ಬಾಗಲಕೋಟೆ: ಚುನಾವಣಾ ಕರ್ತವ್ಯಕ್ಕೆ ಹಾಜರಾಗಿದ್ದ ಸಿಬ್ಬಂದಿ ಹೃದಯಾಘಾತದಿಂದ ಸಾವು!

By Govindaraj S  |  First Published May 6, 2024, 11:08 AM IST

ಚುನಾವಣಾ ಕರ್ತವ್ಯಕ್ಕೆ ಹಾಜರಾಗಿದ್ದ ಸಿಬ್ಬಂದಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ಜಿಲ್ಲೆಯ ಮುಧೋಳ ನಗರದಲ್ಲಿ ನಡೆದಿದೆ. ಗೋವಿಂದಪ್ಪ ಸಿದ್ದಾಪುರ ಮೃತಪಟ್ಟವರು. 


ಬಾಗಲಕೋಟೆ (ಮೇ.06): ಚುನಾವಣಾ ಕರ್ತವ್ಯಕ್ಕೆ ಹಾಜರಾಗಿದ್ದ ಸಿಬ್ಬಂದಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ಜಿಲ್ಲೆಯ ಮುಧೋಳ ನಗರದಲ್ಲಿ ನಡೆದಿದೆ. ಗೋವಿಂದಪ್ಪ ಸಿದ್ದಾಪುರ ಮೃತಪಟ್ಟವರು. ಸಿಬ್ಬಂದಿಯು ಚುನಾವಣಾ ಕರ್ತವ್ಯಕ್ಕೆ ತೆರಳಲು ಬಸ್ ಹತ್ತಲು ಬಂದಿದ್ದರು. ಈ ವೇಳೆ ಬಸ್ ನಿಲ್ದಾಣದ ಗೇಟ್ ಬಳಿ ಹೃದಯಾಘಾತದಿಂದ ಕುಸಿದು ಬಿದ್ದು ಸಾವನಪ್ಪಿದ್ದಾರೆ. ಮೃತಪಟ್ಟ ವ್ಯಕ್ತಿ ಜಮಖಂಡಿ ತಾಲ್ಲೂಕಿನ ಬಿದರಿ ಪ್ರಾಥಮಿಕ ಸರಕಾರಿ ಪ್ರಾಥಮಿಕ ಶಾಲೆ ಶಿಕ್ಷಕರಾಗಿದ್ದರು. ಸದ್ಯ ಜಮಖಂಡಿ ತಾಲ್ಲೂಕಿನ ಮೈಗೂರು ಪ್ರಾಥಮಿಕ ಶಾಲೆ ಮತಗಟ್ಟೆಗೆ ಚುನಾವಣಾ ಕರ್ತವ್ಯಕ್ಕೆ ತೆರಳುತ್ತಿದ್ದರು.

ಹೃದಯಾಘಾತದಿಂದ ಕಾನ್ಸ್‌ಟೇಬಲ್ ಸಾವು: ಮೈಸೂರಿನಲ್ಲಿ ಪ್ರಧಾ‌ನಿ ನರೇಂದ್ರ ಮೋದಿಯವರ ಪ್ರಚಾರ ಸಭೆಯ ಬಂದೋಬಸ್ತ್ ಕರ್ತವ್ಯ ಮುಗಿಸಿ ಬಂದು ಮಲಗಿದ್ದ ಪೊಲೀಸ್ ಕಾನ್ಸ್‌ಟೇಬಲ್ ಸಿದ್ದಪ್ಪ (50 ವರ್ಷ) ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಇವರು ಮೂಲತಃ ಅರಸೀಕೆರೆ ತಾಲೂಕಿನ ಗಂಡಸಿ ಹೋಬಳಿಯ ಚನ್ನಪುರ ಗ್ರಾಮದವರು. ಪ್ರಸ್ತುತ ಬೇಲೂರು ಪೊಲೀಸ್ ಠಾಣೆಯಲ್ಲಿ ಕಾನ್ಸ್‌ಟೇಬಲ್ ಆಗಿ ಸೇವೆ ಸಲ್ಲಿಸುತ್ತಿದ್ದರು. ಈ ಹಿಂದೆ ತಾಲೂಕಿನ ಅರೇಹಳ್ಳಿ ಪೊಲೀಸ್ ಠಾಣೆಯಲ್ಲಿ ಎರಡು ಬಾರಿ ಸುಮಾರು 11 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು.

Tap to resize

Latest Videos

undefined

ಪ್ರಜ್ವಲ್‌ ರೇವಣ್ಣ ವಿಡಿಯೋದಲ್ಲಿ 3 ಮಹಿಳಾ ಸರ್ಕಾರಿ ನೌಕರರು: ದೂರು ನೀಡಲು ಎಸ್‌ಐಟಿ ಸೂಚನೆ

ಭಾನುವಾರ ಮೈಸೂರಿನಲ್ಲಿ ಆಯೋಜನೆಯಾಗಿದ್ದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಚುನಾವಣಾ ಪ್ರಚಾರ ಕಾರ್ಯಕ್ರಮದ ನಿಮಿತ್ತ ಮೈಸೂರಿಗೆ ಬಂದೋಬಸ್ತ್ ಕರ್ತವ್ಯಕ್ಕೆ ತೆರಳಿದ್ದ ಸಿದ್ದಪ್ಪ, ಮಧ್ಯರಾತ್ರಿ ಮನೆಗೆ ವಾಪಸ್ಸಾಗಿ ನಿದ್ರೆಗೆ ಜಾರಿದ್ದರು. ಕುಟುಂಬದವರು ಬೆಳಿಗ್ಗೆ ಗಮನಿಸಿದಾಗ ಅವರು ಮೃತಪಟ್ಟಿರುವುದು ತಿಳಿದು ಬಂದಿದೆ.

click me!