ಜಲಾಶಯ ಬಹುತೇಕ ಭರ್ತಿ..!
ಭೇಟಿ ನಂತರ ಮಾತನಾಡಿದ ಸಚಿವ ಶಿವರಾಜ್ ತಂಗಡಗಿ ಅವರು, ಡ್ಯಾಂಗೆ ಬಂದು ವೀಕ್ಷಣೆ ಮಾಡಿದ್ದೇನೆ, ಅಧಿಕಾರಿಗಳ ಜೊತೆ ಮಾತನಾಡಿದ್ದೇನೆ. ಡ್ಯಾಂ ಸುರಕ್ಷತೆಗೆ ಯಾವುದೇ ತೊಂದರೆ ಇಲ್ಲ. ಸದ್ಯದ ಮಟ್ಟಿಗೆ 60 ರಿಂದ 65 ಟಿಎಂಸಿಗೂ ಹೆಚ್ಚು ನೀರು ಖಾಲಿ ಮಾಡಬೇಕಾಗುತ್ತದೆ. 20 ಫೀಟ್ ನೀರು ಖಾಲಿಯಾದ್ರೆ ಮಾತ್ರ ಸಮಸ್ಯೆ ಏನಾಗಿದೆ ಅಂತ ಗೊತ್ತಾಗಲಿದೆ. ಹೀಗಾಗಿ ಡ್ಯಾಂ ನಲ್ಲಿರೋ ನೀರನ್ನು ಖಾಲಿ ಮಾಡೋ ಅನಿವಾರ್ಯತೆ ಉಂಟಾಗಿದೆ. ಡ್ಯಾಂ ನಿರ್ಮಾಣ ಸಮಯದಲ್ಲಿನ ಡಿಜೈನ್ ತರಿಸಲಾಗುತ್ತಿದೆ. ನೀರಿನ ಫೋರ್ಸ್ ಹೆಚ್ಚಿರೋದರಿಂದ ಕೆಳಗಿಳಿದು ಕೆಲಸ ಮಾಡಲು ಆಗಲ್ಲಾ. ಸದ್ಯ ಒಂದು ಲಕ್ಷ ಕ್ಯೂಸೆಕ್ ನೀರನ್ನು ಹೊರ ಬಿಡಲಾಗುತ್ತಿದೆ. 2.35 ಲಕ್ಷ ಕ್ಯೂಸೆಕ್ ನೀರು ಬಿಟ್ಟರು ಯಾರಿಗೂ ಯಾವುದೇ ತೊಂದರೆ ಆಗಲ್ಲ. 2.50 ಲಕ್ಷ ಕ್ಯೂಸೆಕ್ ದಾಟಿದ್ರೆ ತೊಂದರೆ ಆಗುತ್ತದೆ. ಘಟನೆ ಬಗ್ಗೆ ಸಿಎಂ ಮತ್ತು ಡಿಸಿಎಂ ಗೆ ಮಾಹಿತಿ ನೀಡಲಾಗುತ್ತಿದೆ. ಬೆಂಗಳೂರು, ಹೈದ್ರಾಬಾದ್, ಚೆನ್ನೈ ನಿಂದ ತಜ್ಞರ ತಂಡ ಬರಲಿದೆ. ಇಂದು ಮುಂಜಾನೆ ತಜ್ಞರ ತಂಡಗಳು ಡ್ಯಾಂಗೆ ಆಗಮಿಸಿ ಪರಿಶೀಲನೆ ನಡೆಸಲಿವೆ ಎಂದು ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ