
ಬೆಂಗಳೂರು (ಸೆ.9) : ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆಗೆ ಕಾರಣವಾಗಿದ್ದಾರೆ ಎಂದು ಆರೋಪಿಸಿ ಹಿಂದಿನ ಬಿಜೆಪಿ ಸರ್ಕಾರದಲ್ಲಿ ಸಚಿವರಾಗಿದ್ದ ಕೆ.ಎಸ್. ಈಶ್ವರಪ್ಪ ಅವರ ರಾಜಿನಾಮೆಗೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ ನಡೆಸಿದ್ದ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ (ಆಗ ವಿರೋಧಪಕ್ಷದ ನಾಯಕರಾಗಿದ್ದರು) ವಿರುದ್ಧ ದಾಖಲಾಗಿದ್ದ ಪ್ರಕರಣ ಹಾಗೂ ಆ ಕುರಿತ ಅಧೀನ ನ್ಯಾಯಾಲಯದ ವಿಚಾರಣೆಗೆ ಹೈಕೋರ್ಚ್ ಮಧ್ಯಂತರ ತಡೆ ನೀಡಿದೆ.
ಪ್ರಕರಣ ರದ್ದು ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಪೀಠ ಈ ಆದೇಶ ಮಾಡಿದೆ. ಅಲ್ಲದೆ, ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಸರ್ಕಾರಿ ವಕೀಲರಿಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆಯನ್ನು ಸೆ.15ಕ್ಕೆ ಮುಂದೂಡಿತು.
ಬಿಜೆಪಿ-ಜೆಡಿಎಸ್ ಮೈತ್ರಿಗೆ ಕಾಂಗ್ರೆಸ್ ಡೋಂಟ್‌ಕೇರ್ : ಡಿಕೆ ಶಿವಕುಮಾರ
ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆಗೆ ಕಾರಣವಾಗಿದ್ದಾರೆಂದು 2022ರ ಏ.14ರಂದು ಅಂದಿನ ಸಚಿವ ಕೆ.ಎಸ್. ಈಶ್ವರಪ್ಪ ಅವರ ರಾಜಿನಾಮೆಗೆ ಆಗ್ರಹಿಸಿ ಕಾಂಗ್ರೆಸ್ ಪಕ್ಷ ರೇಸ್‌ಕೋರ್ಸ್ ರಸ್ತೆಯ ಕಾಂಗ್ರೆಸ್ ಭವನದಿಂದ ಮುಖ್ಯಮಂತ್ರಿಯವರ ನಿವಾಸಕ್ಕೆ ಮುತ್ತಿಗೆ ಹಾಕಲು ಮೆರವಣಿಗೆ ನಡೆಸಲಾಗಿತ್ತು. ಸಾರ್ವಜನಿಕ ಸಂಚಾರಕ್ಕೆ ಅಡಚಣೆ ಉಂಟು ಮಾಡಿದ ಹಾಗೂ ಕಾನೂನು-ಸುವ್ಯವಸ್ಥೆಗೆ ಧಕ್ಕೆ ತಂದ ಆರೋಪ ಸಂಬಂಧ ಪ್ರತಿಭಟನಾಕಾರರ ವಿರುದ್ಧ ಹೈಗ್ರೌಂಡ್‌್ಸ ಪೊಲೀಸ್ ಠಾಣಾ ಪೊಲೀಸರು ಎಐಆರ್ ದಾಖಲಿಸಿದ್ದರು. ಪ್ರಕರಣದಲ್ಲಿ ಸಿದ್ದರಾಮಯ್ಯ ಅವರು ಪ್ರಮುಖ ಆರೋಪಿಯಾಗಿದ್ದರು.
ನಂತರ ತನಿಖೆ ನಡೆಸಿದ್ದ ಪೊಲೀಸರು 2023ರ ಫೆ.12ರಂದು ಸಿದ್ದರಾಮಯ್ಯ ವಿರುದ್ಧ ದೋಷಾರೋಪ ಪಟ್ಟಿಸಲ್ಲಿಸಿದ್ದರು. ಪ್ರಕರಣವನ್ನು ಜೂ.13ರಂದು 42ನೇ ಎಸಿಎಂಎಂ ನ್ಯಾಯಾಲಯ ವಿಚಾರಣೆಗೆ ಅಂಗೀಕರಿಸಿತ್ತು. ಪ್ರಕರಣ, ಎಫ್‌ಐಆರ್ ಹಾಗೂ ವಿಚಾರಣಾ ನ್ಯಾಯಾಲಯದ ಪ್ರಕ್ರಿಯೆ ರದ್ದು ಕೋರಿ ಸಿಎಂ ಸಿದ್ದರಾಮಯ್ಯ ಹೈಕೋರ್ಚ್‌ಗೆ ಅರ್ಜಿ ಸಲ್ಲಿಸಿದ್ದರು.
ಬಿಜೆಪಿ ಕೋಮುವಾದಿ, ಮತೀಯವಾದಿ ಪಕ್ಷ: ಸ್ವಪಕ್ಷದ ವಿರುದ್ಧವೇ ತಿರುಗಿಬಿದ್ದ ಸಂಸದ ಬಚ್ಚೇಗೌಡ!
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ