ಕರ್ನಾಟಕದಲ್ಲಿ ಈ ಬಾರಿ ಫೆಬ್ರವರಿಗೇ ಬೇಸಿಗೆ ರೀತಿ ಸೆಕೆಯ ಅನುಭವ!

Published : Feb 05, 2025, 06:09 AM ISTUpdated : Feb 05, 2025, 06:13 AM IST
ಕರ್ನಾಟಕದಲ್ಲಿ ಈ ಬಾರಿ ಫೆಬ್ರವರಿಗೇ ಬೇಸಿಗೆ ರೀತಿ ಸೆಕೆಯ ಅನುಭವ!

ಸಾರಾಂಶ

ಫೆಬ್ರವರಿ ತಿಂಗಳಿಂದಲೇ ಬಿಸಿಲಿನ ತಾಪ ಹೆಚ್ಚಾಗು ತ್ತಿದ್ದು, ಈ ಬಾರಿ ರಣಬಿಸಿಲಿನ ಬೇಸಿಗೆ ಇರುವುದು ನಿಚ್ಚಳ ವಾಗಿದೆ. ಜತೆಗೆ, ಉಷ್ಣ ಅಲೆ ಬೀಸುವ ಎಲ್ಲ ಲಕ್ಷಣ ದಟ್ಟವಾಗಿದೆ ಎಂದು ಎಚ್ಚರಿಕೆ ನೀಡಿದ ಹವಾಮಾನ ತಜ್ಞರು 

ಬೆಂಗಳೂರು(ಫೆ.05): ಈವರೆಗೆ ಚಳಿಯಿಂದ ನಡುಗುತ್ತಿದ್ದ ರಾಜ್ಯದ ಜನ ನಿಧಾನವಾಗಿ ಬಿಸಿಲಿನ ತಾಪ ಎದುರಿಸ ತೊಡಗಿದ್ದಾರೆ. ಕೆಲವು ಜಿಲ್ಲೆಗಳಲ್ಲಿ ಗರಿಷ್ಠ ಉಷ್ಣಾಂಶ 30 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದು, ಬಿಸಿಲ ತಾಪಕ್ಕೆ ಜನ ಬೆವೆತು ಸುಸ್ತಾಗುತ್ತಿದ್ದಾರೆ.

ಫೆಬ್ರವರಿ ತಿಂಗಳಿಂದಲೇ ಬಿಸಿಲಿನ ತಾಪ ಹೆಚ್ಚಾಗು ತ್ತಿದ್ದು, ಈ ಬಾರಿ ರಣಬಿಸಿಲಿನ ಬೇಸಿಗೆ ಇರುವುದು ನಿಚ್ಚಳ ವಾಗಿದೆ. ಜತೆಗೆ, ಉಷ್ಣ ಅಲೆ ಬೀಸುವ ಎಲ್ಲ ಲಕ್ಷಣ ದಟ್ಟವಾಗಿದೆ ಎಂದು ಹವಾಮಾನ ತಜ್ಞರು ಎಚ್ಚರಿಕೆ ನೀಡಿದ್ದಾರೆ.    

ರಾಜ್ಯಾದ್ಯಂತ ಚಳಿ ಚಳಿ: ಉತ್ತರ ಭಾರತ ಗಡಗಡ, 15 ಡಿಗ್ರಿಗಿಂತ ಕೆಳಕ್ಕೆ ಕುಸಿದ ತಾಪ

ಮಂಗಳವಾರ ಕಲಬುರಗಿಯಲ್ಲಿ ಅತಿ ಹೆಚ್ಚು 36.8 ಡಿ.ಸೆ. ಗರಿಷ್ಠ ಉಷ್ಣಾಂಶ ದಾಖಲಾಗಿದ್ದು, ಇದು ವಾಡಿಕೆಗಿಂತ 3.6 ಡಿ.ಸೆ. ಅಧಿಕವಾಗಿದೆ. ಅದೇ ರೀತಿ ಬಾಗಲಕೋಟೆಯಲ್ಲಿ 34.8 ಡಿ.ಸೆ. ಗರಿಷ್ಠ ಉಷ್ಣಾಂಶ ದಾಖಲಾಗಿದ್ದು, ವಾಡಿಕೆ ಪ್ರಮಾಣಕ್ಕಿಂತ 4.5 ಡಿ.ಸೆ. ಹೆಚ್ಚಾಗಿದೆ. ಇದೇ ರೀತಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ವಾಡಿಕೆ ಪ್ರಮಾಣಕ್ಕಿಂತ ಹೆಚ್ಚಿನ ಬಿಸಿಲು ದಾಖಲಾಗು ತ್ತಿದೆ. ಗರಿಷ್ಠ ಉಷ್ಣಾಂಶದಲ್ಲಿ 2 ರಿಂದ 4 ಡಿ.ಸೆ. ವರೆಗೆ ಹೆಚ್ಚಾಗಿದೆ. ಅದರಲ್ಲೂ ಉತ್ತರ ಒಳನಾ ಡಿನ ಜಿಲ್ಲೆಗಳಲ್ಲಿ ಭಾರೀ ಬಿಸಿಲು ಹೆಚ್ಚಾಗಿದೆ.

Bengaluru: ರಾಜಧಾನಿಯಲ್ಲಿ ಅತಿಯಾದ ಶೀತಗಾಳಿ, ಮುಂದಿನ 2 ದಿನ ಎಚ್ಚರಿಕೆಯಿಂದಿರಿ ಎಂದ ಐಎಂಡಿ

ಉಷ್ಣ ಅಲೆ ಬೀಸುವ ಸಾಧ್ಯತೆ: 

ಇಷ್ಟು ದಿನ ಬಿಸಿಲು ಕಡಿಮೆ ಇತ್ತು. ಇದೀಗ ಗರಿಷ್ಠ ಉಷ್ಣಾಂಶದಲ್ಲಿ ಒಂದು ಡಿಗ್ರಿ ಸೆಲ್ಸಿಯಸ್ ಹೆಚ್ಚಾದರೂ ಭಾರೀ ಬಿಸಿಲಿನ ಅನುಭವ ಆಗಲಿದೆ. ಪೂರ್ಣ ಪ್ರಮಾಣದಲ್ಲಿ ಬೇಸಿಗೆ ಶುರುವಾಗುತ್ತಿದಂತೆ ಇನ್ನಷ್ಟು ಹೆಚ್ಚಾಗಲಿದೆ. ಇದರ ಪರಿಣಾಮದಿಂದ ರಾಜ್ಯದಲ್ಲಿ ಉಷ್ಣ ಅಲೆ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ತಜ್ಞ ಶ್ರೀನಿವಾಸ್ ರೆಡ್ಡಿ ಮಾಹಿತಿ ನೀಡಿದ್ದಾರೆ.

ಈಗಾಗಲೇ ಭಾರತೀಯ ಹವಾಮಾನ ಇಲಾಖೆ ದೇಶದ ಎಲ್ಲ ರಾಜ್ಯದ ಅಧಿಕಾರಿಗಳಿಗೆ ಉಷ್ಣ ಅಲೆ ಕುರಿತು ಜಾಗೃತಿ, ಕ್ರಿಯಾಯೋಜನೆ ಸಿದ್ದಪಡಿಸಲು ಕಾರ್ಯಾಗಾರ ನಡೆಸುತ್ತಿದೆ. ಭಾರೀಬಿಸಿಲು ಇದೆ ಎಂಬ ಕಾರಣಕ್ಕೆ ರಾಜ್ಯದಲ್ಲಿ ಬರ ಪರಿಸ್ಥಿತಿ ನಿರ್ಮಾಣವಾಗಲಿದೆ ಎಂದು ಹೇಳುವುದಕ್ಕೆ ಸಾಧ್ಯವಿಲ್ಲ. ಬಿಸಿಲಿನ ತಾಪಕ್ಕೆ ಮೋಡ ಕಟ್ಟೆ ಏಕಾಏಕಿ ಮಳೆ ಸುರಿಯುವ ಸಾಧ್ಯತೆಯೂ ಇರಲಿದೆ ಎಂದು ವಿವರಿಸಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಬೆಳ್ತಂಗಡಿ ಬಾಲಕ ಸುಮಂತ್ ಸಾವು ಪ್ರಕರಣಕ್ಕೆ ರೋಚಕ ಟ್ವಿಸ್ಟ್ : ಶವ ಪತ್ತೆಯಾದ ಕೆರೆಯಲ್ಲಿ ಕತ್ತಿ ಟಾರ್ಚ್ ಪತ್ತೆ
ಚಾಮರಾಜ ಕ್ಷೇತ್ರಕ್ಕೆ ಉಪಕಾರ ಮಾಡದಿದ್ದರೂ ಪರವಾಗಿಲ್ಲ, ಉಪದ್ರ ನೀಡುವ ಜನಪ್ರತಿನಿಧಿ ಬೇಡ, ನಾನು ಆಕ್ಷಾಂಕ್ಷಿ:ಪ್ರತಾಪ್ ಸಿಂಹ