
ಬೆಂಗಳೂರು (ಡಿ.16) : ಯೋಧರ ಅಪ್ರತಿಮ ತ್ಯಾಗದಿಂದ ದೇಶ ಸುರಕ್ಷಿತವಾಗಿದ್ದು, ಸಾಮಾನ್ಯ ನಾಗರಿಕರು ಶಾಂತಿಯಿಂದ ಇರಲು ಸಾಧ್ಯವಾಗಿದೆ. ದೇಶಕ್ಕಾಗಿ ಮಡಿದ ಸೈನಿಕರ ಕುಟುಂಬದವರಿಗೆ ಎಲ್ಲ ರೀತಿಯ ಸಹಾಯ, ಸಹಕಾರ ನೀಡಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಶುಕ್ರವಾರ ರಾಷ್ಟ್ರೀಯ ಸೈನಿಕ ಸ್ಮಾರಕ ಮ್ಯಾನೇಜ್‌ಮೆಂಟ್ ಟ್ರಸ್ಟ್ ಸಂಸ್ಥೆ ರಾಷ್ಟ್ರೀಯ ಮಿಲಿಟರಿ ಸ್ಮಾರಕದಲ್ಲಿ ಆಯೋಜಿಸಿದ್ದ 1971ರ ಸಮರದಲ್ಲಿ ಪಾಕ್ ವಿರುದ್ಧ ಭಾರತ ಸಾಧಿಸಿದ ಗೆಲುವಿನ ‘ವಿಜಯ ದಿವಸ’ ಸಮಾರಂಭದಲ್ಲಿ ಮಾತನಾಡಿದ ಅವರು, ರಕ್ಷಣಾ ಪಡೆಗಳ ಸೇವೆ ಅತ್ಯಂತ ಶ್ರೇಷ್ಠ ಸೇವೆ. ಅಲ್ಲಿಗೆ ಸೇರುವ ಮುನ್ನವೇ ಎಲ್ಲ ತ್ಯಾಗಕ್ಕೂ ಸಿದ್ಧರಾಗಿರಬೇಕು ಎಂದು ಮನಗಂಡಿರುತ್ತೇವೆ. ದೇಶದ ರಕ್ಷಣೆ ಹಾಗೂ ಜನರಿಗಾಗಿ ಪ್ರಾಣ ತ್ಯಾಗ ಮಾಡುವ ಮೂಲಕ ದೇಶಕ್ಕೆ ವಿಜಯ ಪ್ರಾಪ್ತಿಯಾಗಿದ್ದನ್ನು ನೋಡಲೂ ಅವರಿರುವುದಿಲ್ಲ. ಯಾವುದೇ ಸಮಯದಲ್ಲಿ ಯುದ್ಧಕ್ಕೆ ತಯಾರಿರಲು ಅತ್ಯಂತ ಕಠಿಣ ಪರಿಶ್ರಮ ಹಾಗೂ ಶಿಸ್ತಿನ ಅಭ್ಯಾಸವನ್ನು ರಕ್ಷಣಾ ಪಡೆ ಬಯಸುತ್ತದೆ. ಇಂತಹ ಮಹಾನ್ ತ್ಯಾಗಕ್ಕೆ ಮಾನಸಿಕವಾಗಿಯೂ ಸನ್ನದ್ಧರಾಗಿರಬೇಕು ಎಂದರು.
Vijay Diwas ಹುತಾತ್ಮ ಯೋಧರಿಗೆ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಗೌರವ ನಮನ!
ಆಧುನಿಕ ಕಾಲದಲ್ಲಿ ತಮ್ಮ ಸರಹದ್ದನ್ನು ವಿಸ್ತರಿಸಲು ಕೆಲವು ದೇಶಗಳು ಪ್ರಯತ್ನಿಸುತ್ತವೆ. ಆದರೆ ಈ ಕಾಲದಲ್ಲಿ ಅದಕ್ಕೆ ಅವಕಾಶವಿಲ್ಲದಿದ್ದರೂ ಅಂತಹ ಸಾಹಸವನ್ನು ಮಾಡತ್ತಿವೆ. ಹೀಗಾಗಿ ಹಿಂದಿನ ಅನುಭವದಿಂದ ಸೈನಿಕರು ಗಡಿಯಲ್ಲಿ ಸದಾ ಸನ್ನದ್ಧರಾಗಿದ್ದಾರೆ. ಯಾವುದೇ ದೇಶ ಒಂದಿಂಚು ಒಳಗೆ ಬಂದರೂ ಹಿಮ್ಮೆಟ್ಟಿಸಿ ಸೋಲಿಸುವ ಶಕ್ತಿ ನಮ್ಮ ಸೈನಿಕರಿಗಿದೆ. ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವಕ್ಕಿದೆ ಎಂದರು.
ಗೃಹ ಸಚಿವ ಆರಗ ಜ್ಞಾನೇಂದ್ರ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ನಿರ್ದೇಶಕ ಬ್ರಿಗೇಡಿಯರ್ ಎಂ.ಬಿ. ಶಶಿಧರ್, ಏರ್ ಕಮೋಡರ್ ಎಂ.ಕೆ. ಚಂದ್ರಶೇಖರ್ ಸೇರಿದಂತೆ ಭಾರತೀಯ ರಕ್ಷಣಾ ಪಡೆಯ ಅಧಿಕಾರಿಗಳು, ಸಿಬ್ಬಂದಿ, ನಿವೃತ್ತ ಸೈನಿಕರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
ಕಾರ್ಗಿಲ್ ವಿಜಯ ದಿವಸಕ್ಕೆ 23 ವರ್ಷ, ಎಲ್ಲೂ ಕೇಳಿರದ ಕಾರ್ಗಿಲ್ ರಣಕಲಿಗಳ ಕಥಾನಕ!
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ