
ಶಿರಸಿ(ಡಿ.2): ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನ ಖಾಲಿ ಇಲ್ಲ. ಆ ವಿಷಯಕ್ಕೆ ಪೂರ್ಣವಿರಾಮ ಇಡಲಾಗಿದ್ದು, ಸಿಎಂ ಬದಲಾವಣೆ ಕುರಿತು ಪಕ್ಷದ ಹೈಕಮಾಂಡ್ ನಿರ್ಧರಿಸುತ್ತದೆ ಎಂದು ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ, ಶಾಸಕ ಆರ್.ವಿ .ದೇಶಪಾಂಡೆ ತಿಳಿಸಿದ್ದಾರೆ.
ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಸಿಎಂ ಸಿದ್ದರಾಮಯ್ಯ ಭೇಟಿಯಾಗಿ ಉಪಹಾರ ಸೇವನೆ ಜತೆ ಹೊಟ್ಟೆ ತುಂಬಾ ಮಾತುಕತೆ ಮಾಡಿದ್ದಾರೆ. ಸಿಎಂ ಬದಲಾವಣೆ ವಿಷಯಕ್ಕೆ ಪೂರ್ಣವಿರಾಮ ಇಡಲಾಗಿದೆ ಎಂದರು.
ರಾಜ್ಯದಲ್ಲಿ ಅಭಿವೃದ್ಧಿಯಾಗುತ್ತಿಲ್ಲ ಎಂಬುದು ಸತ್ಯಕ್ಕೆ ದೂರವಾದ ಸಂಗತಿ. ಅಭಿವೃದ್ಧಿಯಾಗುತ್ತಿದ್ದು, ಜನರ ಅಪೇಕ್ಷೆ ಇನ್ನೂ ಹೆಚ್ಚಿರಬಹುದು. ಎಲ್ಲ ಶಾಸಕರಿಗೂ ಅನುದಾನ ನೀಡಲಾಗಿದ್ದು, ಸಿದ್ದರಾಮಯ್ಯ ನಾಯಕತ್ವದಲ್ಲಿ 5 ಗ್ಯಾರಂಟಿ ಯೋಜನೆಗಳನ್ನು ಕಾಂಗ್ರೆಸ್ ಸರ್ಕಾರ ನೀಡುವ ಪ್ರಯತ್ನ ಮಾಡಿದೆ. ಬೆಳಗಾವಿಯಲ್ಲಿ ನಡೆಯುವ ಅಧಿವೇಶನದಲ್ಲಿ ಉತ್ತರ ಕರ್ನಾಟಕ ಹಾಗೂ ಕರಾವಳಿ ಭಾಗದ ಅಭಿವೃದ್ಧಿ ಯೋಜನೆ ಕುರಿತು ಚರ್ಚೆಗೆ ಪ್ರಾಧಾನ್ಯತೆ ನೀಡಬೇಕಾಗುತ್ತದೆ ಎಂದರು.
ಕೇಂದ್ರ ಸರ್ಕಾರವು ಇ.ಡಿ. ಸಂಸ್ಥೆಯನ್ನು ದುರ್ಬಳಕೆ ಮಾಡಿಕೊಂಡು ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ವಿರುದ್ಧ ನ್ಯಾಶನಲ್ ಹೆರಾಲ್ಡ್ ಕೇಸ್‌ನಲ್ಲಿ ಸೇಡಿನ ರಾಜಕಾರಣಕ್ಕೆ ಎಫ್ಐಆರ್ ದಾಖಲು ಮಾಡಿಸಿದೆ. ಸುಖಾಸುಮ್ಮನೆ ₹2 ಸಾವಿರ ಕೋಟಿ ರೂ. ಭ್ರಷ್ಟಾಚಾರವಾಗಿದೆ ಎಂದು ಕೆಳಮಟ್ಟದ ಆಪಾದನೆ ಮಾಡುತ್ತಿದ್ದಾರೆ. ಇದನ್ನು ನಾನು ಖಂಡಿಸುತ್ತೇನೆ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ