
ತುಮಕೂರು (ಜ.30): ರಾಜ್ಯ ಸರ್ಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ. ಈ ಯೋಜನೆಗಳ ಜಾರಿಯಿಂದಾಗಿ ಸರ್ಕಾರ ಆರ್ಥಿಕವಾಗಿ ದಿವಾಳಿಯೂ ಆಗಿಲ್ಲ. 2024-25ನೇ ಸಾಲಿನಲ್ಲಿ 3.80 ಲಕ್ಷ ಕೋಟಿ ರು. ಬಜೆಟ್ ಮಂಡಿಸಲು ಯೋಜನೆ ರೂಪಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ತುಮಕೂರಿನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿ, ಕಳೆದ ವರ್ಷ 3.27 ಲಕ್ಷ ಕೋಟಿ ರು. ಬಜೆಟ್ ಮಂಡನೆ ಮಾಡಿದ್ದೆ. ಈ ಬಾರಿ 3.80 ಲಕ್ಷ ಕೋಟಿ ರು. ಬಜೆಟ್ ಮಂಡಿಸುತ್ತೇನೆ ಎಂದರು.ಇಷ್ಟು ದೊಡ್ಡ ಗಾತ್ರದ ಬಜೆಟ್ ಮಂಡನೆ ಮಾಡುತ್ತೇವೆಂದರೆ ರಾಜ್ಯದಲ್ಲಿ ಅಭಿವೃದ್ಧಿ ಕೆಲಸಗಳು ಆಗುತ್ತಿವೆ ಎಂದರ್ಥ ಎಂದು ಹೇಳಿದರು.
ಬಿಬಿಎಂಪಿ 2024-25ನೇ ಸಾಲಿನ ಬಜೆಟ್ ಸಿದ್ಧತೆ; ಈಗ್ಲಾದ್ರೂ ನೆರವೇರುತ್ತಾ ವಿವಿಧ ಇಲಾಖೆಗಳ ಸಮನ್ವಯತೆ!
ಸರ್ಕಾರ ಅಧಿಕಾರಕ್ಕೆ ಬಂದ 8 ತಿಂಗಳಲ್ಲಿ ಜಾರಿಗೆ ತಂದ ಐದು ಗ್ಯಾರಂಟಿ ಯೋಜನೆಗಳಾದ ಶಕ್ತಿ, ಗೃಹಲಕ್ಷ್ಮಿ, ಗೃಹಜ್ಯೋತಿ, ಅನ್ನಭಾಗ್ಯ ಹಾಗೂ ಯುವನಿಧಿಯಿಂದ ಸರ್ಕಾರದ ಖಜಾನೆ ಖಾಲಿಯಾಗಿದೆ, ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದೆ ಎನ್ನುವವರಿಗೆ ತುಮಕೂರಲ್ಲಿ ಆಯೋಜಿಸಿರುವ ಇಂಥ ಕಾರ್ಯಕ್ರಮಗಳೇ ಉತ್ತರವಾಗಲಿವೆ ಎಂದು ತಿಳಿಸಿದರು.
ಗ್ಯಾರಂಟಿ ಯೋಜನೆಗಳ ಜಾರಿಯಿಂದ ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಕ್ರಮಗಳು ನಿಂತಿಲ್ಲ. ಹೊಸ ಹೊಸ ಅಭಿವೃದ್ಧಿ ಕಾರ್ಯಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದೆ. ಬೆಲೆ ಏರಿಕೆಯಿಂದಾಗಿ ಎದುರಾಗಿದ್ದ ಸಂಕಷ್ಟವನ್ನು ಕಡಿಮೆ ಮಾಡುವ ಸಲುವಾಗಿ ಈ ಗ್ಯಾರಂಟಿ ಯೋಜನೆಗಳ ಮೂಲಕ ನಾಡಿನ ಜನರ ಕೊಳ್ಳುವ ಶಕ್ತಿ ಹೆಚ್ಚಿಸಲಾಗಿದೆ ಎಂದು ತಿಳಿಸಿದರು.
ಫೆ.16ರ ಶಿಕ್ಷಕರ ಕ್ಷೇತ್ರಕ್ಕೆ ಚುನಾವಣೆ ದಿನವೇ ರಾಜ್ಯ ಬಜೆಟ್ ಮಂಡನೆ: ಸರ್ಕಾರದ ಮರ್ಮವನ್ನರಿತ ಬಿಜೆಪಿ ನಾಯಕರು!
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ