ರಾಜ್ಯದಲ್ಲಿ 40 ಡಿಗ್ರಿ ದಾಟಲಿದೆ ತಾಪಮಾನ..! ಇನ್ನೆರಡು ದಿನ ಕೆಲವೆಡೆ ಮಳೆ

By Kannadaprabha NewsFirst Published Mar 19, 2020, 12:55 PM IST
Highlights

ಒಂದೆಡೆ ಕೊರೋನಾ ವೈರಸ್ ಬಿಸಿ ಏರುತ್ತಿದ್ದರೆ ಇನ್ನೊಂದೆಡೆ ತಾಪಮಾನವೂ ಅಪಾಯದ ಮಟ್ಟಕ್ಕೇರಿದೆ. ಹಲವು ಜಿಲ್ಲೆಗಳಲ್ಲಿ ಗರಿಷ್ಠ ಉಷ್ಣಾಂಶ 39 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.

ಬೆಂಗಳೂರು(ಮಾ.19): ಒಂದೆಡೆ ಕೊರೋನಾ ವೈರಸ್ ಬಿಸಿ ಏರುತ್ತಿದ್ದರೆ ಇನ್ನೊಂದೆಡೆ ತಾಪಮಾನವೂ ಅಪಾಯದ ಮಟ್ಟಕ್ಕೇರಿದೆ. ಹಲವು ಜಿಲ್ಲೆಗಳಲ್ಲಿ ಗರಿಷ್ಠ ಉಷ್ಣಾಂಶ 39 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.

ಮಾರ್ಚ್ ಕೊನೆಯ ವಾರದಲ್ಲಿ ರಾಜ್ಯದಲ್ಲಿ ವಿವಿಧ ಜಿಲ್ಲೆಗಳಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟುವ ಸಾಧ್ಯತೆ ಇದೆ. ಒಂದು ವೇಳೆ ಮಳೆ ಬಂದರೆ ಮಾತ್ರ ಉಷ್ಣಾಂಶ ಕಡಿಮೆಯಾಗಲಿದೆ ಎಂದು ಕೆಎಸ್‌ಎನ್‌ಡಿಎಂಸಿ ನಿರ್ದೇಶಕ ಶ್ರೀನಿವಾಸ್ ರೆಡ್ಡಿ ಮಾಹಿತಿ ನೀಡಿದ್ದಾರೆ.

2-3 ದಿನ ರಾಜ್ಯದ ಕೆಲವೆಡೆ ಮಳೆ ಸಾಧ್ಯತೆ:

ಮಹಾರಾಷ್ಟ್ರದಿಂದ ತಮಿಳುನಾಡಿನವರೆಗೆ ಗಾಳಿಯ ಒತ್ತಡ ಕಡಿಮೆ ಆಗಿರುವುದರಿಂದ ತೆಲಂಗಾಣ ಭಾಗದಲ್ಲಿ ಮಳೆಯಾಗುತ್ತಿದ್ದು, ಇದರ ಪರಿಣಾಮ ಮುಂದಿನ ಎರಡು, ಮೂರು ದಿನ ರಾಜ್ಯದ ಕೆಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇರುವ ಬಗ್ಗೆಯೂ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಮಂಗಳವಾರ ಮತ್ತು ಬುಧವಾರ ಉತ್ತರ ಕರ್ನಾಟಕ ಭಾಗದ ಕೆಲವು ಜಿಲ್ಲೆಗಳಲ್ಲಿ ಮಳೆಯಾಗಿದೆ.

ಕೊರೋನಾ ಭಯ ಬೇಡ: ಯಾವುದಕ್ಕೂ ಈ ವಸ್ತುಗಳ ಸ್ಟಾಕ್ ಇರಲಿ.

ಮಾ.19 ಮತ್ತು 20ರಂದು ಉತ್ತರ ಕರ್ನಾಟಕದ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಕಲಬುರಗಿ, ವಿಜಯಪುರ ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ. ಮಾ.20 ಮತ್ತು 21ರಂದು ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು ಸೇರಿದಂತೆ ಇತರೆ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬುಧವಾರ ಬೆಳಗ್ಗೆ 8.30ಕ್ಕೆ ಅಂತ್ಯಗೊಂಡಿರುವ ಹವಾಮಾನ ಇಲಾಖೆ ಅಂಕಿ ಅಂಶದ ಪ್ರಕಾರ ಕಲಬುರಗಿಯಲ್ಲಿ ರಾಜ್ಯದಲ್ಲಿ ಅತಿ ಹೆಚ್ಚು 38.8 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ಮಂಡ್ಯದಲ್ಲಿ ಅತಿ ಕಡಿಮೆ 18.8 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ ಎಂದು ಮಾಹಿತಿ ನೀಡಿದೆ.

click me!