
ಗದಗ(ಏ.15): ಸಂತೋಷ್ ಪಾಟೀಲ್(Santosh Patil) ಕುಟುಂಬಕ್ಕೆ ಪರಿಹಾರ, ಪತ್ನಿಗೆ ಸರ್ಕಾರಿ ನೌಕರಿ ಕೊಡುವ ಬಗ್ಗೆ ಬೆಂಗಳೂರಿಗೆ ಹೋಗಿ ಚಿಂತನೆ ನಡೆಸುತ್ತೇವೆ ಅಂತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(Basavaraj Bommai) ಹೇಳಿದ್ದಾರೆ.
ಇಂದು(ಶುಕ್ರವಾರ) ತೋಂಟದಾರ್ಯ ಮಠದಲ್ಲಿನ ಲಿಂಗೈಕ್ಯ ತೋಂಟದ ಸಿದ್ದಲಿಂಗ ಮಹಾಸ್ವಾಮಿ ಐಕ್ಯ ಮಂಟಪ ಕಟ್ಟಡ ಉದ್ಘಾಟನೆ ಸೇರಿದಂತೆ ವಿವಿಧ ಕಾರ್ಯಕ್ರಮಗಳಲ್ಲಿ ಭಗಿಯಾಗಲು ಗದಗ(Gadag) ನಗರಕ್ಕೆ ಆಗಮಿಸಿದ್ದಾರೆ. ಇದೇ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಂತೋಷ್ ಕುಟುಂಬಕ್ಕೆ ಪರಿಹಾರ ನೀಡುವ ಬಗ್ಗೆ ಚಿಂತಿಸುವುದಾಗಿ ತಿಳಿಸಿದ್ದಾರೆ.
Santosh Patil Suicide Case: ಈಶ್ವರಪ್ಪ ರಾಜೀನಾಮೆ: ಕಾಂಗ್ರೆಸ್-ಬಿಜೆಪಿ ಮುಂದಿನ ನಡೆ ಏನು?
ಸಂತೋಷ್ ಕುಟುಂಬಕ್ಕೆ 2 ಕೋಟಿ ಪರಿಹಾರ(Compensation) ನೀಡಬೇಕು ಜೊತೆಗೆ ಕಾಮಗಾರಿಯಾಗಿರುವ ಹಣವನ್ನ ಕೂಡಲೇ ಬಿಡುಗಡೆ ಮಾಡಬೇಕು ಅಂತಾ ಬೇಡಿಕೆ ಇಟ್ಟಿತ್ತು. ಈ ಬಗ್ಗೆ ರಿಯಾಕ್ಷನ್ ನೀಡಿದ್ದ ಸಚಿವ ಗೋವಿಂದ ಕಾರಜೋಳ, ಪರಿಹಾರ ನೀಡುವ ವಿಚಾರ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜೊತೆ ಚರ್ಚಿಸುವುದಾಗಿ ಹೇಳಿದ್ದರು.
ಸಂತೋಷ್ ಪತ್ನಿಗೆ ಸರ್ಕಾರಿ ನೌಕರಿ(Government Job) ನೀಡಬೇಕು ಅನ್ನೋ ಬಗ್ಗೆಯೂ ಚರ್ಚೆಗಳು ನಡೆದಿದ್ದವು. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಿಎಂ ಬೊಮ್ಮಾಯಿ ಪರಿಹಾರದ ಬಗ್ಗೆ ಯೋಚಿಸುವುದಾಗಿ ಹೇಳಿದ್ದಾರೆ.
ಇದೇ ವೇಳೆ ಈಶ್ವರಪ್ಪ ಅವರ ಬಗ್ಗೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ ಅವರು, ಈಶ್ವರಪ್ಪ(KS Eshwarappa) ಅವರನ್ನ ಬಂಧಿಸುವುದು ಬಿಡುವುದು ತನಿಖಾಧಿಕಾರಿಗಳ ವಿವೇಚನೆಗೆ ಬಿಟ್ಟದ್ದು ಅಂತ ಹೇಳುವ ಮೂಲಕ ಈಶ್ವರಪ್ಪ ಅವರ ಬಂಧನಕ್ಕೆ ಪಟ್ಟು ಹಿಡಿದಿರುವ ಕಾಂಗ್ರೆಸ್(Congress) ನಾಯಕರಿಗೆ ಚಾಟಿ ಬೀಸಿದ್ದಾರೆ.
ಈಶ್ವರಪ್ಪ ಬಂಧನದ ಬಗ್ಗೆ ತನಿಖಾಧಿಕಾರಿಗಳು ತೀರ್ಮಾನಿಸುತ್ತಾರೆ. ಈ ಹಿಂದೆ ಡಿವೈಎಎಸ್‌ಪಿ ಗಣಪತಿ ಆತ್ಮಹತ್ಯೆ ಕೇಸ್‌ನಲ್ಲಿ ಕೆ.ಜೆ.ಜಾರ್ಜ್(KH George) ಅವರನ್ನು ಬಂಧಿಸಲಿಲ್ಲ. ಕರ್ನಾಟಕ ಪೊಲೀಸ್(Police) ಆಗಲಿ, ಸಿಬಿಐ ಅಧಿಕಾರಿಗಳು ಜಾರ್ಚ್ ಅವರನ್ನ ಬಂಧಿಸಿರಲಿಲ್ಲ. ಕಾಂಗ್ರೆಸ್‌ನವರಿಗೆ ಕೆ.ಎಸ್.ಈಶ್ವರಪ್ಪ ಅವರ ರಾಜೀನಾಮೆ ಕೇಳುವ ಯಾವ ನೈತಿಕತೆ ಇದೆ. ಪ್ರಕರಣದ ಸಂಪೂರ್ಣ ತನಿಖೆ ಆಗುವವರೆಗೂ ಸುಮ್ಮನಿರಬೇಕು, ಸತ್ಯ ಹೊರಬಲಿದೆ ಅಂತ ಹೇಳಿದ್ದಾರೆ.
Santosh Suicide Case: ಈಶ್ವರಪ್ಪಗೆ 1 ದಿನ ಕಾಲಾವಕಾಶ ಸಿಕ್ಕಿದ್ಹೇಗೆ?
ಕೆ.ಎಸ್.ಈಶ್ವರಪ್ಪ ಅವರು ಸಚಿವ ಸ್ಥಾನಕ್ಕೆ ಎರಡು ದಿನನಗಳ ಹಿಂದೆಯೇ ರಾಜೀನಾಮೆ ಸಲ್ಲಿಸಲು ನಿರ್ಧರಿಸಿದ್ದರು. ಆದರೆ, ಸಮಾಜದ, ಪಕ್ಷದ ಹಿರಿಯರಿಗೆ ಇರಿಸು ಮುರಿಸು ಆಗಬಾರದು ಎಂಬ ಕಾರಣಕ್ಕೆ ರಾಜೀನಾಮೆ ಕೊಟ್ಟಿರಲಿಲ್ಲ ಎಂದು ತಿಳಿಸಿದ್ದಾರೆ.
ಗದಗ ಜಿಲ್ಲಾ ಪಂಚಾಯ್ತಿ ಸಭಾಭವನದಲ್ಲಿ ಇತ್ತೀಚೆಗೆ ನಡೆದ ಕೆಡಿಪಿ ಸಭೆಯಲ್ಲಿ ಸಚಿವ ಬಿಸಿ ಪಾಟೀಲ, ಶಾಸಕ ಕಳಕಪ್ಪ ಬಂಡಿ ಮಧ್ಯೆ ನಡೆದ ವಾಗ್ವಾದ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಸಿಎಂ ಬೊಮ್ಮಾಯಿ, ಜನರ ಒಳಿತಿಗಾಗಿ ಹಲವಾರು ಚರ್ಚೆಗಳು ಆಗುತ್ತವೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಇಂತಹ ನೈಜ ಚರ್ಚೆಗಳು ಸಹಜ ಎಂದು ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ