ತಿರುಪತಿ ಲಡ್ಡು ವಿವಾದ: ಕರ್ನಾಟಕದ ಎಲ್ಲಾ ದೇಗುಲಗಳ ಪ್ರಸಾದ ಪರೀಕ್ಷೆಗೆ ಒಳಪಡಿಸಿ, ಕೇಂದ್ರ ಸಚಿವ ಜೋಶಿ

By Kannadaprabha News  |  First Published Sep 21, 2024, 5:30 AM IST

ತಿರುಪತಿ ಪ್ರಸಾದಕ್ಕೆ ಬಳಸಿರುವ ತುಪ್ಪದಲ್ಲಿ ಜಾನುವಾರುಗಳ ಕೊಬ್ಬು ಮತ್ತು ಮೀನಿನ ಎಣ್ಣೆ ಪತ್ತೆಯಾಗಿರುವ ಸಂಗತಿ ಹಿಂದೂ ಸಮಾಜವನ್ನು ಚಿಂತೆಗೀಡು ಮಾಡಿದೆ. ಆಂಧ್ರಪ್ರದೇಶದಲ್ಲಿ ಮಾಜಿ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರ ಆಡಳಿತ ಈ ರೀತಿ ಹಲವು ಹಿಂದೂ ವಿರೋಧಿ ಕ್ರಮಗಳಿಗೆ ಬೆಂಬಲವಾಗಿ ನಿಂತಿರುವುದು ಅಕ್ಷಮ್ಯ ಅಪರಾಧ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ


ನವದೆಹಲಿ(ಸೆ.21):  ತಿರುಪತಿ ಲಡ್ಡು ವಿವಾದದ ಹಿನ್ನೆಲೆಯಲ್ಲಿ ಕರ್ನಾಟಕದ ಎಲ್ಲಾ ಪವಿತ್ರ ಧಾರ್ಮಿಕ ಕ್ಷೇತ್ರಗಳ ಪ್ರಸಾದವನ್ನೂ ಪರೀಕ್ಷೆಗೊಳಪಡಿಸಲು ರಾಜ್ಯ ಸರ್ಕಾರ ತ್ವರಿತ ಕ್ರಮ ಕೈಗೊಳ್ಳಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಆಗ್ರಹಿಸಿದ್ದಾರೆ.

ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ತಿರುಪತಿ ಪ್ರಸಾದಕ್ಕೆ ಬಳಸುವ ತುಪ್ಪದಲ್ಲಿ ಪ್ರಾಣಿಗಳ ಕೊಬ್ಬು ಮತ್ತು ಮೀನಿನ ಎಣ್ಣೆ ಪತ್ತೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರನ್ನು ಶಿಕ್ಷಿಸಬೇಕು ಎಂದರು.

Tap to resize

Latest Videos

ತಿಮ್ಮಪ್ಪನಿಗೂ ಮೋಸ, 'ನಮೋ ವೆಂಕಟೇಶ..' ಎಂದವರಿಗೆ ನಾನ್‌ವೆಜ್‌ ಪ್ರಸಾದ ತಿನ್ನಿಸಿದ ಜಗನ್‌!

ತಿರುಪತಿ ಪ್ರಸಾದಕ್ಕೆ ಬಳಸಿರುವ ತುಪ್ಪದಲ್ಲಿ ಜಾನುವಾರುಗಳ ಕೊಬ್ಬು ಮತ್ತು ಮೀನಿನ ಎಣ್ಣೆ ಪತ್ತೆಯಾಗಿರುವ ಸಂಗತಿ ಹಿಂದೂ ಸಮಾಜವನ್ನು ಚಿಂತೆಗೀಡು ಮಾಡಿದೆ. ಆಂಧ್ರಪ್ರದೇಶದಲ್ಲಿ ಮಾಜಿ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರ ಆಡಳಿತ ಈ ರೀತಿ ಹಲವು ಹಿಂದೂ ವಿರೋಧಿ ಕ್ರಮಗಳಿಗೆ ಬೆಂಬಲವಾಗಿ ನಿಂತಿರುವುದು ಅಕ್ಷಮ್ಯ ಅಪರಾಧ. ಅಲ್ಲದೆ, ತಿರುಮಲ ತಿರುಪತಿ ಟ್ರಸ್ಟ್‌ನಲ್ಲಿ ಹಿಂದೂಯೇತರರನ್ನೂ ಸದಸ್ಯರನ್ನಾಗಿ ಜಗನ್‌ ನೇಮಿಸಿದ್ದರು. ಆಂಧ್ರಪ್ರದೇಶದಲ್ಲಿ ಮತ್ತೆ ಇಂಥ ಅವಘಡಗಳು ಮರುಕಳಿಸದಂತೆ ನೂತನ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಹೇಳಿದ್ದಾರೆ.

click me!