
ಬೆಂಗಳೂರು (ಫೆ.27): ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬಿಜೆಪಿ ಸೇರುವ ಕುರಿತು ಬಿಜೆಪಿಯಲ್ಲಿ ಯಾವುದೇ ಚರ್ಚೆ ಇಲ್ಲ. ರಾಜಕಾರಣದಲ್ಲಿ ಬೆಳವಣಿಗೆ ಕ್ಷೀಪ್ರವೇ ಆಗುವುದು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ್ ಬೊಮ್ಮಾಯಿ ಹೇಳಿದರು.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಹಾ ಶಿವರಾತ್ರಿ ನಿಮಿತ್ತ ಈಶಾ ಫೌಂಡೇಶನ್ ಸದ್ಗುರು ಜಗ್ಗಿ ವಾಸುದೇವ ಅವರು ಏರ್ಪಡಿಸಿದ್ದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪಾಲ್ಗೊಂಡಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಸದ್ಗುರು ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಹಿಂದೆ ಭಾಗವಹಿಸಿದ್ದರು. ಅಮಿತ್ ಶಾ ಅವರು ಭಾಗಿಯಾಗಿದ್ದರು. ನಾವೂ ಸಹ ಸಾಕಷ್ಟು ಸಲ ಭಾಗಿಯಾಗಿವಹಿಸಿದ್ದೇವು. ಇದಕ್ಕೆ ರಾಜಕೀಯ ಅರ್ಥ ಕಲ್ಪಿಸುವ ಅಗತ್ಯ ಇಲ್ಲ ಎಂದು ತಿಳಿಸಿದರು.
ಡಿ.ಕೆ. ಶಿವಕುಮಾರ್ ಅವರು ಶಿವರಾತ್ರಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಕ್ಕೆ ಕಾಂಗ್ರೆಸ್‌ನಲ್ಲಿ ಬೇರೆ ಬೇರೆ ವ್ಯಾಖ್ಯಾನ ನಡೆಯತ್ತಿರುವುದು ಅವರ ಪಕ್ಷದ ವಿಚಾರವಾಗಿದೆ. ಇದು ಕಾಂಗ್ರೆಸ್ ಪಕ್ಷದ ಅಪನಂಬಿಕೆ ಮತ್ತು ಗೊಂದಲದ ಸಂಕೇತ. ಅವರಿಗೆ ಅಪನಂಬಿಕೆ ಇರುವುದರಿಂದಲೇ, ಅದಕ್ಕೆ ಅಪಸ್ವರ ಎದ್ದಿದೆ. ಡಿ.ಕೆ.ಶಿವಕುಮಾರ್ ಬಿಜೆಪಿ ಸೇರುವ ಕುರಿತು ಯಾವುದೇ ಚರ್ಚೆ ಇಲ್ಲ. ರಾಜಕಾರಣದಲ್ಲಿ ಬೆಳವಣಿಗೆ ಕ್ಷೀಪ್ರವೇ ಆಗುವುದು, ಓವರ್ ನೈಟ್ ಆಗುತ್ತದೆ. ಪ್ರಶ್ನೆ ಅದಲ್ಲ. ಆದರೆ, ನಮ್ಮ ತಿಳುವಳಿಕೆ ಯಲ್ಲಿ ಆ ರೀತಿ ಯಾವುದೇ ಸ್ಥಿತಿ ಇಲ್ಲ ಎಂದು ಮಾಹಿತಿ ನೀಡಿದರು.
ಇದನ್ನೂ ಓದಿ: ನಾನು ಹಿಂದೂ ಆಗಿ ಹುಟ್ಟಿದ್ದೇನೆ, ಹಿಂದೂವಾಗಿಯೇ ಸಾಯುತ್ತೇನೆ; ಶಿವಭಕ್ತ ಡಿ.ಕೆ. ಶಿವಕುಮಾರ್!
ಬಿಜೆಪಿ ರಾಜ್ಯಾಧ್ಯಕ್ಷರ ಸ್ಥಾನದ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ರಾಜ್ಯಾಧ್ಯಕ್ಷ ಸ್ಥಾನಕ್ಕೆ ನನ್ನ ಹೆಸರನ್ನು ತೇಲಿಬಿಡುತ್ತೀರಿ ಎಲ್ಲರೂ ಒಟ್ಟಿಗೆ ಶಕ್ತಿಯಾಗಿ ಮತ್ತೊಮ್ಮೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆ ಮಾಡಬೇಕು. ಎಲ್ಲರನ್ನೂ ಒಳಗೊಂಡಂತಹ ಸಂಘಟನೆ ಮಾಡುವ ಉದ್ದೇಶ ಇದೆ ಎಂದು ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ