
ಬೆಂಗಳೂರು (ಫೆ.17): ಫೆಬ್ರವರಿ ಆರಂಭದಿಂದಲೇ ರಾಜ್ಯದಲ್ಲಿ ದಿನದಿಂದ ದಿನಕ್ಕೆ ಬಿಸಿಲ ತಾಪ ಹೆಚ್ಚಾಗುತ್ತಿದೆ. ಮಾರ್ಚ್‌ನಿಂದ ಬೇಸಿಗೆ ಆರಂಭಗೊಳ್ಳಲಿದ್ದು, ಈ ಬಾರಿ ಸಾಮಾನ್ಯಕ್ಕಿಂತ ಹೆಚ್ಚಿನ ಬಿಸಿಲು ಹಾಗೂ ಸೆಕೆ ಇರಲಿದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.
ಈಗಾಗಲೇ ರಾಜಧಾನಿ ಬೆಂಗಳೂರು ಸೇರಿ ವಿವಿಧ ಜಿಲ್ಲೆಗಳಲ್ಲಿ ಬಿಸಿಲ ಪ್ರಮಾಣದಲ್ಲಿ ಏರಿಕೆಯಾಗಿದೆ. ಗರಿಷ್ಠ ಉಷ್ಣಾಂಶ ಬೆಂಗಳೂರಿನಲ್ಲಿ 32 ಡಿ.ಸೆ. ದಾಟಿದೆ. ಮುಂದಿನ ದಿನಗಳಲ್ಲಿ ಬಿಸಿಲ ತಾಪ ಇನ್ನಷ್ಟು ಹೆಚ್ಚಾಗಲಿದೆ. ಅದರಲ್ಲೂ ಮಾರ್ಚ್‌ನಿಂದ ಬೇಸಿಗೆ ಆರಂಭಗೊಳ್ಳಲಿದ್ದು ಆಗ ಬಿಸಿಲು ಹಾಗೂ ಗರಿಷ್ಠ ಉಷ್ಣಾಂಶ ಇನ್ನಷ್ಟು ಏರಿಕೆ ದಾಖಲಾಗಲಿದೆ ಎಂದು ಹವಾಮಾನ ಇಲಾಖೆ ತಜ್ಞರು ಮಾಹಿತಿ ನೀಡಿದ್ದಾರೆ.
ಈ ಬಾರಿ ಮಳೆ, ಅದೇ ರೀತಿ ಚಳಿ ಪ್ರಮಾಣವೂ ಹೆಚ್ಚಾಗಿತ್ತು. ಇನ್ನು ಬೇಸಿಗೆಯ ಬಿಸಿಲು, ಸೆಕೆಯೂ ಅಧಿಕವಾಗಿರಲಿದೆ. ಈಗಾಗಲೇ ಕರಾವಳಿ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಗರಿಷ್ಠ ಉಷ್ಣಾಂಶ ಹಾಗೂ ಕನಿಷ್ಠ ಉಷ್ಣಾಂಶ ಹೆಚ್ಚಾಗಿದೆ ಎಂದು ಹವಾಮಾನ ತಜ್ಞ ಶ್ರೀನಿವಾಸ್ ರೆಡ್ಡಿ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: ಬೇಸಗೆ ಶುರುವಾಗಿದೆ, ಎಸಿ ಖರೀದಿಸಬೇಕಾ?, ಎಲ್ ಜಿ, ವೋಲ್ಟಾಸ್ ಎಸಿಗಳ ಮೇಲೆ Flipkart ಭರ್ಜರಿ ಡಿಸ್ಕೌಂಟ್!
ವಾಡಿಕೆಗಿಂತ 4 ಡಿ.ಸೆ. ಹೆಚ್ಚು:
ಕಳೆದ 24 ಗಂಟೆಯಲ್ಲಿ ದಕ್ಷಿಣ ಒಳನಾಡಿನ ಒಂದೆರಡು ಕಡೆ ಕನಿಷ್ಠ ಉಷ್ಣಾಂಶ ವಾಡಿಕೆ ಪ್ರಮಾಣಕ್ಕಿಂತ 2 ರಿಂದ 4 ಡಿ.ಸೆ. ವರೆಗೆ ಕಡಿಮೆ ದಾಖಲಾಗಿದೆ. ದಕ್ಷಿಣ ಒಳನಾಡು, ಕರಾವಳಿಯ ಕೆಲ ಭಾಗದಲ್ಲಿ ಗರಿಷ್ಠ ಉಷ್ಣಾಂಶದಲ್ಲಿ 1 ರಿಂದ 3 ಡಿ.ಸೆ. ವರೆಗೆ ಹೆಚ್ಚಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇದನ್ನೂ ಓದಿ: 60 ರೂ. ತಲುಪಿದ ಎಳನೀರು ದರ: ಪೂರೈಕೆ ಕೊರತೆಯಿಂದ ವ್ಯಾಪಾರಿಗಳು ಕಂಗಾಲು
ಕಲಬುರಗಿಯಲ್ಲಿ 37.6 ಡಿ.ಸೆ. ಅತಿಹೆಚ್ಚಿನ ಗರಿಷ್ಠ ಉಷ್ಣಾಂಶ ದಾಖಲಾದರೆ, ಚಾಮರಾಜನಗರದಲ್ಲಿ 13.4 ಡಿ.ಸೆ. ಅತಿ ಕಡಿಮೆ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಇನ್ನು ಬೆಂಗಳೂರಿನಲ್ಲಿ 32.8 ಡಿ.ಸೆ. ಗರಿಷ್ಠ ಉಷ್ಣಾಂಶ ದಾಖಲಾಗಿದ್ದು, ಇದು ವಾಡಿಕೆಗಿಂತ 1.4 ಡಿ.ಸೆ. ಹೆಚ್ಚಾಗಿದೆ. ಅದೇ ರೀತಿ ದಾವಣಗೆರೆಯಲ್ಲಿ 36.2 ಡಿ.ಸೆ. ಗರಿಷ್ಠ ಉಷ್ಣಾಂಶ ದಾಖಲಾಗಿದ್ದು, ಇದು ವಾಡಿಕೆಗಿಂತ 3.2 ಡಿ.ಸೆ. ಹೆಚ್ಚು. ಕಲಬುರಗಿಯಲ್ಲಿ 37.6 ಡಿ.ಸೆ. ಗರಿಷ್ಠ ಉಷ್ಣಾಂಶ(ವಾಡಿಕೆಗಿಂತ 2.6 ಡಿ.ಸೆ. ಹೆಚ್ಚು) ದಾಖಲಾಗಿದ್ದು, ಬಾಗಲಕೋಟೆಯಲ್ಲಿ 34.3 ಗರಿಷ್ಠ ಉಷ್ಣಾಂಶ(ವಾಡಿಕೆಗಿಂತ 2.2.ಡಿ.ಸೆ. ಹೆಚ್ಚು) ದಾಖಲಾಗಿದ್ದು, ಗದಗದಲ್ಲಿ 35.1 ಗರಿಷ್ಠ ಉಷ್ಣಾಂಶ(ವಾಡಿಕೆಗಿಂತ 2.1ಡಿ.ಸೆ.ಹೆಚ್ಚು) ದಾಖಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ