ಕೋಲಾರ ಜಿಲ್ಲೆಯಲ್ಲಿ ಶೌಚಗುಂಡಿಗೆ ಮಕ್ಕಳನ್ನ ಇಳಿಸಿದ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಘಟನೆ ಬಯಲಿಗೆ ಬಂದಿದೆ. ಅದು ರಾಜ್ಯ ರಾಜಧಾನಿಯಲ್ಲೇ ನಡೆದಿರುವುದು ಸರ್ಕಾರಿ ಶಾಲೆಗಳಲ್ಲಿ ಮಕ್ಕಳು ಯಾವ ಎಂಥ ವಾತಾವರಣದಲ್ಲಿ ಕಲಿಯುತ್ತಿದ್ದಾರೆಂಬುದುಕ್ಕೆ ಕನ್ನಡಿ ಹಿಡಿದಂತಿದೆ.
ಬೆಂಗಳೂರು (ಡಿ.22): ಕೋಲಾರ ಜಿಲ್ಲೆಯಲ್ಲಿ ಶೌಚಗುಂಡಿಗೆ ಮಕ್ಕಳನ್ನ ಇಳಿಸಿದ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಘಟನೆ ಬಯಲಿಗೆ ಬಂದಿದೆ. ಅದು ರಾಜ್ಯ ರಾಜಧಾನಿಯಲ್ಲೇ ನಡೆದಿರುವುದು ಸರ್ಕಾರಿ ಶಾಲೆಗಳಲ್ಲಿ ಮಕ್ಕಳು ಯಾವ ಎಂಥ ವಾತಾವರಣದಲ್ಲಿ ಕಲಿಯುತ್ತಿದ್ದಾರೆಂಬುದುಕ್ಕೆ ಕನ್ನಡಿ ಹಿಡಿದಂತಿದೆ.
ಬೆಂಗಳೂರಿನ ಯಶವಂತಪುರ ವಿಧಾನಸಭಾ ಕ್ಷೇತ್ರದ ಸರ್ಕಾರಿ ಶಾಲೆಯಲ್ಲಿ ಮಕ್ಕಳಿಂದಲೇ ಶೌಚಾಲಯ ಸ್ವಚ್ಛಗೊಳಿಸಿ ಅಮಾನವೀಯ ಕೃತ್ಯ ನಡೆಸಿರುವ ಶಿಕ್ಷಕರು. ಯಶವಂತಪುರ ಕ್ಷೇತ್ರದ ಅಂದ್ರಹಳ್ಳಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ನಡೆದಿರುವ ಕೃತ್ಯ. ಶಾಲಾ ಮಕ್ಕಳ ಕೈಯಿಂದಲೇ ಶೌಚಾಲಯ ಕ್ಲೀನ್ ಮಾಡಿಸಿಕೊಂಡ ಶಿಕ್ಷಕರು. ವಿದ್ಯಾಭ್ಯಾಸಕ್ಕೆ ಮಕ್ಕಳಿಂದ ಶೌಚಾಲಯ ಕ್ಲೀನ್ ಮಾಡಿಸುವುದು ಹೇಯ ಕೃತ್ಯವಾಗಿದೆ ಎಂದು ಸಾರ್ವಜನಿಕರು ಶಾಲಾ ಸಿಬ್ಬಂದಿ ವಿರುದ್ಧ ಕಿಡಿಕಾರಿದರು.
undefined
ಮಕ್ಕಳನ್ನು ಮಲದ ಗುಂಡಿಗೆ ಇಳಿಸಿ ಕ್ಲೀನ್ ಮಾಡಿಸಿದ ಪ್ರಕರಣ; ಕೇಸ್ ಮುಚ್ಚಿಹಾಕಲು ಯತ್ನ: ಸಂಸದ ನಾರಾಯಣಸ್ವಾಮಿ ಆರೋಪ
ಹಿಂದಿನಿಂದಲೂ ಈ ಶಾಲೆಯ ಶಿಕ್ಷಕರು ಮಕ್ಕಳಿಂದ ಶೌಚಾಲಯ ಕ್ಲೀನ್ ಮಾಡಿಸುತ್ತಿದ್ದಾರೆ ಎಂಬ ಆರೋಪವೂ ಕೇಳಿಬಂದಿದೆ. ಈ ವಿಚಾರ ಪೋಷಕರಿಗೆ ಗೊತ್ತಾಗಿ ಶಾಲೆಯ ಮುಂದೆ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪೋಷಕರು ಬೆಳಗ್ಗೆಯಿಂದಲೇ ಶಾಲೆಯ ಮುಂದೆ ಜಮಾಯಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಇತ್ತ ಶಾಲಾ ಶಿಕ್ಷಕರು ಎಂದಿನಂತೆ ಶಾಲೆಗೆ ತಡವಾಗಿ ಬಂದು ಪೋಷಕರು ಕೆಂಗಣ್ಣಿಗೆ ಗುರಿಯಾದರು.
ಇತ್ತೀಚೆಗೆ ಕೋಲಾರ ಜಿಲ್ಲೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಮಕ್ಕಳಿಂದ ಶೌಚಾಲಯ ಸ್ವಚ್ಛಗೊಳಿಸಿದ ಕೃತ್ಯ ರಾಜ್ಯಾದ್ಯಂತ ಭಾರೀ ಸುದ್ದಿಯಾಗಿತ್ತು. ಅಲ್ಲದೇ ವಸತಿ ಗೃಹದಲ್ಲಿ ವಿದ್ಯಾರ್ಥಿನಿಯರ ವಿಡಿಯೋ ತೆಗೆದ ವಿಚಾರವೂ ಬಯಲಿಗೆ ಬಂದಿತ್ತು. ಇದೀಗ ರಾಜಧಾನಿ ಬೆಂಗಳೂರಿನಲ್ಲೇ ಇಂಥ ಕೃತ್ಯ ನಡೆದಿರುವುದು ಪೋಷಕರು ಪ್ರತಿಭಟನೆ ನಡೆಸಿ ಅಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಜ್ಯಾದ್ಯಂತ ಸರ್ಕಾರಿ ಶಾಲೆಗಳಲ್ಲಿ ಒಂದು ಕಡೆ ಶಿಕ್ಷಕರ ನೇಮಕಾತಿ ಆಗಿಲ್ಲ. ಸಾಕಷ್ಟು ಸಿಬ್ಬಂದಿ ಇಲ್ಲದ ಕಾರಣ ವಿದ್ಯಾರ್ಥಿಗಳನ್ನೇ ದುರ್ಬಳಕೆ ಮಾಡಿಕೊಳ್ಳುತ್ತಿರುವುದು ಇದಕ್ಕೆ ಕೊನೆಯೇ ಇಲ್ಲದಂತಾಗಿದೆ.
ಈ ಶಾಲೆಯಲ್ಲಿ ಒಟ್ಟು 600 ಜನ ಮಕ್ಕಳು ಕಲಿಯುತ್ತಿದ್ದಾರೆ. ದಿನನಿತ್ಯ ಮಕ್ಕಳೇ ಶೌಚಾಲಯ ಕ್ಲೀನ್ ಮಾಡಬೇಕು. ಮಕ್ಕಳೇ ಶಿಕ್ಷಕರು ಊಟ ಮಾಡುವ ತಟ್ಟೆ ತೊಳೆಯಬೇಕು, ಈ ಹಿಂದೆಯೂ ಮಕ್ಕಳಿಂದ ಟಾಯ್ಲೆಟ್ ಕ್ಲೀನ್ ಮಾಡಿಸಲಾಗಿತ್ತು. ಈ ಬಗ್ಗೆ ಪೋಷಕರು ದೂರು ಕೂಡಾ ನೀಡಿದ್ರು. ಆದರೂ ಯಾವುದೇ ಕ್ರಮ ಜರುಗಿಸಿಲ್ಲ. ಇದೀಗ ವಿಡಿಯೋ ಸಮೇತ ಸಾಕ್ಷಿ ಸಿಕ್ಕಿದೆ. ಶಾಲಾ ಶಿಕ್ಷಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೋಷಕರು ಬಿಗಿಪಟ್ಟು. ಶಾಲೆ ಮುಂದೆ ಜಮಾಯಿಸಿ ಪ್ರತಿಭಟನೆ ನಡೆಸುತ್ತಿರುವ ಪೋಷಕರು.