Haveri: ಸಂತ ಶಿಶುನಾಳ ಶರೀಫರ ತತ್ವಪದ ಭಾವಾರ್ಥ ಅರಿಯುವ ಥೀಮ್ ಪಾರ್ಕ್ ನಿರ್ಮಾಣ: ಸಿಎಂ ಬೊಮ್ಮಾಯಿ

Published : Mar 02, 2023, 11:29 PM IST
Haveri: ಸಂತ ಶಿಶುನಾಳ ಶರೀಫರ ತತ್ವಪದ ಭಾವಾರ್ಥ ಅರಿಯುವ ಥೀಮ್ ಪಾರ್ಕ್ ನಿರ್ಮಾಣ: ಸಿಎಂ ಬೊಮ್ಮಾಯಿ

ಸಾರಾಂಶ

ಸುಕ್ಷೇತ್ರ ಶಿಶುನಾಳ ಗ್ರಾಮದಲ್ಲಿ ಸಂತ ಶಿಶುನಾಳ ಶರೀಫರ ತತ್ವ ಪದಗಳ ಭಾವಾರ್ಥ ಅರಿಯುವ ಥೀಮ್ ಪಾರ್ಕ್ ನಿರ್ಮಾಣ ಮಾಡಲಾಗುವುದು ಎಂದು‌ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ವರದಿ: ಪವನ್ ಕುಮಾರ್, ಏಷ್ಯಾನೆಟ್ ಸುವರ್ಣ ನ್ಯೂಸ್, ಹಾವೇರಿ

ಹಾವೇರಿ (ಮಾ.02): ಸುಕ್ಷೇತ್ರ ಶಿಶುನಾಳ ಗ್ರಾಮದಲ್ಲಿ ಸಂತ ಶಿಶುನಾಳ ಶರೀಫರ ತತ್ವ ಪದಗಳ ಭಾವಾರ್ಥ ಅರಿಯುವ ಥೀಮ್ ಪಾರ್ಕ್ ನಿರ್ಮಾಣ ಮಾಡಲಾಗುವುದು ಎಂದು‌ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಶಿಶುವಿನಾಳ ಗ್ರಾಮದ ಸಂತ ಶರೀಫ ಶಿವಯೋಗಿ ಮತ್ತು ಗೋವಿಂದಭಟ್ಟರ ಜಾತ್ರಾ ಮಹೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. 

ಸುಕ್ಷೇತ್ರ  ಶಿಶುವಿನಾಳದ ಸಮಗ್ರ ಅಭಿವೃದ್ಧಿಗೆ ಕಾರ್ಯಕ್ರಮ ರೂಪಿಸಲಾಗುತ್ತಿದ್ದು, ಈಗಾಗಲೇ ₹8 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿ ಭರದಿಂದ ಸಾಗಿದೆ ಎಂದರು. ಶರೀಫರ ತತ್ವಪದಗಳ ಭಾವಾರ್ಥದ  ಮೂಜಿಯಂ ಮಾಡುತ್ತಿದ್ದೇವೆ. ಶರೀಫರು ನಡೆದಾಡಿ ಹೋಗಿರುವ ಘಟನೆಗಳನ್ನು ಚಿತ್ರೀಕರಿಸುತ್ತೇವೆ. ಶರೀಪರ ಜೀವನ ಮೌಲ್ಯಗಳನ್ನ  ಸಾಮಾನ್ಯರೂ ತಿಳಿಯುವಂತಾಗ ಬೇಕು ಎಂದರು. ಶರೀಫರ ವಿಚಾರ ಧರ್ಮದ ಚೌಕಟ್ಟು ಮೀರಿದಂತಹದು. 

ಬೊಮ್ಮಾಯಿ ಯಾರೆಂದು ಕೇಳಿದರೆ 40% ಕಮಿಷನ್ ಸರ್ಕಾರದ ಸಿಎಂ ಎನ್ನುತ್ತಿದ್ದಾರೆ: ರಣದೀಪ್ ಸಿಂಗ್ ಸುರ್ಜೇವಾಲ

ಇವರು ವಿಸ್ಮಯವಾಗಿರುವ ಕವಿ, ಅವರನ್ನು ಅರ್ಥಮಾಡಿಕೊಂಡವರಿಗೆ ಅವರ ವಿಚಾರಗಳು ಗೊತ್ತಾಗುವುದು. ಶರೀಫರು ಜೀವನದ ಮೌಲ್ಯ, ಮಾನವೀಯ ಸಂಬಂಧದ ಬಗ್ಗೆ ಹೇಳಿದ್ದಾರೆ ಎಂದರು. ಖ್ಯಾತ ಸಂಗೀತ ನಿರ್ದೇಶಕ, ಗಾಯಕ ರಘು ದೀಕ್ಷಿತ್ ಮಾತನಾಡಿ, ನಮ್ಮ ದೊಡ್ಡ ಹೊಟ್ಟೆಪಾಡು ಶರೀಫರ ಹಾಡುಗಳಿಂದ ನಡೆದಿದೆ. ಅವರ ಭಕ್ತಿಯ ನೆಲದಲ್ಲಿ ಕಾರ್ಯಕ್ರಮ ನೀಡಬೇಕೆಂಬ ಕನಸು ಬಹಳ ವರ್ಷಗಳಿಂದ ಇತ್ತು. ಸಿಎಂ ಬಸವರಾಜ ಬೊಮ್ಮಾಯಿ ಅವರ ಕೃಪಕಟಾಕ್ಷತೆಯಿಂದ ಇಲ್ಲಿಗೆ ಬಂದಿದ್ದೇನೆ. 

ವೈದ್ಯರು ಎರಡ್ಮೂರು ತಿಂಗಳು ಹಾಡದಂತೆ ಸೂಚಿದ್ದಾರೆ. ಆದರೆ, ಅಜ್ಜನ ಸನ್ನಿಧಿಯಲ್ಲಿ ‌ಹಾಡುತ್ತಿದ್ದೆನೆ. ಅಜ್ಜನೇ ಕಾಪಾಡುತ್ತಾನೆ ಎಂಬ ನಂಬಿಕೆ ಇದೆ ಎಂದರು. 'ಸೋರುತಿಹದು ಮನೆಯ ಮಾಳಿಗೆ' ಎಂಬ ಹಾಡನ್ನು 32 ದೇಶಗಳಲ್ಲಿ ಹಾಡಿದ್ದೇನೆ ಎಂದರು. ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಅಜ್ಜಂಫೀರ್ ಖಾದ್ರಿ, ವಾಯುವ್ಯ ರಸ್ತೆ ಸಾರಿಗೆ ಸಂಸ್ಥೆಯ ಉಪಾಧ್ಯಕ್ಷ ಶಿವಾನಂದ ಮ್ಯಾಗೇರಿ, ಶ್ರೀಕಾಂತ ದುಂಡಿಗೌಡರು, ಖ್ಯಾತ ಸಂಗೀತಗಾರ ರಘು ದೀಕ್ಷಿತ್ ಹಾಗೂ ಗ್ರಾಮದ ಹಿರಿಯರು ಇದ್ದರು.

ನಿಮ್ಮ ಕಾರ್ಯಕ್ರಮ ಹೇಳಿ, ನಮ್ಮನ್ನು ಟೀಕಿಸುವುದು ಬೇಡ: ಎಚ್‌.ಡಿ.ಕುಮಾರಸ್ವಾಮಿ

ರಸದೌತಣ: ಖ್ಯಾತ ಸಂಗೀತ ನಿರ್ದೇಶಕ, ಗಾಯಕ ರಘು ದೀಕ್ಷಿತ್ ಅವರು ಸೋರುತಿಹದು ಮನೆಯ ಮಾಳಿಗೆ, ಕಂಡೆ, ಕಂಡೆ ಪರಶಿವನ, ಕೊಡಗನ ಕೋಳಿ ನುಂಗಿತ್ತಾ .ಲೋಕದ ಕಾಳಜಿ ಸೇರಿದಂತೆ ಅನೇಕ ಶರೀಫರ ತತ್ವಪದಗಳನ್ನು ಹಾಡುವ ಮೂಲಕ ನೆರೆದಿದ್ದ ಜನರಿಗೆ ರಸದೌತಣ ನೀಡಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ದಶದಿಕ್ಕುಗಳಿಂದ ಕರ್ನಾಟಕಕ್ಕೆ ಡ್ರಗ್ಸ್‌ ಗಂಡಾಂತರ
Karnataka News Live: ಮಧುಗಿರಿ - ಕದ್ದ ಎಟಿಎಂ ಭಾರ ಇದೆ ಎಂದು ರಸ್ತೆಯಲ್ಲೇ ಬಿಟ್ಟು ಹೋದರು