ವಿಶ್ವವಿಖ್ಯಾತ ಮೈಸೂರು ದಸರಾ ಆಚರಣೆ ಹೇಗೆ? ಸಭೆಯಲ್ಲಿ ಮಹತ್ವದ ತೀರ್ಮಾನ

By Suvarna NewsFirst Published Sep 3, 2021, 6:11 PM IST
Highlights

* ಈ ಬಾರಿಯೂ ಸರಳ ಮೈಸೂರು ದಸರಾ ಆಚರಣೆ
* ದಸರಾ ಆಚರಣೆ ಕುರಿತ ಉನ್ನತ ಮಟ್ಟದ ಸಮಿತಿ ಸಭೆಯಲ್ಲಿ ತೀರ್ಮಾನ
* ಅಕ್ಟೋಬರ್ 15ರಂದು ಮಧ್ಯಾಹ್ನ ಜಂಬೂ ಸವಾರಿ

ಬೆಂಗಳೂರು, (ಸೆ.03): ಕೋವಿಡ್ ಹಿನ್ನೆಲೆಯಲ್ಲಿ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವವನ್ನು ಕಳೆದ ವರ್ಷದಂತೆಯೇ ಈ ವರ್ಷವೂ ಸಹ ಸರಳವಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.

ಇಂದು (ಸೆ.03) ನಡೆದ ದಸರಾ ಆಚರಣೆ ಕುರಿತ ಉನ್ನತ ಮಟ್ಟದ ಸಮಿತಿ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾಂಪ್ರದಾಯಿಕ ಸರಳ ದಸರಾ ಆಚರಣೆಯ ತೀರ್ಮಾನವಾಗಿದೆ. ಅಕ್ಟೋಬರ್‌ 7ರಂದು ದಸರಾ ಉದ್ಘಾಟನೆಯಾಗಲಿದ್ದು, ಅಕ್ಟೋಬರ್ 15ರಂದು ಮಧ್ಯಾಹ್ನ ಜಂಬೂ ಸವಾರಿ ನಡೆಯಲಿದೆ. ಕಳೆದ ಬಾರಿಯಂತೆ ಅರಮನೆ ಒಳಗಡಯೇ ಜಂಬೂಸವಾರಿ ನಡೆಯಲಿದೆ ಎಂದು ತಿಳಿಸಿದರು.

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಆಚರಣೆ ಹೇಗಿರಲಿದೆ : ಸಿಎಂ ಸಭೆ

ಕಳೆದ ಬಾರಿ ದಸರಾ ಉದ್ಘಾಟನೆಗೆ 150 ಜನರಿಗೆ ಅವಕಾಶವಿತ್ತು. ಜಂಬೂ ಸವಾರಿಗೆ 200 ಜನರಿಗೆ ಮಾತ್ರ ಅವಕಾಶ ನೀಡಲಾಗಿತ್ತು. ಇನ್ನೂ ಒಂದು ಹಂತದ ಸಭೆ ನಡೆಸಿ ಈ ಕುರಿತು ನಿರ್ಧರಿಸುವುದಾಗಿಯೂ ಹೇಳಿದರು.

ಇನ್ನು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್‌ಟಿ ಸೋಮಶೇಖರ್ ಮಾತನಾಡಿ, ಮೈಸೂರು ದಸರಾಗೆ 6 ಕೋಟಿ ನೀಡಲು ಸಭಯಲ್ಲಿ ನಿರ್ಧಾರ ಮಾಡಲಾಗಿದ್ದು, ಕಳದ ಬಾರಿ ಯಾವ ರೀತಿ ದಸರಾ ಆಗಿತ್ತೋ ಅದೇ ರೀತಿ ಆಚರಣೆ ಮಾಡಲಾಗುತ್ತಿದೆ ಎಂದರು.

ಈ ಬಾರಿ ಯಾರಿಂದ ದಸರಾ ಉದ್ಘಾಟನೆ ಮಾಡಿಸಬೇಕು ಅನ್ನೋದನ್ನ ಮುಖ್ಯಮಂತ್ರಿಗಳು ನಿರ್ಧಾರ ಮಾಡ್ತಾರೆ.   ಸೆಪ್ಟೆಂಬರ್ 20ರ ಬಳಿಕ ಕೊವಿಡ್ ಸ್ಥಿತಿಗತಿ ತಿಳಿದುಕೊಂಡು ಅನುಮತಿ ನೀಡುವ ಬಗ್ಗೆ ಪ್ರತ್ಯೇಕ ನಿರ್ಧಾರ ಕೈಗೊಳ್ಳುವುದಾಗಿ ಮಾಹಿತಿ ನೀಡಿದರು.

 

ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಬಸವರಾಜ ಎಸ್.ಬೊಮ್ಮಾಯಿ ರವರ ಅಧ್ಯಕ್ಷತೆಯಲ್ಲಿ ನಡೆದ "ನಾಡಹಬ್ಬ ಮೈಸೂರು ದಸರಾ ಮಹೋತ್ಸವ - 2021" ಉನ್ನತ ಮಟ್ಟದ ಸಮಿತಿ ಸಭೆಯಲ್ಲಿ ಭಾಗವಹಿಸಲಾಯಿತು. pic.twitter.com/nB3lTEM9Go

— Pratap Simha (@mepratap)
click me!