ಜಿಲ್ಲೆಯ ಕನಕಗಿರಿ ತಾಲೂಕಿನ ವಿಠಲಾಪುರದಲ್ಲಿ ಮಗುವಿಗೆ ಜ್ವರ ಬಂದಿದೆ ಎಂದು ಪೋಷಕರು ಊದುಬತ್ತಿಯಿಂದ ಸುಟ್ಟಿದ್ದು, ಇದರಿಂದ ಮಗು ಸಾವನ್ನಪ್ಪಿರುವ ಘಟನೆ ಮಾಸುವ ಮುನ್ನವೇ ಅಂತಹದ್ದೇ 18 ಪ್ರಕರಣಗಳು ಬೆಳಕಿಗೆ ಬಂದಿವೆ.
ಕೊಪ್ಪಳ (ಏ.12): ಜಿಲ್ಲೆಯ ಕನಕಗಿರಿ ತಾಲೂಕಿನ ವಿಠಲಾಪುರದಲ್ಲಿ ಮಗುವಿಗೆ ಜ್ವರ ಬಂದಿದೆ ಎಂದು ಪೋಷಕರು ಊದುಬತ್ತಿಯಿಂದ ಸುಟ್ಟಿದ್ದು, ಇದರಿಂದ ಮಗು ಸಾವನ್ನಪ್ಪಿರುವ ಘಟನೆ ಮಾಸುವ ಮುನ್ನವೇ ಅಂತಹದ್ದೇ 18 ಪ್ರಕರಣಗಳು ಬೆಳಕಿಗೆ ಬಂದಿವೆ. ಕನಕಗಿರಿ ತಾಲೂಕಿನ ವಿಠಲಾಪುರದಲ್ಲಿ 7 ತಿಂಗಳ ಮಗುವಿಗೆ ಜ್ವರ ಕಡಿಮೆಯಾಗಲಿಲ್ಲಎಂದು ಮಗುವಿನ ತಾಯಿ ಡಿ.4 ರಂದು ಊದುಬತ್ತಿಯಿಂದ ಸುಟ್ಟಿದ್ದಳು. ಬಳಿಕ ಮಗುವಿಗೆ ಚಿಕಿತ್ಸೆ ಕೊಡಿಸಲು ಗಂಗಾವತಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಮಗು ಚಿಕಿತ್ಸೆಫಲಿಸದೆ ಮೃತಪಟ್ಟಿತ್ತು. ಫೆ.2ರಂದು ನಡೆದ ಶಿಶು ಮರಣ ತಡೆವ ಸಭೆಯಲ್ಲಿ ಈ ವಿಷಯ ಚರ್ಚೆಗೆ ಬಂದಿತು.
ಇದನ್ನು ಗಂಭೀರವಾಗಿ ಪರಿಗಣಿಸಿದ್ದ ಜಿಲ್ಲಾಧಿಕಾರಿನಲಿನ್ ಅತುಲ್, ಪಾಲಕರ ವಿರುದ್ಧ ಪ್ರಕರಣ ದಾಖಲಿಸುವಂತೆ ಸೂಚಿಸಿದ ಮೇಲೆ ಕನಕಗಿರಿ ಠಾಣೆಯಲ್ಲಿ ಎಫ್‌ಐಆರ್‌ದಾಖಲಿಸಲಾಗಿತ್ತು. ಈ ಸಂಬಂಧ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳು ಆಸ್ಪತ್ರೆಯಲ್ಲಿ ಮಕ್ಕಳು ಗಾಯಗೊಂಡು ಚಿಕಿತ್ಸೆಗೆ ದಾಖಲಾಗಿರುವ ಪ್ರಕರಣಗಳನ್ನು ಪತ್ತೆ ಮಾಡಿದಾಗ, ಜ್ವರ ಬಂದ ಮಕ್ಕಳಿಗೆ ಪೋಷಕರು ಊದುಬತ್ತಿಯಿಂದ ಸುಟ್ಟಿರುವುದು ಗೊತ್ತಾಗಿದೆ. ಈ ಕುರಿತು ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳಿಗೆ ಕ್ರಮವಹಿಸುವಂತೆ ಸೂಚಿಸಲಾಗಿದೆ. ಜಿಲ್ಲಾಧಿಕಾರಿ ಈ ಮಕ್ಕಳ ಬಗ್ಗೆ ನಿಗಾವಹಿಸಲು ಮತ್ತು ಪ್ರಕರಣ ದಾಖಲಿಸಲು ಸೂಚಿಸಿದ್ದಾರೆ.
ಮಕ್ಕಳಿಗೆ ವಿಷ ಉಣಿಸಿ ತಾಯಿಯಿಂದ ಆತ್ಮಹತ್ಯೆ ಯತ್ನ: ನವಲಗುಂದ ತಾಲೂಕಿನ ಯಮನೂರು ಜಾತ್ರೆಗೆ ಬಂದಿದ್ದ ಮಹಿಳೆಯೊಬ್ಬಳು ತನ್ನಿಬ್ಬರು ಮಕ್ಕಳಿಗೆ ವಿಷ ಉಣಿಸಿ ತಾನೂ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಶುಕ್ರವಾರ ನಡೆದಿದೆ. ಕೊಪ್ಪಳ ಜಿಲ್ಲೆಯ ಗೊಂಡಬಾಳ ಗ್ರಾಮದ ಮಾಲಾ (32) ಎಂಬವಳೇ ತನ್ನ ಇಬ್ಬರು ಗಂಡು ಮಕ್ಕಳಿಗೆ ವಿಷ ಹಾಕಿದ ಮಹಿಳೆ. ವಿಷ ಸೇವನೆಯಿಂದ ಅಸ್ವಸ್ಥಗೊಂಡು ಮೂವರನ್ನು ಕೆಎಂಸಿಆರ್‌ಐ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ತನ್ನೆರಡು ಮಕ್ಕಳ ಜತೆ ಯಮನೂರು ಗ್ರಾಮದ ಚಾಂಗದೇವ ಜಾತ್ರೆಗೆ ಆಗಮಿಸಿದ್ದ ಮಹಿಳೆ, ದೇವರ ದರ್ಶನ ಪಡೆದು ಸಂಜೆ ಅನ್ನದಲ್ಲಿ ಕ್ರಿಮಿನಾಶಕ ಬೆರೆಸಿ ಮಕ್ಕಳಿಗೆ ನೀಡಿದ್ದಲ್ಲದೇ ತಾನೂ ವಿಷ ಸೇವಿಸಿದ್ದಾಳೆ.
ಬಾಬಾಸಾಹೇಬರ ನಿಪ್ಪಾಣಿ ಭೇಟಿಗೆ 100 ಸಂಭ್ರಮ: ಆರ್.ಅಶೋಕ್ ಲೇಖನ
ಇದರಿಂದ ಅಸ್ವಸ್ಥಗೊಂಡು ಒದ್ದಾಡುತ್ತಿದ್ದಾಗ ಸ್ಥಳೀಯರು ಗಮನಿಸಿ ಕೇಳಿದಾಗ ಮಕ್ಕಳಿಗೆ ವಿಷ ನೀಡಿ ತಾನೂ ಕ್ರಿಮಿನಾಶಕ ಸೇವಿಸಿರುವುದನ್ನು ಹೇಳಿದ್ದಾಳೆ. ಕೂಡಲೇ ಸ್ಥಳೀಯರು ಆ್ಯಂಬುಲೆನ್ಸ್‌ಗೆ ಕರೆ ಮಾಡಿ ಮಹಿಳೆಯನ್ನು ಹಾಗೂ ಮಕ್ಕಳನ್ನು ಹುಬ್ಬಳ್ಳಿಯ ಕೆಎಂಸಿಆರ್‌ಐ ಆಸ್ಪತ್ರೆಗೆ ರವಾನಿಸಿದ್ದಾರೆ. ಸದ್ಯ ಮೂವರಿಗೂ ತುರ್ತು ಚಿಕಿತ್ಸಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮಹಿಳೆ ಯಾವ ಕಾರಣಕ್ಕೆ ಹೀಗೆ ಮಾಡಿದ್ದಾಳೆ ಎಂಬುದು ಗೊತ್ತಾಗಿಲ್ಲ. ನವಲಗುಂದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.