8ನೇ ಮಹಡಿಯಿಂದ ಜಿಗಿದು ಬಾಲಕಿ ಆತ್ಮಹತ್ಯೆ; ಇತ್ತ ಮೊಬೈಲ್ ಬಿಟ್ಟು ಚೆನ್ನಾಗಿ ಓದು ಎಂದಿದ್ದಕ್ಕೆ ಬಾಲಕ ಆತ್ಮಹತ್ಯೆ!

By Ravi Janekal  |  First Published Nov 6, 2023, 9:36 PM IST

ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಬಾಲಕಿ ಫ್ಲ್ಯಾಟ್‌ನಿಂದ ಆತ್ಮಹತ್ಯೆ ಮಾಡಿಕೊಂಡ ದುರ್ಘಟನೆ ಉಡುಪಿ ಜಿಲ್ಲೆಯ ಹೆರ್ಗ ಸಮೀಪದ ಹೈ‌ಪಾಯಿಂಟ್ ಹೈಟ್ಸ್ ಹೆಸರಿನ ಫ್ಲ್ಯಾಟ್ ನಲ್ಲಿ ನಡೆದಿದೆ. ಅತ್ತ ಪೋಷಕರು ಮೊಬೈಲ್ ಬಿಟ್ಟು ಚೆನ್ನಾಗಿ ಓದು ಎಂದಿದ್ದಕ್ಕೆ ಮನನೊಂದು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.


ಉಡುಪಿ (ನ.6): ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಬಾಲಕಿ ಫ್ಲ್ಯಾಟ್‌ನಿಂದ ಆತ್ಮಹತ್ಯೆ ಮಾಡಿಕೊಂಡ ದುರ್ಘಟನೆ ಉಡುಪಿ ಜಿಲ್ಲೆಯ ಹೆರ್ಗ ಸಮೀಪದ ಹೈ‌ಪಾಯಿಂಟ್ ಹೈಟ್ಸ್ ಹೆಸರಿನ ಫ್ಲ್ಯಾಟ್ ನಲ್ಲಿ ನಡೆದಿದೆ.

ಪ್ರಜ್ಞಾ(13) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ ಬಾಲಕಿ. ಮಣಿಪಾಲದ ಖಾಸಗಿ ಶಾಲೆಯಲ್ಲಿ 8ನೇ ತರಗತಿ ಓದುತ್ತಿದ್ದ ಪ್ರಜ್ಞಾ. ಬಾಲಕಿ ಇತ್ತೀಚಿನ ಕೆಲ ತಿಂಗಳಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದಳು ಎಂದು ಹೇಳಲಾಗಿದೆ. ಇಂದು ಮುಂಜಾನೆ 6.30 ವೇಳೆಗೆ ಹೈ‌ಪಾಯಿಂಟ್ ಹೈಟ್ಸ್  ಫ್ಲ್ಯಾಟ್ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಬಾಲಕಿ. ಎಂಟನೆ ಮಹಡಿಯಿಂದ ನೆಲಕ್ಕೆ ಅಪ್ಪಳಿಸಿ ತೀವ್ರವಾಗಿ ಗಾಯಗೊಂಡಿದ್ದ ಬಾಲಕಿ. ಪೋಷಕರು ತಕ್ಷಣ ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದ ಬಾಲಕಿ.

Tap to resize

Latest Videos

undefined

ಆರೋಪಿಗೆ ಕಾಲಿಗೆ ಫೈರ್ ಮಾಡಿದ ಪೊಲೀಸರೇ ಆರೈಕೆ ಮಾಡಿ ಮಾನವೀಯತೆ ಮೆರೆದಿದ್ದಾರೆ!

ಮೊಬೈಲ್ ಬಿಟ್ಟು ಚೆನ್ನಾಗಿ ಓದು ಎಂದಿದ್ದಕ್ಕೆ ಬಾಲಕ ಆತ್ಮಹತ್ಯೆ!

ಮೊಬೈಲ್ ಬಿಟ್ಟು ಚೆನ್ನಾಗಿ ಓದು ಎಂದು ಪೋಷಕರು ಬುದ್ಧಿ ಹೇಳಿದ್ದಕ್ಕೆ ಮನನೊಂದು ವಿದ್ಯಾರ್ಥಿಯೋಬ್ಬ ಭಾನುವಾರ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಚಿಟ್ಟಾವಲಹಳ್ಳಿಯಲ್ಲಿ ನಡೆದಿದೆ. ಚಿಟ್ಟಾವಲಹಳ್ಳಿ ಗ್ರಾಮದ ರಾಮಾಂಜಿನಪ್ಪ ಅವರ ಪುತ್ರ 15 ವರ್ಷದ ಲೋಕೇಶ್ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಗೌರಿಬಿದನೂರು ನಗರದ ಎಸ್​ಇಎಸ್ ಸರ್ಕಾರಿ ಶಾಲೆಯಲ್ಲಿ 9ನೇ ತರಗತಿಯಲ್ಲಿ ಓದುತ್ತಿದ್ದ. ಶಾಲೆ ಬಿಟ್ಟ ನಂತರ ಹೆಚ್ಚಾಗಿ ಮೊಬೈಲ್‌ನ ಗೇಮ್‌ಗಳಲ್ಲಿ ಬ್ಯುಸಿಯಾಗಿರುತ್ತಿದ್ದ. ಮೊಬೈಲ್‌ ಬಿಟ್ಟು ಓದುವಂತೆ ಪೋಷಕರು ಸಾಕಷ್ಟು ಬಾರಿ ಬುದ್ಧಿ ಹೇಳಿದ್ದಾರೆ. ಭಾನುವಾರ ಸಹ ಅದೇ ರೀತಿ ಬುದ್ದಿ ಹೇಳಿದಾಗ ಬೇಸರಗೊಂಡ ಲೋಕೇಶ್ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಗೌರಿಬಿದನೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

click me!