
ಬೆಂಗಳೂರು(ಜು.17): ಕೊರೋನಾ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಶಾಲಾ ಶಿಕ್ಷಕರು ಮತ್ತು ಬೋಧಕೇತರ ಸಿಬ್ಬಂದಿ ಜು.31ರವರೆಗೆ ಮನೆಯಿಂದಲೇ ಕೆಲಸ ನಿರ್ವಹಿಸುವಂತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.
ಎಸ್ಸೆಸ್ಸೆಲ್ಸಿ ಮೌಲ್ಯಮಾಪನ ಕರ್ತವ್ಯಕ್ಕೆ ಹಾಜರಾಗುವವರು ಮತ್ತು ಕೊರೋನಾ ಕರ್ತವ್ಯಕ್ಕೆ ನಿಯೋಜನೆಯಾಗಿರುವವರನ್ನು ಹೊರತುಪಡಿಸಿ ಉಳಿದೆಲ್ಲ ಶಾಲಾ ಶಿಕ್ಷಕರು, ಸಿಬ್ಬಂದಿ, ಸಂಶೋಧಕರು, ಗುತ್ತಿಗೆ ನೌಕರರು, ಗೌರವ ಶಿಕ್ಷಕರು ಸೇರಿದಂತೆ ಎಲ್ಲ ಸಿಬ್ಬಂದಿಗಳು ಜು.31ರವರೆಗೆ ಮನೆಯಲ್ಲೇ ಕೆಲಸ ನಿರ್ವಹಿಸಬೇಕೆಂದು ಇಲಾಖೆಯ ಸೂಚನೆ ನೀಡಿದೆ.
ಶಾಲಾ ಮಕ್ಕಳಿಗೆ ಪಠ್ಯಪುಸ್ತಕ ವಿತರಣೆಗೆ ಸೂಚನೆ
ಈ ಅವಧಿಯನ್ನು ಕರ್ತವ್ಯ ಅವಧಿ ಎಂದು ಪರಿಗಣಿಸಲಾಗುತ್ತದೆ. ಶಿಕ್ಷಕರು ಮತ್ತು ಸಿಬ್ಬಂದಿಗಳು ತುರ್ತು ಸಂದರ್ಭದಲ್ಲಿ ಸಂಪರ್ಕಿಸಲು ತಮ್ಮ ದೂರವಾಣಿ ಸಂಖ್ಯೆ ನೀಡಿರಬೇಕು. ಈ ಅವಧಿಯಲ್ಲಿ ಕೇಂದ್ರ ಸ್ಥಾನವನ್ನು ಬಿಟ್ಟು ಹೋಗಬಾರದು. ಅಗತ್ಯವಿದ್ದಾಗ ಸೇವೆ ಸಲ್ಲಿಸಲು ಸಿದ್ಧರಾಗಿರಬೇಕು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ