ಪದ್ಮನಾಭ ರೆಡ್ಡಿ ಸಹೋದರನ ಪುತ್ರನ ಬೈಕ್‌ಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು!

Published : May 16, 2023, 04:49 AM IST
ಪದ್ಮನಾಭ ರೆಡ್ಡಿ ಸಹೋದರನ ಪುತ್ರನ ಬೈಕ್‌ಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು!

ಸಾರಾಂಶ

ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪದ್ಮನಾಭ ರೆಡ್ಡಿ ಸಹೋದರನ ಪುತ್ರ ಅನಿಲ್‌ ರೆಡ್ಡಿ ಅವರ ಮನೆಯ ಆವರಣದಲ್ಲಿದ್ದ ದ್ವಿಚಕ್ರ ವಾಹನಕ್ಕೆ ಬೆಂಕಿ ಹಂಚಿದ ಆರೋಪದಡಿ ಇಬ್ಬರು ಯುವಕರನ್ನು ಬಾಣಸವಾಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು (ಮೇ.16) : ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪದ್ಮನಾಭ ರೆಡ್ಡಿ ಸಹೋದರನ ಪುತ್ರ ಅನಿಲ್‌ ರೆಡ್ಡಿ ಅವರ ಮನೆಯ ಆವರಣದಲ್ಲಿದ್ದ ದ್ವಿಚಕ್ರ ವಾಹನಕ್ಕೆ ಬೆಂಕಿ ಹಂಚಿದ ಆರೋಪದಡಿ ಇಬ್ಬರು ಯುವಕರನ್ನು ಬಾಣಸವಾಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಕೆ.ಜಿ.ಹಳ್ಳಿ ನಿವಾಸಿಗಳಾದ ಮುಬಾರಕ್‌ ಮತ್ತು ಹಫೀಜ್‌ ಬಂಧಿತರು. ಆರೋಪಿಗಳು ಟ್ಯಾನರಿ ರಸ್ತೆಯ ಕೋಳಿ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದರು. ಮೇ 13ರಂದು ಮಧ್ಯಾಹ್ನ ಕಾಚರಕನಹಳ್ಳಿಯಲ್ಲಿ ಇರುವ ಅನಿಲ್‌ ರೆಡ್ಡಿ ಅವರ ಮನೆಯ ಆವರಣಕ್ಕೆ ನುಗ್ಗಿ ದ್ವಿಚಕ್ರ ವಾಹನಕ್ಕೆ ಬೆಂಕಿ ಇರಿಸಿದ್ದಾರೆ ಎಂದು ಆರೋಪಿಸಿ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿ ಇಬ್ಬರನ್ನೂ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಣ್ಮುಂದೆ ಬೆಂಕಿ ಹಚ್ಚಿಕೊಂಡ ಅಕ್ಕನ ರಕ್ಷಿಸದೇ ವೀಡಿಯೋ ಮಾಡ್ತಾ ನಿಂತ ತಮ್ಮ

ಆರೋಪಿಗಳು ಅಂದು ಕಾಚರಕನಹಳ್ಳಿಯಲ್ಲಿರುವ ಅನಿಲ್‌ ರೆಡ್ಡಿ ಮನೆಯ ಆವರಣಕ್ಕೆ ನುಗ್ಗಿ ದ್ವಿಚಕ್ರ ವಾಹನದಲ್ಲಿ ಪೆಟ್ರೋಲ್‌ ಕದಿಯುತ್ತಿದ್ದರು. ಪ್ಲಾಸ್ಟಿಕ್‌ ಬಾಟಲಿಯಲ್ಲಿ ಪೆಟ್ರೋಲ್‌ ತುಂಬಿಕೊಳ್ಳುತ್ತಿದ್ದರು. ಅದೇ ವೇಳೆ ಆರೋಪಿಯೊಬ್ಬ, ಸಿಗರೆಟ್‌ ಸೇದಲು ಮುಂದಾಗಿದ್ದ. ಇಬ್ಬರನ್ನೂ ಕಂಡ ಸ್ಥಳೀಯರು ಜೋರಾಗಿ ಕೂಗಾಡಿ ಹಿಡಿಯಲು ಯತ್ನಿಸಿದ್ದರು. ಈ ವೇಳೆ ಹೆದರಿದ್ದ ಆರೋಪಿಗಳು, ಪೆಟ್ರೋಲ್‌ ಹಾಗೂ ಸಿಗರೆಟ್‌ ಸ್ಥಳದಲ್ಲೇ ಎಸೆದು ಪರಾರಿಯಾಗಿದ್ದರು. ಇದರಿಂದ ಸಿಗರೆಟ್‌ ಹಾಗೂ ಪೆಟ್ರೋಲ್‌ನಿಂದ ಬೆಂಕಿ ಹೊತ್ತಿಕೊಂಡು ದ್ವಿಚಕ್ರವಾಹನಕ್ಕೆ ಬೆಂಕಿ ಆವರಿಸಿ ಸುಟ್ಟು ಕರಕಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಘಟನೆಯ ಹಿನ್ನೆಲೆಯಲ್ಲಿ ಈ ಇಬ್ಬರೂ ಆರೋಪಿಗಳು ಉದ್ದೇಶಪೂರ್ವಕವಾಗಿ ಮನೆ ಮೇಲೆ ದಾಳಿ ಮಾಡಿ ಬೆಂಕಿ ಹಚ್ಚಿದ್ದಾರೆ. ಇದು ಕಾಂಗ್ರೆಸ್‌ ಕಾರ್ಯಕರ್ತರ ಕೃತ್ಯ ಎಂದು ಬಿಜೆಪಿ ಕಾರ್ಯಕರ್ತರು ಆರೋಪಿಸಿದ್ದನ್ನು ಇಲ್ಲಿ ಸ್ಮರಿಸಬಹುದು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಡಿಜಿಪಿಯಾಗಿ ಅಲೋಕ್‌ ಕುಮಾರ್ ಮುಂಬಡ್ತಿ, ಸರ್ಕಾರದ ವಿರುದ್ಧ 8 ತಿಂಗಳ ಕಾನೂನು ಹೋರಾಟಕ್ಕೆ ಜಯ!
2.84 ಲಕ್ಷ ಹುದ್ದೆ ಖಾಲಿ ಇದ್ರೂ, ಶೇ.9 ಹುದ್ದೆಗಳ ನೇಮಕಾತಿಯನ್ನೇ ಪ್ರಚಾರಕ್ಕೆ ಬಳಸಿಕೊಂಡ ಸರ್ಕಾರ!