ಕಳಪೆ ಗೊಬ್ಬರದಿಂದ ಬೆಳೆ ನಾಶವಾದರೆ ಪರಿಹಾರವಿಲ್ಲ: ಕೃಷಿ ಸಚಿವ ಚಲುವರಾಯಸ್ವಾಮಿ

By Kannadaprabha NewsFirst Published Feb 25, 2024, 7:19 PM IST
Highlights

ಕಳಪೆ ಮತ್ತು ನಕಲಿ ಗೊಬ್ಬರ ಬಳಸಿ ಬೆಳೆ ಬೆಳೆದು ನಷ್ಟಕ್ಕೆ ಒಳಗಾದ ರೈತರಿಗೆ ಸರ್ಕಾರದಿಂದ ಯಾವುದೇ ರೀತಿ ಪರಿಹಾರ ನೀಡಲು ಅವಕಾಶ ಇಲ್ಲ ಎಂದು ಕೃಷಿ ಸಚಿವ ಎನ್‌.ಚಲುವರಾಯಸ್ವಾಮಿ ಸ್ಪಷ್ಟನೆ ನೀಡಿದ್ದಾರೆ.

ಬೆಂಗಳೂರು (ಫೆ.25): ಕಳಪೆ ಮತ್ತು ನಕಲಿ ಗೊಬ್ಬರ ಬಳಸಿ ಬೆಳೆ ಬೆಳೆದು ನಷ್ಟಕ್ಕೆ ಒಳಗಾದ ರೈತರಿಗೆ ಸರ್ಕಾರದಿಂದ ಯಾವುದೇ ರೀತಿ ಪರಿಹಾರ ನೀಡಲು ಅವಕಾಶ ಇಲ್ಲ ಎಂದು ಕೃಷಿ ಸಚಿವ ಎನ್‌.ಚಲುವರಾಯಸ್ವಾಮಿ ಸ್ಪಷ್ಟನೆ ನೀಡಿದ್ದಾರೆ. ಕಾಂಗ್ರೆಸ್‌ನ ಮಧು ಜಿ. ಮಾದೇಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕಳೆದ ಮೂರು ವರ್ಷಗಳಲ್ಲಿ ರಾಜ್ಯದ ಸೊಸೈಟಿಗಳಲ್ಲಿ ನಕಲಿ ರಸಗೊಬ್ಬರ ಮಾರಾಟಕ್ಕೆ ಸಂಬಂಧಪಟ್ಟಂತೆ ಐದು ಪ್ರಕರಣ ಹಾಗೂ ನಕಲಿ ಗೊಬ್ಬರ ಮಾರಾಟಕ್ಕೆ ಸಂಬಂಧಪಟ್ಟಂತೆ 15 ಪ್ರಕರಣಗಳು ದಾಖಲಾಗಿವೆ. 

ರಾಜ್ಯದಲ್ಲಿ ನಕಲಿ ರಸಗೊಬ್ಬರ ಮಾರಾಟ ಮಾಡುತ್ತಿದ್ದ ಹಾಗೂ ಅದರಲ್ಲಿ ಭಾಗಿಯಾದ ವ್ಯಕ್ತಿಗಳ ವಿರುದ್ಧ ಪೊಲೀಸ್‌ ಠಾಣೆಗಳಲ್ಲಿ ಎಫ್‌ಐಆರ್‌ ದಾಖಲಿಸಲಾಗಿದೆ. ಈ ಪೈಕಿ ಕೆಲವು ಪ್ರಕರಣಗಳು ಅಂತರರಾಜ್ಯ ವ್ಯಾಪ್ತಿಗೆ ಒಳಪಟ್ಟಿದ್ದು, ಹೆಚ್ಚಿನ ಮಾಹಿತಿ ಸಂಗ್ರಹಿಸಲು 9 ಪ್ರಕರಣಗಳನ್ನು ತನಿಖೆಗೆ ವಹಿಸಲಾಗಿದೆ ಎಂದು ತಿಳಿಸಿದರು.

ಅಭಿವೃದ್ಧಿಯಲ್ಲಿ ಎಂದೂ ರಾಜಕೀಯ ಮಾಡುವುದಿಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಮಂಡ್ಯ ಲೋಕಸಭಾ ಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿ ಅಂತಿಮ: ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಯಾರು ಎಂಬುದು ಅಂತಿಮವಾಗಿದೆ. ವರಿಷ್ಠರು ಘೋಷಣೆ ಮಾಡಬೇಕು ಅಷ್ಟೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್ .ಚಲುವರಾಯಸ್ವಾಮಿ ತಿಳಿಸಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಭ್ಯರ್ಥಿ ಯಾರು ಎಂದು ನನಗೆ ಘೋಷಣೆ ಮಾಡುವ ಅಧಿಕಾರ ಇಲ್ಲ. ಇದನ್ನು ವರಿಷ್ಠರು ಮಾಡುತ್ತಾರೆ. 

ಜಿಲ್ಲೆಯ ಶಾಸಕರು, ಸಚಿವರು ಅಭ್ಯರ್ಥಿಯನ್ನು ಭೇಟಿ ಮಾಡಿ ಪರಿಚಯ ಮಾಡಿಕೊಳ್ಳುವುದು ಸಾಮಾನ್ಯ ಎಂದು ಪರೋಕ್ಷವಾಗಿ (ವೆಂಕಟರಮಣೇಗೌಡ) ಸ್ಟಾರ್ ಚಂದ್ರು ಅಭ್ಯರ್ಥಿ ಎಂಬುದನ್ನು ಒಪ್ಪಿಕೊಂಡರು. ಮೈಸೂರು ಭಾಗದಲ್ಲಿ ಹೆಚ್ಚು ಸ್ಥಾನ ಗೆಲುವಿಗೆ ಗಂಭೀರ ಚರ್ಚೆ ನಡೆದಿದೆ. ಒಕ್ಕಲಿಗರಿಗೆ ಹೆಚ್ಚಿನ ಆದ್ಯತೆಯನ್ನು ಕಾಂಗ್ರೆಸ್ ಪಕ್ಷ ನೀಡಿದೆ. ಅದಕ್ಕೆ ನಮ್ಮ ಪಕ್ಷಕ್ಕೆ ಒಕ್ಕಲಿಗರು ಹೆಚ್ಚು ಸಹಾಯ ಮಾಡಬೇಕು. ಈ ಬಗ್ಗೆ ಸಭೆಯಲ್ಲಿ ಎಲ್ಲಾ ಕಾಂಗ್ರೆಸ್ ಶಾಸಕರು, ಮಾಜಿ ಶಾಸಕರು, ಮುಖಂಡರು ಚರ್ಚೆ ನಡೆಸಿದ್ದೇವೆ ಎಂದರು.

ಸಿಎಂ ಯಾರಾದರೂ ಆಗಲಿ, ಕ್ಷೇತ್ರದ ಅಭಿವೃದ್ಧಿ ಮುಖ್ಯ: ಶಾಸಕ ಕೊತ್ತೂರು ಮಂಜುನಾಥ್

ಸಂಸದರು ಬುದ್ಧಿವಂತರು: ಸಂಸದೆ ಸುಮಲತಾ ಬಹಳ ಬುದ್ಧಿವಂತರು. ಅವರು ಏನೇ ಹೇಳಿಕೆ ಕೊಡಲಿ ಅದಕ್ಕೆ ನನಗೆ ಬೇಜಾರಿಲ್ಲ. ಅವರಿಗೆ ಒಳ್ಳೆಯದಾಗಲಿ. ಯಾರು ಸಂಸದರು ಆಗಬೇಕು ಎಂಬುದನ್ನು 8 ವಿಧಾನಸಭಾ ಕ್ಷೇತ್ರದ ಜನ ತೀರ್ಮಾನ ಮಾಡುತ್ತಾರೆ ಎಂದು ತಿರುಗೇಟು ನೀಡಿದರು. ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ 16 ರಿಂದ 17 ಲಕ್ಷ ಮತದಾರರು ಇದ್ದಾರೆ. ಅವರು ಪಾರ್ಲಿಮೆಂಟ್ ಗೆ ಯಾರು ಸ್ಟ್ರಾಂಗ್ ಅಭ್ಯರ್ಥಿ ಎಂಬುದನ್ನು ತೀರ್ಮಾನಿಸುತ್ತಾರೆ. ಅವರು ಹಣೆಬರಹ ಬರೆಯುತ್ತಾರೆ. ಏಪ್ರಿಲ್ - ಮೇ ವೇಳೆಗೆ ನಿಮಗೆ ತಿಳಿಯಲಿದೆ ಎಂದು ಉತ್ತರಿಸಿದರು. ಜೆಡಿಎಸ್ - ಬಿಜೆಪಿ ಯಾರೇ ಅಭ್ಯರ್ಥಿಯಾದರೂ ನಮಗೆ ಬೇಕಿಲ್ಲ. ಮಂಡ್ಯ ಕ್ಷೇತ್ರ ಬಿಜೆಪಿ ಅಥವಾ ಜೆಡಿಎಸ್ ಗೆ ಆಗುತ್ತದೋ ಅದು ನಮಗೆ ಬೇಕಿಲ್ಲ. ಅದು ಮೈತ್ರಿ ನಾಯಕರಿಗೆ ಬಿಟ್ಟಿದ್ದು ಎಂದು ತಿಳಿಸಿದರು.

click me!