
ಬೆಂಗಳೂರು (ಆ.22): ಕ್ಯಾಬ್‌ನಲ್ಲಿ ತೆರಳುತ್ತಿದ್ದ ನಾಗಲ್ಯಾಂಡ್ ಮೂಲದ ಯುವಕ-ಯವತಿಯನ್ನು ಮಾರ್ಗ ಮಧ್ಯೆ ಅಡ್ಡಗಟ್ಟಿಕಿಡಿಗೇಡಿಯೊಬ್ಬ ಹಲ್ಲೆ ನಡೆಸಿರುವ ಘಟನೆ ಬಾಣಸವಾಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಆ.17ರಂದು ರಾತ್ರಿ ರಾಮನಸ್ವಾಮಿ ಪಾಳ್ಯ ರಸ್ತೆಯಲ್ಲಿ ಘಟನೆ ನಡೆದಿದೆ. ಈ ಸಂಬಂಧ ನಾಗಲ್ಯಾಂಡ್ ಮೂಲದ ಯುವತಿ ನೀಡಿದ ದೂರಿನ ಮೇರೆಗೆ ಬಾಣಸವಾಡಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ದುಷ್ಕರ್ಮಿಯ ಬಂಧನಕ್ಕೆ ಬಲೆ ಬೀಸಿದ್ದಾರೆ.
Bengaluru crime: ಉದ್ಯಮಿ ಮನೆಯಿಂದ 1 ಕೇಜಿ ಚಿನ್ನ ಕದ್ದೊಯ್ದ ದುಷ್ಕರ್ಮಿಗಳು!
ಯುವಕ-ಯುವತಿ ಆ.17ರಂದು ರಾತ್ರಿ 11.30ರ ಸುಮಾರಿಗೆ ಊಟ ಮುಗಿಸಿಕೊಂಡು ಕ್ಯಾಬ್‌ನಲ್ಲಿ ಮನೆಯತ್ತ ತೆರಳುತ್ತಿದ್ದರು. ರಾಮಸ್ವಾಮಿಪಾಳ್ಯ ರಸ್ತೆಯಲ್ಲಿ ತೆರಳುವಾಗ ದ್ವಿಚಕ್ರ ವಾಹನದಲ್ಲಿ ಬಂದ ದುಷ್ಕರ್ಮಿ, ಕ್ಯಾಬ್ ಅಡ್ಡಗಟ್ಟಿಮಾರಕಾಸ್ತ್ರ ತೋರಿಸಿ ಸುಲಿಗೆಗೆ ಯತ್ನಿಸಿದ್ದಾನೆ. ಈ ವೇಳೆ ಕ್ಯಾಬ್‌ನ ಹಿಂಬದಿ ಆಸನದಲ್ಲಿ ಕುಳಿತ್ತಿದ್ದ ಯುವಕ-ಯುವತಿಯನ್ನು ಬೆದರಿಸಿ ಹಣ, ಬೆಲೆಬಾಳುವ ವಸ್ತುಗಳು ಇದ್ದರೆ ಕೊಡುವಂತೆ ಕೇಳಿದ್ದಾನೆ. ಈ ವೇಳೆ ಆ ಯುವಕ-ಯುವತಿ ತಪ್ಪಿಸಿಕೊಂಡು ಓಡಲು ಆರಂಭಿಸಿದ್ದಾರೆ.
ಈ ವೇಳೆ ಬೆನ್ನಟ್ಟಿಇಬ್ಬರ ಮೇಲೂ ದುಷ್ಕರ್ಮಿ ಹಲ್ಲೆ ಮಾಡಿದ್ದಾನೆ. ಮನೆಯೊಂದರ ತಡೆಗೋಡೆ ಹಿಂದೆ ಬಚ್ಚಿಟ್ಟುಕೊಂಡರೂ ಅಲ್ಲಿಗೂ ಬಂದು ದುಷ್ಕರ್ಮಿ ಹಲ್ಲೆ ಮಾಡಿದ್ದಾನೆ. ಈ ವೇಳೆ ಯುವತಿ ಚೀರಾಡಿದಾಗ ಮನೆ ಮಾಲಿಕ ಲಾರೆನ್ಸ್ ಎಂಬುವವರು ಎದ್ದು ಹೊರಗೆ ಬಂದು ಹಲ್ಲೆ ಮಾಡದಂತೆ ಬಿಡಿಸಲು ಮುಂದಾಗಿದ್ದಾರೆ. ಈ ವೇಳೆ ಲಾರೆನ್ಸ್ ಮೇಲೂ ಆರೋಪಿ ಹಲ್ಲೆ ನಡೆಸಿ ಪರಾರಿಯಾಗಿದ್ದಾನೆ. ಈ ಸಂಬಂಧ ಬಾಣಸವಾಡಿ ಠಾಣೆಯಲ್ಲಿ ಪ್ರಕರಣದ ದಾಖಲಾಗಿದ್ದು, ದುಷ್ಕರ್ಮಿಯ ಬಂಧನಕ್ಕೆ ಶೋಧಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬೆಂಗಳೂರು-ಮೈಸೂರು ಹೆದ್ದಾರೀಲಿ ಅಪಘಾತ ಬಳಿಕ ಈಗ ದರೋಡೆ ಹಾವಳಿ..!
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ