
ಬೆಂಗಳೂರು (ನ.29) : ಕ್ರಿಮಿನಲ್ ಪ್ರಕರಣವೊಂದರಲ್ಲಿ ಜಾಮೀನು ಪಡೆದಿರುವ ಆರೋಪಿಯ ಸಂಬಂಧಿಕರು, ಮತ್ತೊಬ್ಬ ಆರೋಪಿಗೆ ತನಿಖೆಗೆ ಸಹಕರಿಸದಂತೆ ಬೆದರಿಕೆ ಹಾಕಿದಲ್ಲಿ, ಮೊದಲ ಆರೋಪಿಗೆ ಮಂಜೂರಾಗಿದ್ದ ಜಾಮೀನನ್ನು ರದ್ದು ಮಾಡುವ ಅಧಿಕಾರವಿಲ್ಲ ಎಂದುಹೈಕೋರ್ಟ್ ಸ್ಪಷ್ಟಪಡಿಸಿದೆ.
ಮಾದಕ ದ್ರವ್ಯ ಮತ್ತು ಅಮಲು ಪದಾರ್ಥಗಳ ನಿಯಂತ್ರಣ ಕಾಯ್ದೆಯಡಿ ಬಂಧನಕ್ಕೆ ಒಳಗಾಗಿ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ ರಾಯಚೂರು ಮೂಲದ ಅಬ್ದುಲ್ ಖಾದಿರ್ ಗೌಸ್ ಪೀರ್‌ಗೆ ಮಂಜೂರು ಮಾಡಲಾಗಿರುವ ಜಾಮೀನು ರದ್ದುಪಡಿಸುವಂತೆ ಕೋರಿ ಮಾದಕ ವಸ್ತುಗಳ ನಿಯಂತ್ರಣ ಕಚೇರಿಯ ಗುಪ್ತಚರ ಅಧಿಕಾರಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.
ಜಡ್ಜ್ ನೇಮಕ ವಿಳಂಬ: ಸುಪ್ರೀಂ ಗರಂ; ಕೇಂದ್ರದಿಂದ ಮತ್ತೆ 20 ನ್ಯಾಯಮೂರ್ತಿಗಳ ಹೆಸರು ವಾಪಸ್..!
ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಜಿ. ಉಮಾ ಅವರ ಪೀಠ, ಪ್ರಕರಣದ ಮೊದಲನೆ ಆರೋಪಿ ಅಬ್ದುಲ್ ಖಾದಿರ್ ಗೌಸ್ ಪೀರ್‌ಗೆ ಜಾಮೀನು ನೀಡುವ ವೇಳೆ ಪ್ರಾಸಿಕ್ಯೂಷನ್ ಸಾಕ್ಷಿಗಳ ಮೇಲೆ ಪ್ರಭಾವ ಬೀರಬಾರದು ಮತ್ತು ಸಾಕ್ಷಿಗಳಿಗೆ ಬೆದರಿಕೆ ಹಾಕಬಾರದು ಎಂದು ವಿಧಿಸಿರುವ ಷರತ್ತನ್ನು ಉಲ್ಲಂಘಿಸಿಲ್ಲ. ಆದರೆ ಆತನ ಸಹೋದರ ರಿಯಾಜ್ ಎಂಬಾತ ಪ್ರಕರಣದ ಎರಡನೇ ಆರೋಪಿ ಮತ್ತು ಆತನ ಪತ್ನಿಯನ್ನು ಹಲವು ಸಂಪರ್ಕಿಸಿ ಎನ್‌ಸಿಬಿ ತನಿಖಾಧಿಕಾರಿಯ ಮುಂದೆ ಹಾಜರಾಗುವುದನ್ನು ತಪ್ಪಿಸುವ ಮೂಲಕ ವಿಚಾರಣೆಗೆ ಸಹಕರಿಸದಂತೆ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ. ಆದರೆ ಇದು ಆರೋಪಿ ಗೌಸ್‌ಗೆ ನೀಡಿರುವ ಜಾಮೀನನ್ನು ರದ್ದುಪಡಿಸಲು ಸ್ವಯಂಚಾಲಿತವಾಗಿ ಅವಕಾಶ ಮಾಡಿಕೊಡುವುದಿಲ್ಲ ಎಂದು ಅಭಿಪ್ರಾಯಪಟ್ಟಿದೆ.
ಇನ್ನು ಎರಡನೇ ಆರೋಪಿಗೆ ಗೌಸ್ ಸಹೋದರ ಬೆದರಿಕೆ ಹಾಕಿದ್ದಾನೆ ಎಂದಾದರೆ ಆತನ ವಿರುದ್ಧ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದ ನ್ಯಾಯಪೀಠ ಅರ್ಜಿ ವಜಾಗೊಳಿಸಿ ಆದೇಶಿಸಿದೆ.
ಗೌಸ್ ಅವರ ರಾಯಚೂರಿನ ಬಟ್ಟೆಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬರಿಗೆ ಅಂಚೆ ಮೂಲಕ ವಿದೇಶದಿಂದ ಮಾದಕ ದ್ರವ್ಯ ರವಾನೆಯಾಗಿತ್ತು. ಬೆಂಗಳೂರಿನ ಚಾಮರಾಜಪೇಟೆಯ ವಿದೇಶಿ ಅಂಚೆ ಕಚೇರಿಗೆ ಭೇಟಿ ನೀಡಿದ್ದ ಎನ್‌ಸಿಬಿ ಅಧಿಕಾರಿಗಳು, ಸುಮಾರು 1.5 ಕೆ.ಜಿಯಷ್ಟುನಿಷೇಧಿತ ಎಂಡಿಎಂಎ(ಮಾದಕ ದ್ರವ್ಯ) ಅನ್ನು ವಶಪಡಿಸಿಕೊಂಡಿದ್ದರು. ಬಳಿಕ ರಾಯಚೂರಿಗೆ ಹೋಗಿ ಗೌಸ್ ಅನ್ನು ಬಂಧಿಸಿದ್ದರು. ಅದೇ ಪ್ರಕರಣದಲ್ಲಿ ಅವರ ಬಳಿ ಕೆಲಸ ಮಾಡುತಿದ್ದ ವ್ಯಕ್ತಿಯನ್ನು ಎರಡನೇ ಆರೋಪಿಯನ್ನಾಗಿ ಮಾಡಿದ್ದರು.
ಎಸ್ಸಿ-ಎಸ್ಟಿ ಗುತ್ತಿಗೆ ಮೀಸಲು ಗೊಂದಲ: ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್
2021ರ ಅ.4ರಂದು ಗೌಸ್‌ಗೆ ಹೈಕೋರ್ಟ್ ಜಾಮೀನು ನೀಡಿತ್ತು. ಎರಡನೇ ಆರೋಪಿಯನ್ನು 2021ರ ನ.5ರಂದು ಎನ್‌ಸಿಬಿ ಅಧಿಕಾರಿಗಳು ಬಂಧಿಸಿದ್ದರು. ಗೌಸ್ ಸಹೋದರ ರಿಯಾಜ್ ನನ್ನ ಮತ್ತು ನನ್ನ ಪತ್ನಿಯನ್ನು ಹಲವು ಬಾರಿ ಸಂಪರ್ಕಿಸಿ ಎಚ್‌ಸಿಬಿ ವಿಚಾರಣೆಗೆ ಹಾಜರಾಗುವುದನ್ನು ತಪ್ಪಿಸುವಂತೆ ಬೆದರಿಕೆ ಹಾಕಿದ್ದಾರೆ ಎಂದು ಎರಡನೇ ಆರೋಪಿ ವಿಚಾರಣೆ ಹೇಳಿಕೆ ನೀಡಿದ್ದ. ಅದನ್ನು ಆಧರಿಸಿ ಗೌಸ್‌ಗೆ ನೀಡಲಾಗಿರುವ ಜಾಮೀನು ರದ್ದುಪಡಿಸುವಂತೆ ಕೋರಿ ಎನ್‌ಸಿಬಿ ಗುಪ್ತಚರ ಅಧಿಕಾರಿಗಳು ಹೈಕೋರ್ಚ್‌ಗೆ ಅರ್ಜಿ ಸಲ್ಲಿಸಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ