ದೇಶದಲ್ಲಿ ಸದ್ಯ ಕಾಂಗ್ರೆಸ್ ಪರ ವಾತಾವರಣ ಇದೆ: ಮಾಜಿ ಕ್ರಿಕೆಟಿಗ, ಕಾಂಗ್ರೆಸ್ ಮುಖಂಡ ಮಹಮ್ಮದ್ ಅಜರುದ್ದೀನ್

By Ravi Janekal  |  First Published Oct 17, 2023, 11:12 AM IST

 ಕರ್ನಾಟಕದ ಗ್ಯಾರಂಟಿ ಯೋಜನೆ ತೆಲಂಗಾಣದಲ್ಲಿ ಮುಂದುವರಿಸಿದ್ದಾರೆಂಬ ವಿಚಾರಕ್ಕೆ ಪ್ರತಿಕ್ರಿಯಿಸಿ ಅಜರುದ್ದೀನ್, ತೆಲಂಗಾಣ ಗ್ಯಾರಂಟಿ ಯೋಜನೆಗೂ ಕರ್ನಾಟಕದ ಯೋಜನೆಗೂ ಎರಡಲ್ಲೂ ಬಹಳಷ್ಟು ವ್ಯತ್ಯಾಸವಿದೆ. ಎರಡನ್ನು ಹೋಲಿಕೆ ಮಾಡಲು ಆಗುವುದಿಲ್ಲ ಎಂದು ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ, ಕಾಂಗ್ರೆಸ್ ಮುಖಂಡ ಮಹಮ್ಮದ್ ಅಜರುದ್ದೀನ್ ಹೇಳಿದರು.


ಧಾರವಾಡ (ಅ.17) : ತೆಲಂಗಾಣದಲ್ಲಿ ಈ ಸಲ ನಾವೇ ಸರ್ಕಾರ ರಚನೆ ಮಾಡುತ್ತೇವೆ ಎಂದು ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ, ಕಾಂಗ್ರೆಸ್ ಮುಖಂಡ ಮಹಮ್ಮದ್ ಅಜರುದ್ದೀನ್ ಹೇಳಿದರು.

ಧಾರವಾಡದಲ್ಲಿ ಇಂದು ಮಾಧ್ಯಮ ಪ್ರತಿನಿಧಿಯೊಂದಿಗೆ ಮಾತನಾಡಿದ ಅವರು, ನಮ್ಮ ಪ್ರಯತ್ನ ಹೆಚ್ಚು ವಿಶ್ವಾಸ ಮೂಡಿಸಿದೆ ಹೀಗಾಗಿ ಈ ಬಾರಿ ಸರ್ಕಾರ ರಚನೆ ಮಾಡುವ ನಿಟ್ಟಿನಲ್ಲಿ  ನಮ್ಮ ಪ್ರಯತ್ನ ನಡೆದಿದೆ. ದೇಶದಲ್ಲಿ ಸದ್ಯ ಕಾಂಗ್ರೆಸ್ ಪರವಾದ ವಾತಾವರಣ ಇದೆ ಎಂದರು.

Tap to resize

Latest Videos

 

ಐಟಿ ರೇಡ್ ವೇಳೆ ಸಿಕ್ಕ ಹಣ ಕಾಂಗ್ರೆಸ್ಸಿನದು ಅನ್ನೋಕೆ ಏನಿದೆ ಸಾಕ್ಷ್ಯ? : ಜಗದೀಶ್ ಶೆಟ್ಟರ್

 ಕರ್ನಾಟಕದ ಗ್ಯಾರಂಟಿ ಯೋಜನೆ ತೆಲಂಗಾಣದಲ್ಲಿ ಮುಂದುವರಿಸಿದ್ದಾರೆಂಬ ವಿಚಾರಕ್ಕೆ ಪ್ರತಿಕ್ರಿಯಿಸಿ ಅಜರುದ್ದೀನ್, ತೆಲಂಗಾಣ ಗ್ಯಾರಂಟಿ ಯೋಜನೆಗೂ ಕರ್ನಾಟಕದ ಯೋಜನೆಗೂ ಎರಡಲ್ಲೂ ಬಹಳಷ್ಟು ವ್ಯತ್ಯಾಸವಿದೆ. ಎರಡನ್ನು ಹೋಲಿಕೆ ಮಾಡಲು ಆಗುವುದಿಲ್ಲ. ಕರ್ನಾಟಕದಲ್ಲಿ ಒಳ್ಳೆ ಯೋಜನೆ ಕೊಟ್ಟಿದ್ದಾರೆ. ಹೀಗಾಗಿ ಇಲ್ಲಿನ ಜನ ಕಾಂಗ್ರೆಸ್‌ಗೆ ಅವಕಾಶ ಕೊಟ್ಟಿದೆ. ಕರ್ನಾಟಕದಲ್ಲಿ ಅಭಿವೃದ್ಧಿ ಕಾರ್ಯಗಳು ಚೆನ್ನಾಗಿ ಆಗುತ್ತಿವೆ ಎಂದರು.

ರಾಜ್ಯಕ್ಕೆ ಕಾಂಗ್ರೆಸ್‌ ಸರ್ಕಾರದ 6ನೇ ಗ್ಯಾರಂಟಿ ರೈತರ ಆತ್ಮಹತ್ಯೆ: ಜಿ.ಟಿ.ದೇವೇಗೌಡ

ವಿಶ್ವಕಪ್ ಕ್ರಿಕೆಟ್ ಹಿನ್ನೆಲೆ ವಿಚಾರ ಸಂಬಂಧ ಮಾತನಾಡಿದ ಭಾರತ ತಂಡದ ಮಾಜಿ ನಾಯಕ ಅಜರುದ್ದೀನ್, ಭಾರತ ತಂಡವೇ ವಿಶ್ವಕಪ್ ಗೆಲ್ಲುತ್ತದೆ. ನಮ್ಮದು ಒಳ್ಳೆಯ ತಂಡ ಇದೆ. ಅನುಭವಿ ಕ್ಯಾಪ್ಟನ್ ಇದ್ದಾರೆ. ಹೀಗಾಗಿ ಈ ಬಾರಿ ನಮ್ಮ ತಂಡವೇ ವಿಶ್ವಕಪ್ ಗೆಲ್ಲಲಿದೆ ಎಂದರು. ಇದೇ ವೇಳೆ ಪಾಕ್ ಆಟಗಾರರು ಡ್ರೆಸಿಂಗ್ ರೂಂಗೆ ಹೋಗುವಾಗ ಜೈ ಶ್ರೀರಾಮ್ ಎಂದ ವಿಚಾರ ಸಂಬಂಧ ಕೇಳಿದೆ ಪ್ರಶ್ನೆಗೆ, ಈ ತರಹದ ಘಟನೆಗಳು ಪುನರಾವರ್ತನೆ ಆಗುತ್ತಲೇ ಇವೆ ಇಂಥ ವಿಚಾರಗಳಿಗೆ ನಾನು ಪ್ರತಿಕ್ರಿಯಿಸಲು ಇಷ್ಟಪಡುವುದಿಲ್ಲ ಎಂದರು.

 

click me!