ಸಾರ್ವಜನಿಕರಲ್ಲಿ ತಪ್ಪು ಅಭಿಪ್ರಾಯ ಮೂಡಿಸುವ ಬೇಜವಾಬ್ದಾರಿ ಹೇಳಿಕೆ ನೀಡುವುದು ಸರಿಯಲ್ಲ | ಅಖಿಲೇಶ್ ಯಾದವ್ ವಿರುದ್ಧ ಸಂಸದ ತೇಜಸ್ವಿ ಸೂರ್ಯ ಕಿಡಿ
ಬೆಂಗಳೂರು(ಜ.06): ಕೋವಿಡ್ ಲಸಿಕೆಗೆ ಬಿಜೆಪಿ ಲಸಿಕೆ ಎಂದು ಬೇಜವಾಬ್ದಾರಿ ಹೇಳಿಕೆ ನೀಡಿದ ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ವಿರುದ್ಧ ಸಂಸದ ತೇಜಸ್ವಿ ಸೂರ್ಯ ಕಿಡಿಕಾರಿದ್ದಾರೆ.
ಬೆಂಗಳೂರಿನಲ್ಲಿ ಕೋವಿಡ್ ಲಸಿಕೆ ವಿತರಣೆ ಕುರಿತ ಬಿಬಿಎಂಪಿ ಅಧಿಕಾರಿಗಳೊಂದಿಗೆ ಮಂಗಳವಾರ ಪೂರ್ವ ಸಿದ್ಧತೆ ಸಭೆ ನಡೆಸಿದರು. ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋವಿಡ್ ಲಸಿಕೆ ಬರುವುದರಿಂದ ಲಕ್ಷಾಂತರ ಜನರ ಜೀವ ಉಳಿಯಲಿದೆ. ಹಲವು ಹಂತದ ಸಂಶೋಧನೆಗಳ ನಂತರವಷ್ಟೇ ಲಸಿಕೆ ಮಾರುಕಟ್ಟೆಗೆ ಮುಕ್ತವಾಗಲಿದೆ.
ಕೋವಿಡ್ ವ್ಯಾಕ್ಸಿನ್ ಡ್ರೈ ರನ್ ಬಗ್ಗೆ ಮಾಹಿತಿ ಪಡೆದ ಸಂಸದ ತೇಜಸ್ವಿ ಸೂರ್ಯ
ಆದರೆ, ಕೋವಿಡ್ ಲಸಿಕೆಯನ್ನು ಬಿಜೆಪಿ ಲಸಿಕೆ ಎಂದು ಹೇಳುವುದು ಹಾಗೂ ಲಸಿಕೆಯ ಬಗ್ಗೆ ಸಾರ್ವಜನಿಕರಲ್ಲಿ ತಪ್ಪು ಅಭಿಪ್ರಾಯ ಮೂಡಿಸುವ ಬೇಜವಾಬ್ದಾರಿ ಹೇಳಿಕೆ ನೀಡುವುದು ಸರಿಯಲ್ಲ. ಉತ್ತರ ಪ್ರದೇಶ ರಾಜಕಾರಣಿ ಅಖಿಲೇಶ್ ಯಾದವ್ ಸೇರಿದಂತೆ ಮತ್ತಿತರರು ಈ ರೀತಿ ಮಾತನಾಡಿದ್ದಾರೆ. ಆದರೆ, ಈ ವಿಚಾರದಲ್ಲಿ ರಾಜ್ಯದ ಯಾವ ಪಕ್ಷದ ನಾಯಕರು ಹಗುರವಾಗಿ ಮಾತನಾಡಿಲ್ಲ ಎಂದರು.
ಲಸಿಕೆ ತೆಗೆದುಕೊಳ್ಳುವುದರಿಂದ ನಿಶಕ್ತಿ ಉಂಟಾಗಲಿದೆ, ಮಕ್ಕಳಾಗುವುದಿಲ್ಲ ಎಂದು ವದಂತಿಗಳನ್ನು ಹಬ್ಬಿಸಲಾಗುತ್ತಿದೆ. ಆದರೆ, ಲಸಿಕೆಯಿಂದ ಯಾವುದೇ ಸಮಸ್ಯೆ ಆಗುವುದಿಲ್ಲ ಎಂದು ಭರವಸೆ ನೀಡಿದರು.